ಮಂಗಳೂರು ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕೈಕೊಟ್ಟ ವಿದ್ಯುತ್‌: ವಿಮಾನಗಳ ಹಾರಾಟ ಸ್ಥಗಿತ

ತಾಂತ್ರಿಕ ಕಾರಣದಿಂದಾಗಿ ಮಂಗಳೂರು ವಿಮಾನ ನಿಲ್ದಾಣದ ರನ್ ವೇನಲ್ಲಿ ವಿದ್ಯುತ್​ ಕೈ ಕೊಟ್ಟಿದ್ದು, ಏರ್ಪೋರ್ಟ್​ನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನಗಳನ್ನು ಡೈವರ್ಟ್ ಮಾಡಲಾಗಿದೆ.

ಮಂಗಳೂರು ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕೈಕೊಟ್ಟ ವಿದ್ಯುತ್‌: ವಿಮಾನಗಳ ಹಾರಾಟ ಸ್ಥಗಿತ
ಮಂಗಳೂರು ಅಂತಾರಾಷ್ಟ್ರೀಯ ಏರ್‌ಪೋರ್ಟ್‌
Follow us
ಗಂಗಾಧರ​ ಬ. ಸಾಬೋಜಿ
|

Updated on:May 28, 2023 | 9:50 PM

ಮಂಗಳೂರು: ತಾಂತ್ರಿಕ ಕಾರಣದಿಂದಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ( Mangaluru International Airport) ದ ರನ್ ವೇನಲ್ಲಿ ವಿದ್ಯುತ್​ ಕೈ ಕೊಟ್ಟಿದ್ದು, ಏರ್ಪೋರ್ಟ್​ನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನಗಳನ್ನು ಡೈವರ್ಟ್ ಮಾಡಲಾಗಿದೆ. ಪವರ್ ಸಪ್ಲೇ ಸಮಸ್ಯೆಯಿಂದ ರನ್ ವೇನಲ್ಲಿ ಕತ್ತಲು ಆವರಿಸಿದೆ. ಮುಂಬೈನಿಂದ ಆಗಮಿಸಿದ ವಿಮಾನ ಎಟಿಸಿ ಸೂಚನೆ ಹಿನ್ನೆಲೆ ಲ್ಯಾಂಡ್ ಆಗದೇ ಕೇರಳದ ಕಣ್ಣೂರಿಗೆ ವಾಪಾಸ್​ ತೆರಳಿದೆ. ತಾಂತ್ರಿಕ ಸಮಸ್ಯೆ ಸರಿಪಡಿಸುವವರೆಗೆ ಮಂಗಳೂರಿಗೆ ಬರುವ ಮತ್ತು ಹೋಗುವ ಎಲ್ಲಾ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ವಿದ್ಯುತ್‌ ಪೂರೈಕೆ ಸಮಸ್ಯೆಯನ್ನು ಏರ್‌ಪೋರ್ಟ್ ಸಿಬ್ಬಂದಿಗಳು ಸರಿಪಡಿಸುತ್ತಿದ್ದು, ಬಹರೈನ್‌ಗೆ ತೆರಳಬೇಕಿದ್ದ ಏರ್‌ ಇಂಡಿಯಾ ಸಂಚಾರದಲ್ಲಿ ವಿಳಂಬವಾಗಿದೆ. ಜೊತೆಗೆ ಚೆನ್ನೈ, ಬೆಂಗಳೂರಿಂದ ಬರಬೇಕಿದ್ದ ವಿಮಾನಗಳ ಲ್ಯಾಂಡಿಂಗ್ ಕೂಡ ವಿಳಂಬವಾಗುತ್ತಿದೆ.

ವಿಮಾನಕ್ಕೆ ಹಕ್ಕಿ ಡಿಕ್ಕಿ: ತಪ್ಪಿದ ಭಾರೀ ದುರಂತ 

ಇತ್ತೀಚೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್​ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದಿತ್ತು. ಅದೃಷ್ಟವಶಾತ್ ಭಾರೀ ದುರಂತ ತಪ್ಪಿತ್ತು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಹಿತ ಬೆಳಗ್ಗೆ 8.30ಕ್ಕೆ ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿತ್ತು.

ಇದನ್ನೂ ಓದಿ: Mangaluru News: ರನ್ ವೇನಿಂದ ಟೇಕಾಫ್ ಆಗುತ್ತಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ

ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಇಂಡಿಗೋ ವಿಮಾನ ಸಾಗುತ್ತಿತ್ತು. ಈ ವೇಳೆ ಏಕಾಏಕಿಯಾಗಿ ವಿಮಾನದ ರೆಕ್ಕೆಯ ಭಾಗಕ್ಕೆ ಹಕ್ಕಿ ಡಿಕ್ಕಿ ಹೊಡೆದಿತ್ತು. ತಕ್ಷಣ ಅಪಾಯದ ಸೂಚನೆ ಅರಿತು ಪೈಲಟ್ ಎಟಿಸಿಗೆ ಮಾಹಿತಿ ನೀಡಿದ್ದರು. ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದ ವಿಮಾನವನ್ನು ವಾಪಾಸ್ ತರಲಾಗಿತ್ತು.

ಬಲಿಕ ಪ್ರಯಾಣಿಕರನ್ನ ಇಳಿಸಿ ವಿಮಾನದ ತಪಾಸಣೆ ಮಾಡಲಾಗಿತ್ತು. ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ವಿಮಾನದ ಮೂಲಕ ಪ್ರಯಾಣಿಕರನ್ನು ದುಬೈಗೆ ಕಳಿಸಲು ವ್ಯವಸ್ಥೆ ಮಾಡಲಾಯಿತು. ಕೆಲ ಕಾಲ ಮಂಗಳೂರು ಏರ್ಪೋರ್ಟ್​ನಲ್ಲಿ ಈ ಅವಘಡ ಆತಂಕಕ್ಕೆ ಕಾರಣವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:40 pm, Sun, 28 May 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್