Praveen Nettar: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಪತ್ತೆಗೆ 10 ಲಕ್ಷ ರೂ. ಬಹುಮಾನ ಘೋಷಿಸಿದ ಎನ್ಐಎ
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳ ಪತ್ತೆಗೆ NIA ಬಹುಮಾನ ಘೋಷಿಸಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳ ಪತ್ತೆಗೆ NIA ಬಹುಮಾನ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಡಾಜೆಯ ಕೊಡಾಜೆ ಅದ್ದ ಮಗ ಷರೀಫ್ ಮತ್ತು ನೆಕ್ಕಿಲಾಡಿಯ ಅಗ್ನಾಡಿ ಹೌಸ್ನ ಅಬೂಬಕರ್ ಮಗ ಮಸೂದ್ ಕೆ.ಎ ಆರೋಪಿಗಳಾಗಿದ್ದು, ಇವರಿಬ್ಬರ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂ. ಬಹುಮಾನವನ್ನು ಎನ್ಐಎ ಘೋಷಿಸಿದೆ. ಬೆಂಗಳೂರಿನ ದೊಮ್ಮಲೂರು ಬಳಿ ಇವರು NIAಯ SP ಗೆ ಮಾಹಿತಿ ನೀಡಲು ಮನವಿ ಮಾಡಲಾಗಿದೆ. ಎನ್ಐಎ ತಂಡ ಇತ್ತೀಚೆಗೆ ಮೂವರು ಆರೋಪಿಗಳನ್ನು ಬಂಧಿಸಿತ್ತು.
ಘಟನೆ ಹಿನ್ನೆಲೆ
ಪ್ರವೀಣ್ ನೆಟ್ಟಾರು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದು, ಬೆಳ್ಳಾರೆ ಪೇಟೆಯಲ್ಲಿ ತನ್ನ ಅಂಗಡಿ ಮುಚ್ಚುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದರು. ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ನೆಟ್ಟಾರು ಸಾವನ್ನಪ್ಪಿದ್ದರು. ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿದ್ದರು.
ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತೋರ್ವ ಆರೋಪಿಯನ್ನು ಬಂಧಿಸಿದ NIA
ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಬಲೆ ಬೀಸಿರುವ ಪೊಲೀಸರು ಕೇರಳ ಗಡಿ ಪ್ರದೇಶ ಹಾಗೂ ಪುತ್ತೂರಿನ ಸುತ್ತಮುತ್ತ ನಾಕಾಬಂದಿ ಹಾಕಿದ್ದಾರೆ. ನಾಕಾಬಂದಿ ಹಾಕಿ ಕೊಲೆ ಆರೋಪಿಗಳಿಗಾಗಿ ತಲಾಶ್ ನಡೆಸುತ್ತಿದ್ದಾರೆ.
ಪ್ರವೀಣ್ ಹತ್ಯೆಗೆ ಮೂರು ಬಾರಿ ಸಂಚು:
ಪ್ರವೀಣ್ ಹತ್ಯೆಯಾಗಿದ್ದು ಮೂರನೇ ಯತ್ನದಲ್ಲಿ ಎನ್ನಲಾಗುತ್ತಿದೆ. ಪ್ರವೀಣ್ ಕೊಲೆಯಾಗೊ ಮೊದಲು ಎರಡು ಬಾರಿ ಹತ್ಯೆ ಯತ್ನ ನಡೆದಿತ್ತು. ಜು.23 ಮತ್ತು ಜು.24 ರಂದೇ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಜು.23 ರಂದು ಅದೇ ಬೈಕ್ನಲ್ಲಿ ಕೊಲ್ಲಲು ತಂಡ ಬಂದಿದ್ದು, ಆದರೆ ಅಂಗಡಿ ಬಳಿ ಜನ ಇದ್ದಿದ್ದರಿಂದ ವಾಪಾಸ್ ಹೋಗಿದ್ದಾರೆ. ಜು.24 ರಂದು ಸಂಜೆ 4.30 ಕ್ಕೆ ಕೊಲ್ಲಲು ಸಂಚು ರೂಪಿಸಿದ್ದು, ಅಂದು ಆ ಮೂವರ ತಂಡದಲ್ಲಿ ಅಬೀದ್ ಕೂಡ ಇದ್ದ ಎಂದು ಹೇಳಲಾಗಿದೆ.
ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹಂತಕರಿಗಾಗಿ ಪುತ್ತೂರು, ಸುಳ್ಯದಲ್ಲಿ ಎನ್ಐಎ ತಂಡದಿಂದ ವ್ಯಾಪಕ ತಲಾಶ್
ವಿಚಾರಣೆ ವೇಳೆ ಪೊಲೀಸರಿಗೆ ಅಬೀದ್ ಹೇಳಿಕೆ ನೀಡಿದ್ದು, ಅಂದು ಕೊಲೆ ಮಾಡಲು ಇಬ್ಬರ ಜೊತೆ ಅಬೀದ್ ಹೋಗಿದ್ದು, ಅಂಗಡಿ ಬಳಿ ಪ್ರವೀಣ್ ಇದ್ದಾನ ಇಲ್ವಾ ಅಂತಾ ನೋಡಲು ನೌಫಾಲ್ ಹೋಗಿದ್ದ. ಅವತ್ತು ಪ್ರವೀಣ್ ಅಂಗಡಿಯಲ್ಲಿ ಇರಲಿಲ್ಲ. ಪ್ರವೀಣ್ ಅಂಗಡಿಯಲ್ಲಿ ಇಲ್ಲ ಅಂತಾ ನೌಫಾಲ್ ಮಾಹಿತಿ ನೀಡಿದ್ದನು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.