AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಸ್ವಾಗತಕ್ಕೂ ಮುನ್ನ ಸಂಸದರ ಬದಲಾವಣೆಯ ಕೂಗು: ನಳೀನ್ ಕುಮಾರ್ ಕಟೀಲ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ

ಈ ಪೋಸ್ಟ್ ಬಿಜೆಪಿ ವಲಯದಲ್ಲಿ ದೊಡ್ಡ ಸಂಚಲನವನ್ನು ಸೃಷ್ಠಿಸಿದ್ದು, ಮೋದಿ ಆಗಮನ ವೇಳೆ ಸಂಸದ ನಳಿನ್ ಕುಮಾರ್ ವಿರುದ್ಧದ ಕಾರ್ಯಕರ್ತರ ಆಕ್ರೋಶಗೊಳ್ಳುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

ಮೋದಿ ಸ್ವಾಗತಕ್ಕೂ ಮುನ್ನ ಸಂಸದರ ಬದಲಾವಣೆಯ ಕೂಗು: ನಳೀನ್ ಕುಮಾರ್ ಕಟೀಲ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ
ನಳೀನ್ ಕುಮಾರ್ ಕಟೀಲ್ ವಿರುದ್ಧ ಅಭಿಯಾನ
TV9 Web
| Edited By: |

Updated on:Aug 24, 2022 | 11:29 AM

Share

ಮಂಗಳೂರು: ಸೆ.02 ರಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಮಂಗಳೂರು ಭೇಟಿ ಹಿನ್ನೆಲೆ ನಳೀನ್ ಕುಮಾರ್ ಕಟೀಲ್ ವಿರುದ್ಧ ಅಭಿಯಾನ ಮಾಡಲಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಸಂಸದ ಸ್ಥಾನ ಬದಲಿಸುವಂತೆ ಸಾಮಾಜಿಕ ಜಾಲತಾಣಗಳ ಮೂಲಕ ಅಭಿಯಾನ ಮಾಡಲಾಗುತ್ತಿದ್ದು, ಸತ್ಯಜಿತ್ ಸುರತ್ಕಲ್​ಗೆ ಸಂಸದ ಸ್ಥಾನ ಕೊಡಿ ಅಂತಾ ಪಟ್ಟು ಹಿಡಿಯಲಾಗಿದೆ. ಹಿಂದುತ್ವದ ಜೊತೆಗೆ ಅಭಿವೃದ್ಧಿ ದೃಷ್ಟಿಕೋನ ಹೊಂದಿರುವ ನಾಯಕನ ಅಗತ್ಯವಿದೆ. ಮೋದಿ ಸ್ವಾಗತಿಸುವ ಮೊದಲು ಸಂಸದರ ಬದಲಾವಣೆಗೆ ಕೂಗು ಕೇಳಿ ಬರಲಿ ಅಂತಾ ಸಂದೇಶಗಳು ಹರಿದಾಡುತ್ತಿದ್ದು, ಇದಕ್ಕೆ ಪರ ಮತ್ತು ವಿರೋದ ಮೆಸೇಜ್​ಗಳು ಜೋರಾಗಿವೆ. ಬಿಜೆಪಿ ಕಾರ್ಯಕರ್ತರ ‘ಪೋಸ್ಟ್ ಕಾರ್ಡ್’ಇದೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಅಭಿಯಾನಕ್ಕೆ ಕೈ ಹಾಕಿದೆ.

ಇದನ್ನೂ ಓದಿ: PM Modi Mangalore visit: ಸೆ. 2ರಂದು ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ, ಪ್ರವಾಸದ ವಿವರ ಹೀಗಿದೆ

ಈ ಪೋಸ್ಟ್ ಬಿಜೆಪಿ ವಲಯದಲ್ಲಿ ದೊಡ್ಡ ಸಂಚಲನವನ್ನು ಸೃಷ್ಠಿಸಿದ್ದು, ಮೋದಿ ಆಗಮನ ವೇಳೆ ಸಂಸದ ನಳಿನ್ ಕುಮಾರ್ ವಿರುದ್ಧದ ಕಾರ್ಯಕರ್ತರ ಆಕ್ರೋಶಗೊಳ್ಳುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಸೆಪ್ಟೆಂಬರ್ 2 ಶುಕ್ರವಾರದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ  ಮಂಗಳೂರಿಗೆ ಆಗಮಿಸಲಿದ್ದಾರೆ. ಸರ್ಕಾರದ ಅಧಿಕೃತ ಕಾರ್ಯಕ್ರಮ ಹಿನ್ನೆಲೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿಶ್ವ ಯೋಗ ದಿನಾಚರಣೆ ಸಂದರ್ಭದಲ್ಲಿ ಇತ್ತೀಚೆಗೆ ಬೆಂಗಳೂರು, ಮೈಸೂರಿಗೂ ಬಂದಿದ್ದರು.

ಇದನ್ನೂ ಓದಿ: Nitin Gadkari: ಸರ್ಕಾರ ಸರಿಯಾದ ಸಮಯದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಿಲ್ಲ; ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿಕೆ

ಮೋದಿ ಮಂಗಳೂರು ಪ್ರವಾಸ ವಿವರ ಹೀಗಿದೆ:

ಪಣಂಬೂರುನಲ್ಲಿರುವ “ನವ ಮಂಗಳೂರು ಬಂದರು ಪ್ರಾಧಿಕಾರದ” ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಎನ್ ಎಂ ಪಿ ಟಿ ಯಲ್ಲಿ ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದು, ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಬಂಗ್ರ ಕೂಳೂರಿನ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಪ್ರಧಾನಿ ಮೋದಿ ಕೇರಳದ ಕೊಚ್ಚಿಗೆ ಭೇಟಿ ನೀಡಿ, ಅಲ್ಲಿಂದ ಮಂಗಳೂರಿಗೆ ಬರಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 11:26 am, Wed, 24 August 22

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್