ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಐವರು ಶಂಕಿತರು ಪೊಲೀಸರ ವಶಕ್ಕೆ

| Updated By: ನಯನಾ ರಾಜೀವ್

Updated on: Jul 27, 2022 | 12:24 PM

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು ಐವರು ಶಂಕಿತರನ್ನು ವಶಕ್ಕೆ ಪಡೆದಿದ್ದು ವಿಚಾರಣೆ ಆರಂಭಿಸಿದ್ದಾರೆ.

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಐವರು ಶಂಕಿತರು ಪೊಲೀಸರ ವಶಕ್ಕೆ
Praveen
Follow us on

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು ಐವರು ಶಂಕಿತರನ್ನು ವಶಕ್ಕೆ ಪಡೆದಿದ್ದು ವಿಚಾರಣೆ ಆರಂಭಿಸಿದ್ದಾರೆ. ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಈ ಘಟನೆ ಸಂಭವಿಸಿದ್ದು, ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಮೃತ ಪ್ರವೀಣ್ ನೆಟ್ಟಾರು ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದರು.

ಪ್ರವೀಣ್ ನೆಟ್ಟಾರು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದನು. ಬೆಳ್ಳಾರೆ ಪೇಟೆಯಲ್ಲಿ ಇಂದು ತನ್ನ ಕೋಳಿ ಅಂಗಡಿ ಮುಚ್ಚುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು. ಆರೋಪಿಗಳಿಗಾಗಿ ಬಲೆ ಬೀಸಿರುವ ಪೊಲೀಸರು ಕೇರಳ ಗಡಿ ಪ್ರದೇಶ ಹಾಗೂ ಪುತ್ತೂರಿನ ಸುತ್ತಮುತ್ತ ನಾಕಾಬಂದಿ ಹಾಕಿದ್ದು, ಕೊಲೆ ಆರೋಪಿಗಳಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

ಗಂಭೀರ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ನೆಟ್ಟಾರು ಕೊನೆಯುಸಿರೆಳೆದಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಐವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. ಅಲ್ಲದೆ ಪ್ರವೀಣ್ ಅವರನ್ನು ಹತ್ಯೆ ಮಾಡಲು ಬಂದಿದ್ದ ದುಷ್ಕರ್ಮಿಗಳ ಬೈಕ್ ನಂಬರ್ ಕೇರಳದ ನೋಂದಣಿ ಸಂಖ್ಯೆಯಾಗಿದ್ದವು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

 

 

Published On - 12:18 pm, Wed, 27 July 22