Mangaluru news: ಪ್ರವೀಣ್ ನೆಟ್ಟಾರ್ ಕನಸಿನ ಮನೆಯ ಗೃಹ ಪ್ರವೇಶ, ಮನೆ ಮುಂದೆ ಪ್ರವೀಣ್ ಸ್ಮಾರಕ

ಮತದಾಂದರ ಅಟ್ಟಹಾಸಕ್ಕೆ ಬಲಿಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆಯ ಗೃಹಪ್ರವೇಶ ಇಂದು ನಳಿನ್ ಕುಮಾರ್ ಕಟೀಲ್ ಮತ್ತು ಸಾವಿರರು ಕಾರ್ಯಕರ್ತರ ಸಮ್ಮುಖದಲ್ಲಿ ನಡೆಯಿತು.

Mangaluru news: ಪ್ರವೀಣ್ ನೆಟ್ಟಾರ್ ಕನಸಿನ ಮನೆಯ ಗೃಹ ಪ್ರವೇಶ, ಮನೆ ಮುಂದೆ ಪ್ರವೀಣ್ ಸ್ಮಾರಕ
ಪ್ರವೀಣ್ ನೆಟ್ಟಾರು ಮನೆ
Follow us
Rakesh Nayak Manchi
|

Updated on: Apr 27, 2023 | 4:50 PM

ಮಂಗಳೂರು: ಮತದಾಂದರ ಅಟ್ಟಹಾಸಕ್ಕೆ ಬಲಿಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಅವರ ಕನಸಿನ ಮನೆಯ ಗೃಹಪ್ರವೇಶ (Hosewarming) ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಮತ್ತು ಸಾವಿರರು ಕಾರ್ಯಕರ್ತರ ಸಮ್ಮುಖದಲ್ಲಿ ನಡೆಯಿತು. ಇದೇ ವೇಳೆ ಮನೆ ಮುಂದೆ ನಿರ್ಮಾಣ ಮಾಡಲಾದ ಪ್ರವೀಣ್ ಸ್ಮಾರಕವನ್ನು ಲೋಕಾರ್ಪಣೆ ಮಾಡಿ ಗೌರವಿಸಲಾಯಿತು.

ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿರುವ ಪ್ರವೀಣ್ ಹಳೆ ಮನೆಯ ಆವರಣದಲ್ಲೇ ಬಿಜೆಪಿ ವತಿಯಿಂದ ಹೊಸ ಮನೆ ನಿರ್ಮಾಣ ಮಾಡಲಾಗಿದೆ. ನೂತನ ನಿವಾಸಕ್ಕೆ ಪ್ರವೀಣ್ ಹೆಸರಿಡಲಾಗಿದ್ದು, ಮನೆ ಮುಂದೆ ಸ್ಥಾಪಿಸಿರುವ ಪ್ರವೀಣ್ ಸ್ಮಾರಕವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಲೋಕಾರ್ಪಣೆ ಮಾಡಿದರು. ಇದೇ ವೇಳೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದರು.

ಇದನ್ನೂ ಓದಿ: ಭದ್ರತೆ ವಾಪಸ್ ಪಡೆದಿದ್ದಕ್ಕೆ ನಳಿನ್ ಕುಮಾರ್ ಕಟೀಲ್ ವಿರುದ್ಧ ಸತ್ಯಜಿತ್ ಸುರತ್ಕಲ್​ ಕೆಂಡಾಮಂಡಲ

ಪ್ರವೀಣ್ ಕೊಲೆಯಾಗಿದ್ದ ಸಂದರ್ಭದಲ್ಲಿ ಪ್ರವೀಣ್ ಕನಸಿನಂತೆ ಮನೆ ನಿರ್ಮಾಣ ಮಾಡಿಕೊಡುವುದಾಗಿ ಬಿಜೆಪಿ ಭರವಸೆ ನೀಡಿತ್ತು. ಅದರಂತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಸುಳ್ಯ ತಾಲೂಕಿನ ನೆಟ್ಟಾರುವಿನಲ್ಲಿ ಐದೇ ತಿಂಗಳಲ್ಲಿ ವಿಶಾಲವಾದ ಸುಂದರ ಮನೆ ನಿರ್ಮಾಣವಾಗಿದೆ. 70 ಲಕ್ಷ ವೆಚ್ಚದಲ್ಲಿ, 2,800 ಚದರಡಿ ವಿಸ್ತೀರ್ಣದಲ್ಲಿ ಮನೆ‌‌ ನಿರ್ಮಾಣ ಮಾಡಲಾಗಿದೆ. ಮಾತ್ರವಲ್ಲದೆ, ನೀಡಿದ ಆಶ್ವಾಸನೆಯಂತೆ, ಪ್ರವೀಣ್ ಪತ್ನಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ‌ಕಚೇರಿಯಲ್ಲಿ ಉದ್ಯೋಗವನ್ನೂ ಕೊಡಿಸಲಾಗಿದೆ.

ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ

2022 ಜುಲೈ‌ 26 ರಂದು ದುಷ್ಕರ್ಮಿಗಳಿಂದ ಬಿಜೆಪಿ ಯುವ ಮುಖಂಡ ಪ್ರವೀಣ್​ ನೆಟ್ಟಾರ್​ ಹತ್ಯೆಗೀಡಾಗಿದ್ದರು. ಘಟನೆ ಬಳಿಕ ಬಿಜೆಪಿ ಸರ್ಕಾರದ ವಿರುದ್ಧ ಹಿಂದೂ ಸಂಘಟನೆಗಳು ಮಾತ್ರವಲ್ಲದೆ ಬಿಜೆಪಿ ಕಾರ್ಯಕರ್ತರು ಕೂಡ ಆಕ್ರೋಶ ಹೊರಹಾಕಿದ್ದರು. ಘಟನೆ ನಂತರ ಬಿಜೆಪಿ ರಾಜ್ಯಾಧ್ಯಕ್ಷರ ಕಾರು ಮಾತ್ರವಲ್ಲ, ರಾಜ್ಯ ಸರ್ಕಾರದ ಬುಡವೇ ಅಲುಗಾಡಿತ್ತು. ರಾಜ್ಯಾದ್ಯಂತ ಸಾಮೂಹಿಕ ರಾಜೀನಾಮೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ