ಮಂಗಳೂರು, (ಮೇ 28): ಮಂಗಳೂರು ನಗರ( Mangaluru) ಮತ್ತು ಹೊರವಲಯದ ಕೆಲವು ಪ್ರದೇಶಗಳಲ್ಲಿ ನಾಳೆ ಅಂದರೆ ಮೇ 29ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಮರೋಳಿ, ಜಯನಗರ, ವಸಂತನಗರ, ಸೂಟರ್‌ಪೇಟೆ, ಮೀನುಗಾರಿಕಾ ಕಾಲೇಜು, ವೆಲೆನ್ಸಿಯಾ, ಜೆಪ್ಪು ಮಾರುಕಟ್ಟೆ, ನಂದಿಗುಡ್ಡ, ನಾಟೆಕಲ್, ಕೆ ಸಿ ರಸ್ತೆ, ಪಾವೂರು, ಉಳಿಯ, ಇನ್ನೋಳಿ, ಉಳ್ಳಾಲ, ಕೋಟೆಪುರ, ತೊಕ್ಕೊಟ್ಟು, ಸೋಮೇಶ್ವರ, ಕುತ್ತಾರ್, ಕೋಟೆಕಾರ, ಬೀರಿ, ತಾಳಪಾಡಿ. ರಸ್ತೆ, ಕಲ್ಲಾಪು, ಅಡ್ಕ, ಮಾಡ್ಯಾರ್, ಕೊಣಾಜೆ, ಅಸೈಗೋಳಿ, ದೇರಳಕಟ್ಟೆ ಮತ್ತು ಬೋಳಿಯಾರ್ ಪ್ರದೇಶಗಳಲ್ಲಿ ನಾಳೆ(ಬುಧವಾರ) ಬೆಳಗ್ಗೆಯಿಂದ ಸಂಜೆ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಈ ಬಗ್ಗೆ ಮೆಸ್ಕಾ೦ ತಿಳಿಸಿದೆ.
ಇನ್ನು ಮೇ 30 ರಂದು ಬೆಳಗ್ಗೆ 6 ಗಂಟೆಯಿಂದ 24 ಗಂಟೆಗಳ ಕಾಲ ಮಂಗಳೂರಿನ ಕೆಲವು ಪ್ರದೇಶಗಳಿಗೆ ನೀರು ಸರಬರಾಜು ಇರುವುದಿಲ್ಲ. ಕೊಟ್ಟಾರ ಚೌಕಿ ಮತ್ತು ಗೋಲ್ಡ್ ಫಿಂಚ್ ಸಿಟಿ ಮೈದಾನಗಳ ನಡುವೆ ನೀರು ಸರಬರಾಜು ಪೈನ್ ಲೈನ್ ಹಾಕುತ್ತಿರುವ ಹಿನ್ನೆಲೆಯಲ್ಲಿ ಕೋಡಿಕಲ್, ಸುರತ್ಕಲ್, ಕಾಟಿಪಳ್ಳ, ಕೂಳೂರು, ಜಲ್ಲಿಗುಡ್ಡ, ಕುಳಾಯಿ, ಕಾನ, ಬಾಳ, ಮುಕ್ಕ ಮತ್ತು ಪಣಂಬೂರು ಪ್ರದೇಶಗಳಲ್ಲಿ ಮೇ 30 ರಂದು ಬೆಳಗ್ಗೆ 6 ಗಂಟೆಯಿಂದ 24 ಗಂಟೆಗಳ ಕಾಲ ನೀರು ಸರಬರಾಜು ಇರುವುದಿಲ್ಲ ಎಂದು ಮಂಗಳೂರು ಮಹಾನನಗರ ಪಾಲಿಕೆ ಪ್ರಕಟಣೆ ಹೊರಡಿಸಿದೆ.
ಇದನ್ನೂ ಓದಿ: ಮಂಗಳೂರಿನ ಕಂಕನಾಡಿಯ ನಡು ರಸ್ತೆಯಲ್ಲಿ ನಮಾಜ್: ಕೇಸ್ ಬುಕ್
ವಿದ್ಯುತ್ ಪೂರೈಕೆಗೆ ಸ೦ಬ೦ಧಿಸಿದ೦ತೆ ಮಳೆಗಾಲದ ಸ೦ಭಾವ್ಯ ಸವಾಲುಗಳನ್ನು ಎದುರಿಸಲು ಮೆಸ್ಕಾ೦ ಸನ್ನದ್ದವಾಗಿದ್ದು, ಸುಗಮ ಮತ್ತು ಸುಲಲಿತ ಸೇವೆಗೆ ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ವಿಶೇಷ ಕಾಯ೯ಪಡೆ ರಚಿಸಲಾಗಿದೆ.
ಈ ಕುರಿತು ಮಂಗಳೂರು ವಿದ್ಯಚ್ಛಕ್ತಿ ಸಬರಾಜು ಕಂಪನಿ (ಮೆಸ್ಕಾಂ) ವ್ಯವಸ್ಥಾಪಕ ನಿದೇ೯ಶಕರಾದ ಡಿ.ಪದ್ಮಾವತಿ ಪತ್ರಿಕಾ ಪ್ರಕಟಣೆ ಹೊರಡಿಸಿರು ಪದ್ಮಾವತಿ ಅವರು, ವಿಭಾಗವಾರು ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸಲು ಮೆಸ್ಕಾ೦ ವ್ಯಾಪ್ತಿಯ 4 ಜಿಲ್ಲೆಗಳಿಗೆ ಒಟ್ಟು 800 ಮ೦ದಿಯನ್ನೊಳಗೊಂಡ ವಿಶೇಷ ಕಾಯ೯ಪಡೆ ರಚಿಸಲಾಗಿದೆ. ತುರ್ತು ಸಂದರ್ಭದಲ್ಲಿ ಬಳಸಲು ಒಟ್ಟು 53 ವಾಹನಗಳನ್ನು ಹೆಚ್ಚುವರಿಯಾಗಿ ವ್ಯವಸ್ಥೆಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ವಿದ್ಯುತ್ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ, ಸರಬರಾಜು ಮಾಗ೯ದಲ್ಲಿ ಅಪಾಯ, ಅವಘಡಗಳಾದಲ್ಲಿ ಸ೦ಪಕಿ೯ಸಬೇಕಾದ ದೂರವಾಣಿ ಸ೦ಖ್ಯೆಗಳನ್ನು ಈಗಾಗಲೇ ಪ್ರಕಟಿಸಲಾಗಿದೆ. ಇದಲ್ಲದೆ ಮೆಸ್ಕಾ೦ ಸಹಾಯವಾಣಿ 1912 ಅನ್ನು ಕೂಡಾ ಸ೦ಪಕಿ೯ಸಬಹುದಾಗಿದೆ ಎ೦ದು ತಿಳಿಸಿದ್ದಾರೆ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ