ಮಂಗಳೂರು: ಖಾಸಗಿ ಆಸ್ಪತ್ರೆಯಲ್ಲಿ ತಾಯಿ, ಮಗು ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪ
ಸಂಜೆ ವೇಳೆಗೆ ತಾಯಿ ಸವಿತಾ ಕೂಡ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ತಾಯಿ ಮೃತಪಟ್ಟ ಬಳಿಕ ಮಗುವನ್ನು ಹೊರತೆಗೆದ ಆರೋಪ ಕೇಳಿಬಂದಿದೆ. ಪತಿ ಗಣೇಶ್, ಸಂಬಂಧಿಕರಿಂದ ವೈದ್ಯರ ವಿರುದ್ಧ ಆರೋಪ ವ್ಯಕ್ತವಾಗಿದೆ.
ಮಂಗಳೂರು: ಇಲ್ಲಿನ ಖಾಸಗಿ ಆಸ್ಪತ್ರೆ ಒಂದರಲ್ಲಿ ತಾಯಿ, ಮಗು ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದ ತಾಯಿ, ಮಗು ಸಾವು ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದೆ. ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಲಾಗಿದೆ. ನಿನ್ನೆ (ಜನವರಿ 21) ಬೆಳಗ್ಗೆ ಗರ್ಭಿಣಿ ಆಗಿದ್ದ ಸವಿತಾ (25) ಎಂಬವರು ಆಸ್ಪತ್ರೆಗೆ ಬಂದಿದ್ದರು. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕುಂಡಡ್ಕ ನಿವಾಸಿ ಆಸ್ಪತ್ರೆಗೆ ಆಗಮಿಸಿದ್ದರು.
ಆಸ್ಪತ್ರೆಗೆ ಬಂದಾಗ ಹೊಟ್ಟೆಯಲ್ಲೇ ಮಗು ಸಾವು ಎಂದು ಹೇಳಲಾಗಿತ್ತು. ಆದರೆ, ಸಂಜೆ ಆದರೂ ಮಗುವನ್ನು ಹೊರ ತೆಗೆಯದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಲಾಗಿದೆ. ಸಂಜೆ ವೇಳೆಗೆ ತಾಯಿ ಸವಿತಾ ಕೂಡ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ತಾಯಿ ಮೃತಪಟ್ಟ ಬಳಿಕ ಮಗುವನ್ನು ಹೊರತೆಗೆದ ಆರೋಪ ಕೇಳಿಬಂದಿದೆ. ಪತಿ ಗಣೇಶ್, ಸಂಬಂಧಿಕರಿಂದ ವೈದ್ಯರ ವಿರುದ್ಧ ಆರೋಪ ವ್ಯಕ್ತವಾಗಿದೆ.
ಕೋಲಾರ: ಬೆಳಗಿನ ಜಾವ ಸಂಭವಿಸಿದ ಅಪಘಾತದಲ್ಲಿ ಇಬ್ಬರ ದುರ್ಮರಣ
ಬೆಳಗಿನ ಜಾವವೇ ಕಾರು ಅಪಘಾತ ಸಂಭವಿಸಿ ಇಬ್ಬರು ದುರ್ಮರಣವನ್ನಪ್ಪಿರುವ ದುರ್ಘಟನೆ ಕೋಲಾರ ತಾಲೂಕಿನ ನೆರ್ನಹಳ್ಳಿ ಬಳಿ ನಡೆದಿದೆ. ಬೆಂಗಳೂರಿನ ದೀಪಕ್, ಗಿರಿಜಮ್ಮ ಮೃತ ದುರ್ದೈವಿಗಳು. ಅಪಘಾತದಲ್ಲಿ ಇಬ್ಬರಿಗೆ ಗಾಯ ಆಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೋಲಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಮೃತರು ಬೆಂಗಳೂರು ಕೋಣನಕುಂಟೆ ಮೂಲದ ದೀಪಕ್ ಹಾಗೂ ಗಿರಿಜಮ್ಮ ಎಂದು ಗುರುತಿಸಲಾಗಿದೆ. ಹರೀಶ್ ಹಾಗೂ ಸಾವಿತ್ರಿ ಎಂಬುವವರಿಗೆ ಗಾಯವಾಗಿದೆ. ತಿರುಪತಿಗೆ ಹೋಗಿ ವಾಪಸ್ಸಾಗುವಾಗ ಘಟನೆ ನಡೆದಿದೆ ಎನ್ನಲಾಗಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಬಳ್ಳಾರಿ: ಕಾಲುವೆ ದಡದಲ್ಲಿ 3 ವರ್ಷದ ಮಗು ಪತ್ತೆ; ಮಗುವನ್ನು ಬಿಟ್ಟು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ
ಇದನ್ನೂ ಓದಿ: ಕೋಲಾರ: ಬೆಳಗಿನ ಜಾವ ಸಂಭವಿಸಿದ ಅಪಘಾತದಲ್ಲಿ ಇಬ್ಬರ ದುರ್ಮರಣ; ತಿರುಪತಿಯಿಂದ ವಾಪಸಾಗುವಾಗ ಘಟನೆ
Published On - 11:08 am, Sat, 22 January 22