Praveen Nettaru: ಪ್ರವೀಣ್ ನೆಟ್ಟಾರು ಪ್ರಮುಖ ಆರೋಪಿಗಳು ಸೌದಿಯಲ್ಲಿ ಪತ್ತೆ, ಹಂತಕರನ್ನು ಬಂಧಿಸಲು ಎನ್​ಐಎ ಮಾಸ್ಟರ್ ಪ್ಲ್ಯಾನ್​​

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಕಾಣಿಸಿಕೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

Praveen Nettaru: ಪ್ರವೀಣ್ ನೆಟ್ಟಾರು ಪ್ರಮುಖ ಆರೋಪಿಗಳು ಸೌದಿಯಲ್ಲಿ ಪತ್ತೆ, ಹಂತಕರನ್ನು ಬಂಧಿಸಲು ಎನ್​ಐಎ ಮಾಸ್ಟರ್ ಪ್ಲ್ಯಾನ್​​
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು
Follow us
TV9 Web
| Updated By: ಆಯೇಷಾ ಬಾನು

Updated on:Jan 28, 2023 | 9:59 AM

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು(Praveen Nettar) ಕೊಲೆ ಪ್ರಕರಣದಲ್ಲಿ ಅನೇಕ ಬೆಚ್ಚಿಬೀಳಿಸುವ ಸಂಗತಿಗಳು ಹೊರ ಬೀಳುತ್ತಿವೆ. ಕೆಲ ದಿನಗಳ ಹಿಂದೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಲ್ಲಿಸಿದ್ದ ಚಾರ್ಜ್​ಶೀಟ್​ನಲ್ಲಿ ಅನೇಕ ವಿಚಾರಗಳನ್ನು ಪ್ರಸ್ತಾಪಿಸಲಾಗಿತ್ತು. ಸದ್ಯ ಈಗ ಈ ಪ್ರಕರಣದ ಪ್ರಮುಖ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಕಾಣಿಸಿಕೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಮೊಹಮ್ಮದ್ ಶರೀಫ್​, ಕೆ.ಎ.ಮಸೂದ್​ ಎಂಬ ಇಬ್ಬರು ಪ್ರಮುಖ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಕಂಡು ಬಂದಿದ್ದು ಮೊಹಮ್ಮದ್​ ಮುಸ್ತಫಾ, ಎಂ.ಹೆಚ್​.ತುಫೈಲ್​​, ಎಂ.ಆರ್​.ಉಮರ್​ ಫಾರೂಕ್​, ಅಬೂಬಕರ್​​ ಸಿದ್ಧಿಕಿ ಎಂಬುವವರು ಅರಬ್​ ದೇಶದಲ್ಲಿ ಪತ್ತೆಯಾಗಿದ್ದಾರೆ. ಸೌದಿಯಲ್ಲಿ ಆರೋಪಿಗಳನ್ನು ಬಂಧಿಸಲು ಎನ್​ಐಎ ಮಾಸ್ಟರ್ ಪ್ಲ್ಯಾನ್​​ ಮಾಡಿದೆ. ಆರೋಪಿಗಳು ಸೌದಿಯಲ್ಲಿ ಸೈಟ್ ಖರೀದಿಸಿದ್ದಾರೆ ಎನ್ನಲಾಗುತ್ತಿದೆ. ಇನ್ನು ಈ 6 ಆರೋಪಿಗಳ ಸುಳಿವಿಗೆ ಒಟ್ಟು 24 ಲಕ್ಷ ಬಹುಮಾನ ಘೋಷಣೆ‌ ಮಾಡಲಾಗಿತ್ತು.

ಇದನ್ನೂ ಓದಿ: 2047 ವೇಳೆಗೆ ಭಾರತದಲ್ಲಿ ಇಸ್ಲಾಮಿಕ್ ಆಡಳಿತ ಸ್ಥಾಪನೆಗಾಗಿ PFI ಸರ್ವಿಸ್ ಟೀಂ-ಹತ್ಯಾ ತಂಡಗಳ ರಚನೆ: NIA ನಿಂದ ಸ್ಪೋಟಕ ಮಾಹಿತಿ ಬಹಿರಂಗ

ಪ್ರವೀಣ್ ಹತ್ಯೆ ಪ್ರಕರಣದ ಹಿನ್ನಲೆ

ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ಅವರನನ್ನು ಜುಲೈ 26 ರಂದು ಬೆಳ್ಳಾರೆಯಲ್ಲಿರವ ಅವರ ಕೋಳಿ ಅಂಗಡಿ ಬಳಿಯೇ ಹಂತಕರು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಇದು ಇಡೀ ರಾಜ್ಯಾದ್ಯಂತ ಕಾರ್ಯಕರ್ತರಲ್ಲಿ ಕಿಚ್ಚು ಹತ್ತಿಸಿತ್ತು. ಇದರ ಬಿಸಿಗೆ ಬಿಜೆಪಿ ರಾಜ್ಯ ಸರ್ಕಾರದ ಬುಡವೇ ಅಲುಗಾಡಿತ್ತು. ನಂತರ ಸರ್ಕಾರ ಈ ಪ್ರಕರಣವನ್ನು ಎನ್​ಐಎ ತನಿಖೆಗೆ ವಹಿಸಿತ್ತು.

ಪ್ರವೀಣ್ ಹತ್ಯೆಗೆ ಮೂರು ಬಾರಿ ಸಂಚು

ಪ್ರವೀಣ್ ಹತ್ಯೆಯಾಗಿದ್ದು ಮೂರನೇ ಯತ್ನದಲ್ಲಿ ಎನ್ನಲಾಗುತ್ತಿದೆ. ಪ್ರವೀಣ್ ಕೊಲೆಯಾಗೂ ಮೊದಲು ಎರಡು ಬಾರಿ ಹತ್ಯೆ ಯತ್ನ ನಡೆದಿತ್ತು. ಜು.23 ಮತ್ತು ಜು.24 ರಂದೇ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಜು.23 ರಂದು ಹತ್ಯೆ ಮಾಡಲು ಬೈಕ್​ನಲ್ಲಿ ಬಂದಿದ್ದ ಹಂತಕರು ಅಂಗಡಿ ಬಳಿ ಜನ ನೋಡಿ ವಾಪಾಸ್ ಹೋಗಿದ್ದರು. ಜು.24 ರಂದು ಸಂಜೆ 4.30ಕ್ಕೆ ಕೊಲ್ಲಲು ಸಂಚು ರೂಪಿಸಿದ್ದು, ಅಂದು ಕೂಡ ವಿಫಲವಾಗಿತ್ತು. ಜುಲೈ 26 ರಂದು ಪಕ್ಕಾ ಪ್ಲಾನ್ ಮಾಡಿಕೊಂಡು ಜನರಿಲ್ಲದ ಕಡೆ ಬರುತ್ತಿದ್ದಂತೆ ಪ್ರವೀಣ್ ಮೇಲೆ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:52 am, Sat, 28 January 23

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ