ಪ್ರವೀಣ್ ನೆಟ್ಟಾರು ಹತ್ಯಾ ಆರೋಪಿಯ ಸೋದರನಿಂದ ಕೊಲೆ ಬೆದರಿಕೆ: ಠಾಣೆ ಮುಂದೆ ಹಿಂದೂ ಕಾರ್ಯಕರ್ತರ ಪ್ರತಿಭಟನೆ

| Updated By: ಆಯೇಷಾ ಬಾನು

Updated on: Sep 10, 2022 | 9:06 PM

ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಫಿಕ್ ಸೋದರ ಸಫ್ರಿದ್‌ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಫೋನ್ ಕರೆ ಮಾಡಿ ಹಿಂದೂ ಕಾರ್ಯಕರ್ತ ಪ್ರಶಾಂತ್ ರೈ ಎಂಬುವವರಿಗೆ ಬೆದರಿಕೆ ಹಾಕಿದ್ದಾನಂತೆ.

ಪ್ರವೀಣ್ ನೆಟ್ಟಾರು ಹತ್ಯಾ ಆರೋಪಿಯ ಸೋದರನಿಂದ ಕೊಲೆ ಬೆದರಿಕೆ: ಠಾಣೆ ಮುಂದೆ ಹಿಂದೂ ಕಾರ್ಯಕರ್ತರ ಪ್ರತಿಭಟನೆ
ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಸಹೋದರನಿಂದ ಕೊಲೆ ಬೆದರಿಕೆ ಆರೋಪ: ಠಾಣೆ ಮುಂದೆ ಹಿಂದೂ ಕಾರ್ಯಕರ್ತರ ಪ್ರತಿಭಟನೆ
Follow us on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜುಲೈ 26ರಂದು ನಡೆದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸೋದರನಿಂದ ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಹೀಗಾಗಿ ಬೆದರಿಕೆ ಹಾಕಿದವನ ಬಂಧನಕ್ಕೆ ಆಗ್ರಹಿಸಿ ಬೆಳ್ಳಾರೆ ಠಾಣೆ ಎದುರು‌ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ.

ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಫಿಕ್ ಸೋದರ ಸಫ್ರಿದ್‌ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಫೋನ್ ಕರೆ ಮಾಡಿ ಹಿಂದೂ ಕಾರ್ಯಕರ್ತ ಪ್ರಶಾಂತ್ ರೈ ಎಂಬುವವರಿಗೆ ಬೆದರಿಕೆ ಹಾಕಿದ್ದಾನಂತೆ. ಪ್ರಶಾಂತ್ ರೈ, ಸಫ್ರಿದ್ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಫ್ರಿದ್ ಬಂಧನಕ್ಕೆ ಆಗ್ರಹಿಸಿ ಠಾಣೆ ಮುಂದೆ ಹಿಂದೂ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಎಸ್​ಡಿ‌ಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗೀಪೇಟೆ ಮನೆ ಮೇಲೆ ಎನ್​ಐಎ ದಾಳಿ

ಮಂಗಳೂರು(ಸೆ.8): ಬಿಜೆಪಿ ಯುವ ಮುಖಂಡ ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮಂಗಳವಾರವಷ್ಟೇ ಪುತ್ತೂರು ಮತ್ತು ಸುಳ್ಯ ತಾಲೂಕಿನಲ್ಲಿ ದಾಳಿ ನಡೆಸಿದ್ದ ಎನ್​ಐಎ ತಂಡ ಇದೀಗ ಬಂಟ್ವಾಳ ತಾಲೂಕಿನಲ್ಲೂ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ಹತ್ಯೆ ಪ್ರಕರಣದ ತೀವ್ರ ವಿಚಾರಣೆ ನಡೆಸುತ್ತಿರುವ ಎನ್​ಐಎ ಅಧಿಕಾರಿಗಳ ತಂಡ, ಎಸ್​ಡಿ‌ಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗೀಪೇಟೆ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.

ಬೆಳ್ಳಂಬೆಳಗ್ಗೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಳಿಯ ಪರ್ಲಿಯಾ ಎಂಬಲ್ಲಿನ ರಿಯಾಜ್ ಮನೆ ಬಾಗಿಲು ತಟ್ಟಿದ ಎನ್​ಐಎ ಅಧಿಕಾರಿಗಳು, ರಿಯಾಜ್ ಮೊಬೈಲ್ ವಶಕ್ಕೆ ಪಡೆದು ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಹತ್ಯೆ ಪ್ರಕರಣ ಸಂಬಂಧ ಮಂಗಳವಾರ ಬೆಳಗ್ಗೆ ಪುತ್ತೂರು ಹಾಗೂ ಸುಳ್ಯ ತಾಲೂಕಿನ 32 ಕಡೆಗಳಿಗೆ ದಾಳಿ ನಡೆಸಿದ್ದ ಅಧಿಕಾರಿಗಳು ಪರಿಶೀಲನೆ ನಡೆಸಿ ಸಾಕ್ಷಿಗಳನ್ನು ಸಂಗ್ರಹಿಸಿದ್ದರು.

ಕಾರ್ಯಕರ್ತರಿಂದ ಗೋಬ್ಯಾಕ್ ಎನ್​ಐಎ ಘೋಷಣೆ

ರಿಯಾಜ್ ಪರಂಗೀಪೇಟೆ ಮನೆಗೆ ದಾಳಿ ವಿಚಾರ ಸಂಬಂಧ ಸ್ಥಳೀಯ ಎಸ್​ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಗೋ ಬ್ಯಾಕ್ ಎನ್​ಐಎ ಘೋಷಣೆ ಕೂಗುತ್ತಿದ್ದಾರೆ. ಬಿ.ಸಿ.ರೋಡ್ ಬಳಿಯ ಪರ್ಲಿಯಾ ಎಂಬಲ್ಲಿನ ರಿಯಾಜ್ ನಿವಾಸದ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದು, ಬಂಟ್ವಾಳ ಪೊಲೀಸರು ಭದ್ರತೆ ನೀಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:26 pm, Sat, 10 September 22