ಮಂಗಳೂರು: ಕಾರ್ಯಕರ್ತರ ಗಡಿಪಾರು ಖಂಡಿಸಿ ಪುತ್ತೂರಿನಲ್ಲಿ ಭಜರಂಗದಳ, ಬಿಜೆಪಿ ಪ್ರತಿಭಟನೆ
ಕೋಮು ಗಲಭೆ, ದನಸಾಗಾಟ ಹಲ್ಲೆ, ನೈತಿಕ ಪೊಲೀಸ್ ಗಿರಿ ಸೇರಿ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಸಂಬಂಧ ಬಜರಂಗದಳದ ಐವರು ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ. ಇದರ ವಿರುದ್ಧ ಸಿಡಿದೆದ್ದ ಬಜರಂಗದಳ ಹಾಗೂ ಬಿಜೆಪಿ ಪುತ್ತೂರಿನಲ್ಲಿ ಪ್ರತಿಭಟನೆ ನಡೆಸಿತು.
ಮಂಗಳೂರು, ನ.20: ಕೋಮು ಗಲಭೆ, ದನಸಾಗಾಟ ಹಲ್ಲೆ, ನೈತಿಕ ಪೊಲೀಸ್ ಗಿರಿ ಸೇರಿ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಸಂಬಂಧ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಜರಂಗದಳದ ಐವರು ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ. ಇದರ ವಿರುದ್ಧ ಸಿಡಿದೆದ್ದ ಬಜರಂಗದಳ ಹಾಗೂ ಬಿಜೆಪಿ ಪುತ್ತೂರಿನ ತಾಲೂಕು ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಸಿತು.
ಭಜರಂಗದಳದ ಪ್ರಾಂತ ಸಂಯೋಜಕ್ ಸುನೀಲ್ ಕೆ.ಆರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಇದಾಗಿದೆ. ಗಡಿಪಾರು ಹಿಂಪಡೆಯದೇ ಇದ್ದರೆ ಯಾವುದೇ ಹೋರಾಟಕ್ಕೆ ಸಿದ್ಧ ಎಂದು ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ಹೊರಹಾಕಲಾಯಿತು.
ಇದನ್ನೂ ಓದಿ: ತಾಕತ್ತಿದ್ರೆ ನನ್ನನ್ನು ಗಡಿಪಾರು ಮಾಡಲಿ: ಮಂಗಳೂರು ಜಿಲ್ಲಾಡಳಿತಕ್ಕೆ ವಜ್ರದೇಹಿ ಸ್ವಾಮೀಜಿ ಆಗ್ರಹ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಭಜರಂಗದಳ ಕಾರ್ಯಕರ್ತರಾದ ಲತೇಶ್ ಗುಂಡ್ಯ, ಪ್ರಜ್ವಲ್, ನಿಶಾಂತ್, ಪ್ರದೀಪ್ ಮತ್ತು ದಿನೇಶ್ ಅವರಿಗೆ ಗಡಿಪಾರು ನೋಟೀಸ್ ನೀಡಲಾಗಿದೆ. ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳಿ ನವೆಂಬರ್ 22 ರಂದು ಪುತ್ತೂರು ಸಹಾಯಕ ಆಯುಕ್ತರ ಎದುರು ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ಈ ಐವರು ಕಾರ್ಯಕರ್ತರಲ್ಲಿ ಲತೇಶ್ ಹೊರತುಪಡಿಸಿ ಉಳಿದ ನಾಲ್ವರ ಮೇಲೆ ಒಂದೊಂದೇ ಪ್ರಕರಣಗಳಿದ್ದವು. ಕೋಮು ಗಲಭೆ, ದನಸಾಗಾಟ ಹಲ್ಲೆ, ನೈತಿಕ ಪೊಲೀಸ್ ಗಿರಿ ಸೇರಿ ಪ್ರಕರಣಗಳಲ್ಲಿ ಭಾಗಿ ಆರೋಪ ಎದುರಿಸುತ್ತಿದ್ದು, ಪುತ್ತೂರು ನಗರ ಠಾಣೆ ಹಾಗೂ ಸುಳ್ಯ ಠಾಣೆಯಿಂದ ಗಡಿಪಾರಿಗೆ ಮನವಿ ಮಾಡಲಾಗಿದೆ. ಅದರಂತೆ ಕರ್ನಾಟಕ ಪೊಲೀಸ್ ಅಧಿನಿಯಮ 1953ರ ಕಲಂ 55ರಡಿ ಗಡಿಪಾರು ನೋಟೀಸ್ ನೀಡಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ