ವಕೀಲ K.S.N.ರಾಜೇಶ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಮೂವರು ಅರೆಸ್ಟ್, ಇಬ್ಬರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುತ್ತೇನೆಂದು ಉರ್ವ ಪೊಲೀಸ್ ಠಾಣೆಗೆ ಕರಿಸಿ ಠಾಣೆಯಲ್ಲಿ ಸಂತ್ರಸ್ತೆ ಜೊತೆ ಸಂಧಾನ ವೇಳೆ ಪವಿತ್ರಾ ಆಚಾರ್ಯ ಬೆದರಿಸಿ ಸಂತ್ರಸ್ತೆಯರಿಂದ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ ಎಂಬ ಆರೋಪ ಪವಿತ್ರಾ ಆಚಾರ್ಯರ್ ವಿರುದ್ಧ ಕೇಳಿ ಬಂದಿದೆ.

ವಕೀಲ K.S.N.ರಾಜೇಶ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಮೂವರು ಅರೆಸ್ಟ್, ಇಬ್ಬರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Oct 22, 2021 | 2:09 PM

ಮಂಗಳೂರು: ಇಂಟರ್ನ್‌ಶಿಪ್‌ ಮಾಡುತ್ತಿದ್ದ ವಿದ್ಯಾರ್ಥಿನಿಗೆ ವಕೀಲ K.S.N.ರಾಜೇಶ್ ಭಟ್ರಿಂದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಆರೋಪಿ ಪವಿತ್ರಾ ಆಚಾರ್ಯರನ್ನು ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುತ್ತೇನೆಂದು ಉರ್ವ ಪೊಲೀಸ್ ಠಾಣೆಗೆ ಕರಿಸಿ ಠಾಣೆಯಲ್ಲಿ ಸಂತ್ರಸ್ತೆ ಜೊತೆ ಸಂಧಾನ ವೇಳೆ ಪವಿತ್ರಾ ಆಚಾರ್ಯ ಬೆದರಿಸಿ ಸಂತ್ರಸ್ತೆಯರಿಂದ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ ಎಂಬ ಆರೋಪ ಪವಿತ್ರಾ ಆಚಾರ್ಯರ್ ವಿರುದ್ಧ ಕೇಳಿ ಬಂದಿದೆ. ಹೀಗಾಗಿ ಅವರನ್ನು ಬಂಧಿಸಿದ್ದು ಪ್ರಕರಣ ಸಂಬಂಧ ಸಂತ್ರಸ್ತೆಯ ಬಾಯ್ ಫ್ರೆಂಡ್ ಧ್ರುವ ಮತ್ತು ಆತನ ತಾಯಿ ಮಹಾಲಕ್ಷ್ಮೀ ಕೂಡ ಅರೆಸ್ಟ್ ಆಗಿದ್ದಾರೆ.

ಇನ್ನು ಕರ್ತವ್ಯ ಲೋಪದಡಿ ಉರ್ವ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಕಲಾ ಮತ್ತು ಹೆಡ್ ಕಾನ್ಸ್ಟೇಬಲ್ ಪ್ರಮೋದ್ ಅಮಾನತುಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತ ಎನ್‌.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಕಾನೂನು ಬಾಹಿರವಾಗಿ ಸಂತ್ರಸ್ತೆಯಿಂದ ಮುಚ್ಚಳಿಕೆ ಬರೆಸಿಕೊಂಡು ಹೆಬ್ಬೆಟ್ಟು ಸಹಿ ಹಾಕಿಸಿಕೊಳ್ಳಲಾಗಿದೆ ಹೀಗಾಗಿ ಕರ್ತವ್ಯ ಲೋಪವಾಗಿದೆ ಎಂದು PSI, ಹೆಡ್ ಕಾನ್ಸ್ಟೇಬಲ್ ಸಸ್ಪೆಂಡ್ ಮಾಡಲಾಗಿದೆ.

ವಕೀಲ ರಾಜೇಶ್ ಭಟ್ ವಿರುದ್ಧ ಆರೋಪ ಮಂಗಳೂರಿನ ಖ್ಯಾತ ವಕೀಲ K.S.N.ರಾಜೇಶ್ ಭಟ್ ವಿರುದ್ಧ ಇಂಟರ್ನ್‌ಶಿಪ್‌ ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಪಟ್ಟಂತೆ FIR ದಾಖಲಾಗಿದೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಎಲ್ಎಲ್‌ಬಿ ವಿದ್ಯಾರ್ಥಿನಿ ದೂರು ಆಧರಿಸಿಅಕ್ಟೋಬರ್ 18 ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ತ ವಿದ್ಯಾರ್ಥಿನಿಯು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ವಕೀಲರ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣ ಬಯಲಾಗುತ್ತಿದ್ದಂತೆ ವಕೀಲ ರಾಜೇಶ್ ಭಟ್ ನಾಪತ್ತೆಯಾಗಿದ್ದಾರೆ.

ಮಂಗಳೂರು ಎಸಿಬಿ, ಲೋಕಾಯುಕ್ತಕ್ಕೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿರುವ ರಾಜೇಶ್ ಭಟ್, ನಗರದ ಪ್ರಸಿದ್ಧ ಬ್ಯಾಂಕ್‌ಗಳು ಸೇರಿ ಹಲವು ಕಂಪನಿಗಳಿಗೆ ಲೀಗಲ್ ಅಡ್ವೈಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜೇಶ್ ಕಚೇರಿಗೆ ವಿದ್ಯಾರ್ಥಿನಿ ಇಂಟರ್ನ್‌ಶಿಪ್‌ಗೆ ಬರುತ್ತಿದ್ದರು. ಸಂತ್ರಸ್ತ ಯುವತಿ ರಾಜೇಶ್ ವಿರುದ್ಧ ಅಕ್ಟೋಬರ್ 18 ಮಂಗಳೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ FIR ದಾಖಲಿಸಲಾಗಿದೆ.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯದ ಆರೋಪ; ಮಂಗಳೂರಿನ ಖ್ಯಾತ ವಕೀಲ ರಾಜೇಶ್ ಭಟ್ ವಿರುದ್ಧ ಎಫ್​ಐಆರ್ ದಾಖಲು

Published On - 1:59 pm, Fri, 22 October 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್