AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Praveen Nettar: ಬೆಳ್ಳಾರೆ ಉದ್ವಿಗ್ನ, ಲಾಠಿ ಚಾರ್ಜ್ ಮಾಡಿ ಗುಂಪು ಚದುರಿಸಿದ ಪೊಲೀಸರು ಓರ್ವನ ತಲೆಗೆ ಗಾಯ

ಪೊಲೀಸರೊಂದಿಗೆ ಕಾರ್ಯಕರ್ತರು ವಾಗ್ವಾದಕ್ಕಿಳಿದರು. ‘ಬೇಕೇ ಬೇಕು, ನ್ಯಾಯ ಬೇಕು’ ಎಂಬ ಘೋಷಣೆ ಮೊಳಗಿಸಿದರು. ಬೆಳ್ಳಾರೆ ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಬಿಗಿ ಬಂದೋಬಸ್ತ್ ಹಾಕಲಾಗಿದೆ.

Praveen Nettar: ಬೆಳ್ಳಾರೆ ಉದ್ವಿಗ್ನ, ಲಾಠಿ ಚಾರ್ಜ್ ಮಾಡಿ ಗುಂಪು ಚದುರಿಸಿದ ಪೊಲೀಸರು ಓರ್ವನ ತಲೆಗೆ ಗಾಯ
ಬೆಳ್ಳಾರೆ ಉದ್ವಿಗ್ನ
TV9 Web
| Edited By: ಆಯೇಷಾ ಬಾನು|

Updated on:Jul 27, 2022 | 3:17 PM

Share

ಮಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್(Nalin Kumar Kateel), ಸಚಿವ ಸುನಿಲ್ ಕುಮಾರ್(Sunil Kumar) ಸೇರಿದಂತೆ ಹಲವು ನಾಯಕರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮಕ್ಕೆ ಭೇಟಿ ನೀಡಿ ಮೃತ ಪ್ರವೀಣ್ ನೆಟ್ಟಾರು(Praveen Nettar) ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲು ಯತ್ನಿಸಿದರು. ಈ ವೇಳೆ ಹಿಂದುತ್ವ ಪರ ಸಂಘಟನೆಗಳ ಕಾರ್ಯಕರ್ತರು ಉದ್ವಿಗ್ನಗೊಂಡು ನಳಿನ್ ಕುಮಾರ್ ಕಟೀಲ್ ಕಾರಿನ ಮೇಲೆ ಮುಗಿಬಿದ್ದರು. ‘ಶರತ್ ಮಡಿವಾಳರ ಹತ್ಯೆ ಪ್ರಕರಣದಲ್ಲಿ ಏನು ಮಾಡಿದಿರಿ’ ಎಂದು ಆಕ್ರೋಶದಿಂದ ಪ್ರಶ್ನಿಸಿದರು. ಕಾರನ್ನು ಪಲ್ಟಿ ಮಾಡಲೂ ಕೆಲವರು ಯತ್ನಿಸಿ, ಟೈರ್​ಗಳಿಂದ ಗಾಳಿ ಹೊರಬಿಟ್ಟರು. ಪರಿಸ್ಥಿತಿ ಕೈಮೀರುವುದು ಮನಗಂಡ ಪೊಲೀಸರು ಲಾಠಿ ಚಾರ್ಜ್ ಮಾಡಿ ಗುಂಪು ಚೆದುರಿಸಿದರು. ಪೊಲೀಸ್ ಭದ್ರತೆಯಲ್ಲಿಯೇ ನಳಿನ್ ಕುಮಾರ್ ಕಟೀಲ್ ಸ್ಥಳದಿಂದ ಹೊರನಡೆದರು.

ಪೊಲೀಸರೊಂದಿಗೆ ಕಾರ್ಯಕರ್ತರು ವಾಗ್ವಾದಕ್ಕಿಳಿದರು. ‘ಬೇಕೇ ಬೇಕು, ನ್ಯಾಯ ಬೇಕು’ ಎಂಬ ಘೋಷಣೆ ಮೊಳಗಿಸಿದರು. ಬೆಳ್ಳಾರೆ ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಬಿಗಿ ಬಂದೋಬಸ್ತ್ ಹಾಕಲಾಗಿದೆ. ಅಂಗಡಿಗಳನ್ನು ಮುಚ್ಚಿಸುತ್ತಿರುವ ಪೊಲೀಸರು ಗುಂಪು ಸೇರಿದ್ದ ಕಾರ್ಯಕರ್ತರನ್ನು ಲಾಠಿ ಬೀಸಿ ಚೆದುರಿಸುತ್ತಿದ್ದಾರೆ. ಇನ್ನು ಘಟನೆಯಲ್ಲಿ ಹಿಂದೂ ಕಾರ್ಯಕರ್ತನ ತಲೆಗೆ ಗಾಯಗಳಾಗಿದ್ದು ಗಾಯಾಳು ಕಾರ್ಯಕರ್ತನನ್ನ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪೊಲೀಸರ ವಿರುದ್ಧ ಹಿಂದೂ ಕಾರ್ಯಕರ್ತರ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಬೆಳ್ಳಾರೆ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿಲಾಗಿದೆ. ನಿಷೇಧಾಜ್ಞೆ ಜಾರಿ ಬಗ್ಗೆ ಪೊಲೀಸರು ಅನೌನ್ಸ್​ ಮಾಡ್ತಿದ್ದಾರೆ. ಅದರೂ ಬಿಜೆಪಿ ಕಾರ್ಯಕರ್ತರು ಜಮಾಯಿಸಿದ್ದು ಸದ್ಯ ಬೆಳ್ಳಾರೆಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.

Published On - 2:34 pm, Wed, 27 July 22

Follow Us
TV9 Web
TV9 Web

TV9 Kannada

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ