AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Praveen Nettar: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಹಿಂದುತ್ವ ಪರ ಕಾರ್ಯಕರ್ತರ ಆಕ್ರೋಶ; ಕಾರಿಗೆ ಮುತ್ತಿಗೆ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯಾಗಿದ್ದು, ಬೆಳ್ಳಾರೆ ಬಸ್ ನಿಲ್ದಾಣದಲ್ಲಿ ಅಂತಿಮ ದರ್ಶನಕ್ಕೆ ಆಗಮನಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ ಕುಮಾರ ಕಟೀಲರ ಕಾರಿಗೆ ಹಿಂದೂ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.

Praveen Nettar: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಹಿಂದುತ್ವ ಪರ ಕಾರ್ಯಕರ್ತರ ಆಕ್ರೋಶ; ಕಾರಿಗೆ ಮುತ್ತಿಗೆ
ಬಿಜೆಪಿ ಕರ್ನಾಟಕ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್
TV9 Web
| Updated By: ವಿವೇಕ ಬಿರಾದಾರ|

Updated on:Jul 27, 2022 | 2:20 PM

Share

ದಕ್ಷಿಣ ಕನ್ನಡ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಸಂಬಂಧಿಸಿದಂತೆ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ (NalinKumar Katil), ಸಚಿವ ಸುನಿಲ್ ಕುಮಾರ್ (Sunil Kumar) ಸೇರಿದಂತೆ ಹಲವು ನಾಯಕರು ಸ್ಥಳಕ್ಕೆ ಭೇಟಿ ನೀಡಿ ಮೃತ ಬೆಳ್ಳಾರೆ ಪ್ರವೀಣ್ ನೆಟ್ಟಾರು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲು ಯತ್ನಿಸಿದರು. ಈ ವೇಳೆ ಹಿಂದುತ್ವ ಪರ ಸಂಘಟನೆಗಳ ಕಾರ್ಯಕರ್ತರು ಉದ್ವಿಗ್ನಗೊಂಡು ನಳಿನ್ ಕುಮಾರ್ ಕಟೀಲ್ ಕಾರಿನ ಮೇಲೆ ಮುಗಿಬಿದ್ದರು. ಕಾರನ್ನು ಪಲ್ಟಿ ಮಾಡಲೂ ಕೆಲವರು ಯತ್ನಿಸಿ, ಟೈರ್​ನಿಂದ ಗಾಳಿ ಹೊರಬಿಟ್ಟರು.

ಪರಿಸ್ಥಿತಿ ಕೈಮೀರುವುದು ಮನಗಂಡ ಪೊಲೀಸರು ಲಾಠಿ ಚಾರ್ಜ್ ಮಾಡಿ ಗುಂಪು ಚೆದುರಿಸಿದರು. ಪೊಲೀಸ್ ಭದ್ರತೆಯಲ್ಲಿಯೇ ನಳಿನ್ ಕುಮಾರ್ ಕಟೀಲ್ ಸ್ಥಳದಿಂದ ಹೊರನಡೆದರು.

ಪೊಲೀಸರೊಂದಿಗೆ ಕಾರ್ಯಕರ್ತರು ವಾಗ್ವಾದಕ್ಕಿಳಿದರು. ‘ಬೇಕೇ ಬೇಕು, ನ್ಯಾಯ ಬೇಕು’ ಎಂಬ ಘೋಷಣೆ ಮೊಳಗಿಸಿದರು. ಬೆಳ್ಳಾರೆ ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಬಿಗಿ ಬಂದೋಬಸ್ತ್​ ಹಾಕಲಾಗಿದೆ. ಅಂಗಡಿಗಳನ್ನು ಮುಚ್ಚಿಸುತ್ತಿರುವ ಪೊಲೀಸರು ಗುಂಪು ಸೇರಿದ್ದ ಕಾರ್ಯಕರ್ತರನ್ನು ಲಾಠಿ ಬೀಸಿ ಚೆದುರಿಸುತ್ತಿದ್ದಾರೆ.

ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದ ಬಿಜೆಪಿ ಯುವನಾಯಕ ಪ್ರವೀಣ್ ನೆಟ್ಟಾರು ಹತ್ಯೆಯಿಂದ ಜನ ರೊಚ್ಚಿಗೆದ್ದು ಹಿಂಸಾಚಾರಕ್ಕಿಳಿದಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಪುತ್ತೂರು ಡಿಪೋಗೆ ಸೇರಿದ ಬಸ್​​  ಪುತ್ತೂರಿನಿಂದ ಸ್ಟೇಟ್ ಬ್ಯಾಂಕ್ ಕಡೆ ಹೋಗುತ್ತಿದ್ದಾಗ ಬೊಳ್ವಾರು ಬಳಿ ಅದರ ಮೇಲೆ ಕಲ್ಲುತೂರಾಟ ನಡೆಸಲಾಗಿದೆ.

Published On - 2:19 pm, Wed, 27 July 22