ಮಂಗಳೂರು: ಸೆ.02 ರಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಮಂಗಳೂರು ಭೇಟಿ ಹಿನ್ನೆಲೆ ನಳೀನ್ ಕುಮಾರ್ ಕಟೀಲ್ ವಿರುದ್ಧ ಅಭಿಯಾನ ಮಾಡಲಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಸಂಸದ ಸ್ಥಾನ ಬದಲಿಸುವಂತೆ ಸಾಮಾಜಿಕ ಜಾಲತಾಣಗಳ ಮೂಲಕ ಅಭಿಯಾನ ಮಾಡಲಾಗುತ್ತಿದ್ದು, ಸತ್ಯಜಿತ್ ಸುರತ್ಕಲ್ಗೆ ಸಂಸದ ಸ್ಥಾನ ಕೊಡಿ ಅಂತಾ ಪಟ್ಟು ಹಿಡಿಯಲಾಗಿದೆ. ಹಿಂದುತ್ವದ ಜೊತೆಗೆ ಅಭಿವೃದ್ಧಿ ದೃಷ್ಟಿಕೋನ ಹೊಂದಿರುವ ನಾಯಕನ ಅಗತ್ಯವಿದೆ. ಮೋದಿ ಸ್ವಾಗತಿಸುವ ಮೊದಲು ಸಂಸದರ ಬದಲಾವಣೆಗೆ ಕೂಗು ಕೇಳಿ ಬರಲಿ ಅಂತಾ ಸಂದೇಶಗಳು ಹರಿದಾಡುತ್ತಿದ್ದು, ಇದಕ್ಕೆ ಪರ ಮತ್ತು ವಿರೋದ ಮೆಸೇಜ್ಗಳು ಜೋರಾಗಿವೆ. ಬಿಜೆಪಿ ಕಾರ್ಯಕರ್ತರ ‘ಪೋಸ್ಟ್ ಕಾರ್ಡ್’ಇದೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಅಭಿಯಾನಕ್ಕೆ ಕೈ ಹಾಕಿದೆ.
ಇದನ್ನೂ ಓದಿ: PM Modi Mangalore visit: ಸೆ. 2ರಂದು ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ, ಪ್ರವಾಸದ ವಿವರ ಹೀಗಿದೆ
ಈ ಪೋಸ್ಟ್ ಬಿಜೆಪಿ ವಲಯದಲ್ಲಿ ದೊಡ್ಡ ಸಂಚಲನವನ್ನು ಸೃಷ್ಠಿಸಿದ್ದು, ಮೋದಿ ಆಗಮನ ವೇಳೆ ಸಂಸದ ನಳಿನ್ ಕುಮಾರ್ ವಿರುದ್ಧದ ಕಾರ್ಯಕರ್ತರ ಆಕ್ರೋಶಗೊಳ್ಳುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಸೆಪ್ಟೆಂಬರ್ 2 ಶುಕ್ರವಾರದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ. ಸರ್ಕಾರದ ಅಧಿಕೃತ ಕಾರ್ಯಕ್ರಮ ಹಿನ್ನೆಲೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿಶ್ವ ಯೋಗ ದಿನಾಚರಣೆ ಸಂದರ್ಭದಲ್ಲಿ ಇತ್ತೀಚೆಗೆ ಬೆಂಗಳೂರು, ಮೈಸೂರಿಗೂ ಬಂದಿದ್ದರು.
ಮೋದಿ ಮಂಗಳೂರು ಪ್ರವಾಸ ವಿವರ ಹೀಗಿದೆ:
ಪಣಂಬೂರುನಲ್ಲಿರುವ “ನವ ಮಂಗಳೂರು ಬಂದರು ಪ್ರಾಧಿಕಾರದ” ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಎನ್ ಎಂ ಪಿ ಟಿ ಯಲ್ಲಿ ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದು, ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಬಂಗ್ರ ಕೂಳೂರಿನ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಪ್ರಧಾನಿ ಮೋದಿ ಕೇರಳದ ಕೊಚ್ಚಿಗೆ ಭೇಟಿ ನೀಡಿ, ಅಲ್ಲಿಂದ ಮಂಗಳೂರಿಗೆ ಬರಲಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 11:26 am, Wed, 24 August 22