ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಇನ್ನೂ ನಾಲ್ವರ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ
ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಇನ್ನೂ 4 ಜನರ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ. ಅಬ್ದುಲ್ ರೆಹಮಾನ್, ನೌಷದ್, ಅಬ್ದುಲ್ ನಾಸೀರ್, ಅತೀಕ್ ಅಹ್ಮದ್ ವಿರುದ್ಧ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ಕಳೆದ ಜನವರಿಯಲ್ಲಿ ಅರೆಸ್ಟ್ ಆಗಿದ್ದ ಅತೀಕ್ ಅಹ್ಮದ್ ನಾಲ್ವರ ಪೈಕಿ ಮೂವರು ಪಿಎಫ್‌ಐ ಸಂಘಟನೆಗೆ ಸೇರಿದ್ದವರು. ಪ್ರವೀಣ್ ಹತ್ಯೆ ಕೇಸ್ನಲ್ಲಿ ಆರೋಪಿಗಳ ಸಂಖ್ಯೆ 27ಕ್ಕೇರಿಕೆಯಾಗಿದೆ.

ಬೆಂಗಳೂರು, ಏಪ್ರಿಲ್ 15: 2022ರಲ್ಲಿ ನಡೆದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಇಂದು ಇನ್ನೂ 4 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ. ಇದುವರೆಗೂ ಈ ಪ್ರಕರಣದಲ್ಲಿ 21 ಆರೋಪಿಗಳನ್ನ ಬಂಧಿಸಲಾಗಿದ್ದು, ಓರ್ವ ಮೃತಪಟ್ಟಿದ್ದಾನೆ. 2022ರ ಜು.26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು.
ಅಬ್ದುಲ್ ರೆಹಮಾನ್, ನೌಷದ್, ಅಬ್ದುಲ್ ನಾಸೀರ್, ಅತೀಕ್ ಅಹ್ಮದ್ ವಿರುದ್ಧ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ಈ ನಾಲ್ವರಲ್ಲಿ ಮೂವರು ತಲೆಮರೆಸಿಕೊಂಡಿದ್ದಾರೆ ಮತ್ತು ಅವರನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ ಎಂದು ಎನ್‌ಐಎ ತಿಳಿಸಿದೆ. ಹೀಗಾಗಿ, ಈ ಪ್ರಕರಣದ ಒಟ್ಟು ಆರೋಪಿಗಳ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ಆರೋಪಿಗೆ ಆಶ್ರಯ ನೀಡಿದ್ದಇಬ್ಬರು ಆರೋಪಿಗಳ ವಿರುದ್ಧ ಎನ್ಐಎ ಚಾರ್ಜ್ಶೀಟ್
ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಾರ್ಯಕರ್ತರು 2022 ರಲ್ಲಿ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಎನ್‌ಐಎ ತನ್ನ ಎರಡನೇ ಪೂರಕ ಆರೋಪಪಟ್ಟಿಯಲ್ಲಿ ಅಬ್ದುಲ್ ನಾಸಿರ್, ನೌಶಾದ್, ಅಬ್ದುಲ್ ರೆಹಮಾನ್ ಮತ್ತು ಅತೀಕ್ ಅಹ್ಮದ್ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ, 1967ರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಆರೋಪಪಟ್ಟಿ ಸಲ್ಲಿಸಿದೆ.
ಇದನ್ನೂ ಓದಿ: ಕನ್ನಡಿಗರ ಸ್ವಾಭಿಮಾನ ಹತ್ತಿಕ್ಕಲು ಶಿವಸೇನೆ ಮತ್ತು ಎಂಇಎಸ್ ಪುಂಡರಿಗೆ ಬಿಡೋದಿಲ್ಲ: ಪ್ರವೀಣ್ ಶೆಟ್ಟಿ, ಕರವೇ
ತಲೆಮರೆಸಿಕೊಂಡಿರುವ ಮೂವರು ಕರ್ನಾಟಕದ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳು ಮತ್ತು ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ಮೂವರು ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದರು. ಅಬ್ದುಲ್ ನಾಸಿರ್ ಮತ್ತು ಅಬ್ದುಲ್ ರೆಹಮಾನ್ ಬೆಂಗಳೂರಿನಲ್ಲಿ ಆರೋಪಿ ತುಫೈಲ್‌ಗೆ ಆಶ್ರಯ ನೀಡುವಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:38 pm, Tue, 15 April 25