AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru: ಮಂಗಳೂರಿನ ವಿವಿಧಡೆ ಈ ದಿನದಂದು ವಿದ್ಯುತ್, ನೀರು ವ್ಯತ್ಯಯ

Water And Power Cut In Mangaluru: ಮಂಗಳೂರಿನ ವಿವಿಧೆಡೆ ನಾಳೆ ಅಂದರೆ ಮೇ 29ರಂದು ವಿದ್ಯುತ್ ಹಾಗೂ ಮೇ 30ರಂದು ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಈ ಬಗ್ಗೆ ಮೆಸ್ಕಾಂ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಪ್ರಕಟಣೆ ಹೊರಡಿಸಿದೆ. ಹಾಗಾದ್ರೆ, ಮಂಗಳೂರಿನ ಯಾವೆಲ್ಲಾ ಭಾಗಗಳಲ್ಲಿ ನೀರು ಹಾಗೂ ವಿದ್ಯುತ್ ಇರುವುದಿರಲ್ಲ ಎನ್ನುವ ವಿವರ ಇಲ್ಲಿದೆ.

Mangaluru: ಮಂಗಳೂರಿನ ವಿವಿಧಡೆ ಈ ದಿನದಂದು ವಿದ್ಯುತ್, ನೀರು ವ್ಯತ್ಯಯ
ಪ್ರಾತಿನಿಧಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on: May 28, 2024 | 10:08 PM

Share

ಮಂಗಳೂರು, (ಮೇ 28): ಮಂಗಳೂರು ನಗರ( Mangaluru) ಮತ್ತು ಹೊರವಲಯದ ಕೆಲವು ಪ್ರದೇಶಗಳಲ್ಲಿ ನಾಳೆ ಅಂದರೆ ಮೇ 29ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಮರೋಳಿ, ಜಯನಗರ, ವಸಂತನಗರ, ಸೂಟರ್‌ಪೇಟೆ, ಮೀನುಗಾರಿಕಾ ಕಾಲೇಜು, ವೆಲೆನ್ಸಿಯಾ, ಜೆಪ್ಪು ಮಾರುಕಟ್ಟೆ, ನಂದಿಗುಡ್ಡ, ನಾಟೆಕಲ್, ಕೆ ಸಿ ರಸ್ತೆ, ಪಾವೂರು, ಉಳಿಯ, ಇನ್ನೋಳಿ, ಉಳ್ಳಾಲ, ಕೋಟೆಪುರ, ತೊಕ್ಕೊಟ್ಟು, ಸೋಮೇಶ್ವರ, ಕುತ್ತಾರ್, ಕೋಟೆಕಾರ, ಬೀರಿ, ತಾಳಪಾಡಿ. ರಸ್ತೆ, ಕಲ್ಲಾಪು, ಅಡ್ಕ, ಮಾಡ್ಯಾರ್, ಕೊಣಾಜೆ, ಅಸೈಗೋಳಿ, ದೇರಳಕಟ್ಟೆ ಮತ್ತು ಬೋಳಿಯಾರ್ ಪ್ರದೇಶಗಳಲ್ಲಿ ನಾಳೆ(ಬುಧವಾರ) ಬೆಳಗ್ಗೆಯಿಂದ ಸಂಜೆ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಈ ಬಗ್ಗೆ ಮೆಸ್ಕಾ೦ ತಿಳಿಸಿದೆ.

ಇನ್ನು ಮೇ 30 ರಂದು ಬೆಳಗ್ಗೆ 6 ಗಂಟೆಯಿಂದ 24 ಗಂಟೆಗಳ ಕಾಲ ಮಂಗಳೂರಿನ ಕೆಲವು ಪ್ರದೇಶಗಳಿಗೆ ನೀರು ಸರಬರಾಜು ಇರುವುದಿಲ್ಲ. ಕೊಟ್ಟಾರ ಚೌಕಿ ಮತ್ತು ಗೋಲ್ಡ್ ಫಿಂಚ್ ಸಿಟಿ ಮೈದಾನಗಳ ನಡುವೆ ನೀರು ಸರಬರಾಜು ಪೈನ್​ ಲೈನ್ ಹಾಕುತ್ತಿರುವ ಹಿನ್ನೆಲೆಯಲ್ಲಿ ​ಕೋಡಿಕಲ್, ಸುರತ್ಕಲ್, ಕಾಟಿಪಳ್ಳ, ಕೂಳೂರು, ಜಲ್ಲಿಗುಡ್ಡ, ಕುಳಾಯಿ, ಕಾನ, ಬಾಳ, ಮುಕ್ಕ ಮತ್ತು ಪಣಂಬೂರು ಪ್ರದೇಶಗಳಲ್ಲಿ ಮೇ 30 ರಂದು ಬೆಳಗ್ಗೆ 6 ಗಂಟೆಯಿಂದ 24 ಗಂಟೆಗಳ ಕಾಲ ನೀರು ಸರಬರಾಜು ಇರುವುದಿಲ್ಲ ಎಂದು ಮಂಗಳೂರು ಮಹಾನನಗರ ಪಾಲಿಕೆ ಪ್ರಕಟಣೆ ಹೊರಡಿಸಿದೆ.

ಇದನ್ನೂ ಓದಿ: ಮಂಗಳೂರಿನ ಕಂಕನಾಡಿಯ ನಡು ರಸ್ತೆಯಲ್ಲಿ ನಮಾಜ್​: ಕೇಸ್​ ಬುಕ್

ಮಳೆಗಾಲದ ಸವಾಲು ಎದುರಿಸಲು ಮೆಸ್ಕಾಂನಿಂದ ವಿಶೇಷ ಕಾರ್ಯಪಡೆ

ವಿದ್ಯುತ್‌ ಪೂರೈಕೆಗೆ ಸ೦ಬ೦ಧಿಸಿದ೦ತೆ ಮಳೆಗಾಲದ ಸ೦ಭಾವ್ಯ ಸವಾಲುಗಳನ್ನು ಎದುರಿಸಲು ಮೆಸ್ಕಾ೦ ಸನ್ನದ್ದವಾಗಿದ್ದು, ಸುಗಮ ಮತ್ತು ಸುಲಲಿತ ಸೇವೆಗೆ ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ವಿಶೇಷ ಕಾಯ೯ಪಡೆ ರಚಿಸಲಾಗಿದೆ.

ಈ ಕುರಿತು ಮಂಗಳೂರು ವಿದ್ಯಚ್ಛಕ್ತಿ ಸಬರಾಜು ಕಂಪನಿ (ಮೆಸ್ಕಾಂ) ವ್ಯವಸ್ಥಾಪಕ ನಿದೇ೯ಶಕರಾದ ಡಿ.ಪದ್ಮಾವತಿ ಪತ್ರಿಕಾ ಪ್ರಕಟಣೆ ಹೊರಡಿಸಿರು ಪದ್ಮಾವತಿ ಅವರು, ವಿಭಾಗವಾರು ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸಲು ಮೆಸ್ಕಾ೦ ವ್ಯಾಪ್ತಿಯ 4 ಜಿಲ್ಲೆಗಳಿಗೆ ಒಟ್ಟು 800 ಮ೦ದಿಯನ್ನೊಳಗೊಂಡ ವಿಶೇಷ ಕಾಯ೯ಪಡೆ ರಚಿಸಲಾಗಿದೆ. ತುರ್ತು ಸಂದರ್ಭದಲ್ಲಿ ಬಳಸಲು ಒಟ್ಟು 53 ವಾಹನಗಳನ್ನು ಹೆಚ್ಚುವರಿಯಾಗಿ ವ್ಯವಸ್ಥೆಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ವಿದ್ಯುತ್‌ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ, ಸರಬರಾಜು ಮಾಗ೯ದಲ್ಲಿ ಅಪಾಯ, ಅವಘಡಗಳಾದಲ್ಲಿ ಸ೦ಪಕಿ೯ಸಬೇಕಾದ ದೂರವಾಣಿ ಸ೦ಖ್ಯೆಗಳನ್ನು ಈಗಾಗಲೇ ಪ್ರಕಟಿಸಲಾಗಿದೆ. ಇದಲ್ಲದೆ ಮೆಸ್ಕಾ೦ ಸಹಾಯವಾಣಿ 1912 ಅನ್ನು ಕೂಡಾ ಸ೦ಪಕಿ೯ಸಬಹುದಾಗಿದೆ ಎ೦ದು ತಿಳಿಸಿದ್ದಾರೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ರಾಜ್ಯೋತ್ಸವ ಸಂಭ್ರಮದ ನಡುವೆ ಮದ್ಯಪ್ರಿಯರ ಎಡವಟ್ಟು
ರಾಜ್ಯೋತ್ಸವ ಸಂಭ್ರಮದ ನಡುವೆ ಮದ್ಯಪ್ರಿಯರ ಎಡವಟ್ಟು
ಬಿಜೆಪಿಗೆ ವಾಪಸಾಗಲು ಯತ್ನಾಳ್ ಹಾಕಿದ್ರು 2 ಕಂಡಿಷನ್‌! ಏನದು? ಇಲ್ಲಿದೆ ನೋಡಿ
ಬಿಜೆಪಿಗೆ ವಾಪಸಾಗಲು ಯತ್ನಾಳ್ ಹಾಕಿದ್ರು 2 ಕಂಡಿಷನ್‌! ಏನದು? ಇಲ್ಲಿದೆ ನೋಡಿ
ನವೆಂಬರ್ 2 ರಿಂದ 8 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನವೆಂಬರ್ 2 ರಿಂದ 8 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸ್ಟಿಂಗ್: ಸರ್ಕಾರ ಯಾರನ್ನು ರಕ್ಷಿಸುತ್ತಿದೆ? ಪ್ರಲ್ಹಾದ್ ಜೋಶಿ ಪ್ರಶ್ನೆ
ಸ್ಟಿಂಗ್: ಸರ್ಕಾರ ಯಾರನ್ನು ರಕ್ಷಿಸುತ್ತಿದೆ? ಪ್ರಲ್ಹಾದ್ ಜೋಶಿ ಪ್ರಶ್ನೆ
ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗೆ ವಸತಿ ಸೌಲಭ್ಯ!
ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗೆ ವಸತಿ ಸೌಲಭ್ಯ!
‘ಜೈಲರ್ 2’ ಸಿನಿಮಾನಲ್ಲಿ ನಟಿಸಿರುವ ಕನ್ನಡತಿ ಯಶಸ್ವಿನಿ ದೇವಾಡಿಗ ಜೊತೆ ಮಾತು
‘ಜೈಲರ್ 2’ ಸಿನಿಮಾನಲ್ಲಿ ನಟಿಸಿರುವ ಕನ್ನಡತಿ ಯಶಸ್ವಿನಿ ದೇವಾಡಿಗ ಜೊತೆ ಮಾತು
ಕಿಚ್ಚ ಸುದೀಪ್ ಎದುರಲ್ಲೇ ಬಿಗ್ ಬಾಸ್ ಸ್ಪರ್ಧಿಗಳ ಆರೋಪ, ಪ್ರತ್ಯಾರೋಪ
ಕಿಚ್ಚ ಸುದೀಪ್ ಎದುರಲ್ಲೇ ಬಿಗ್ ಬಾಸ್ ಸ್ಪರ್ಧಿಗಳ ಆರೋಪ, ಪ್ರತ್ಯಾರೋಪ
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!