AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ತೂರು ದರ್ಬೆ ಗಲಾಟೆ: ನಾಳೆ ಸ್ವಯಂಪ್ರೇರಿತ ‘ಪುತ್ತೂರು ಬಂದ್‌’ಗೆ ಹಿಂದೂ ಜಾಗರಣ ವೇದಿಕೆ ಕರೆ

ಪುತ್ತೂರಿನ ದರ್ಬೆ ಡಿಜಿಟಲ್ ಸೇವಾ ಕೇಂದ್ರದಲ್ಲಿ ನಡೆದ ಗಲಾಟೆ ಮತ್ತು ಪೊಲೀಸ್ ವೈಫಲ್ಯ ಖಂಡಿಸಿ ಆಗಸ್ಟ್ 25ರಂದು ಹಿಂದೂ ಜಾಗರಣ ವೇದಿಕೆ ‘ಪುತ್ತೂರು ಬಂದ್‌’ಗೆ ಕರೆ ನೀಡಿದೆ. ಘಟನೆಯ ಹಿಂದೆ ನಿಷೇಧಿತ PFI ಸಂಘಟನೆಯ ವ್ಯವಸ್ಥಿತ ಸಂಚಿದೆ ಎಂದು ಆರೋಪಿಸಲಾಗಿದ್ದು, ನೈತಿಕ ಪೊಲೀಸ್‌ಗಿರಿ ನಡೆಸಿದವರ ವಿರುದ್ಧ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದೆ.

ಪುತ್ತೂರು ದರ್ಬೆ ಗಲಾಟೆ: ನಾಳೆ ಸ್ವಯಂಪ್ರೇರಿತ 'ಪುತ್ತೂರು ಬಂದ್‌'ಗೆ ಹಿಂದೂ ಜಾಗರಣ ವೇದಿಕೆ ಕರೆ
ದರ್ಬೆ ಗಲಾಟೆ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Aug 24, 2026 | 4:21 PM

Share

ಪುತ್ತೂರು, ಆ.24: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ದರ್ಬೆಯಲ್ಲಿರುವ ಡಿಜಿಟಲ್ ಸೇವಾ ಕೇಂದ್ರದಲ್ಲಿ ಆಗಸ್ಟ್ 21ರಂದು ಶುಕ್ರವಾರ ನಡೆದ ಗಲಾಟೆ ಹಾಗೂ ಆನಂತರದ ಬೆಳವಣಿಗೆಗಳನ್ನು ಖಂಡಿಸಿ, ಆಗಸ್ಟ್ 25ರ ಮಂಗಳವಾರದಂದು ಸ್ವಯಂಪ್ರೇರಿತ ‘ಪುತ್ತೂರು ಬಂದ್‌’ಗೆ ಹಿಂದೂ ಜಾಗರಣ ವೇದಿಕೆ (ಹಿಂಜಾವೇ) ಕರೆ ನೀಡಿದೆ. ಪೊಲೀಸ್ ಇಲಾಖೆಯ ವೈಫಲ್ಯ ಹಾಗೂ ನೈತಿಕ ಪೊಲೀಸ್‌ಗಿರಿ ನಡೆಸಿದವರ ವಿರುದ್ಧ ಕ್ರಮಕೈಗೊಳ್ಳಲು ವಿಫಲವಾಗಿರುವುದನ್ನು ಖಂಡಿಸಿ ಈ ಬಂದ್‌ಗೆ ಕರೆ ನೀಡಲಾಗಿದೆ.

ನಗರದಲ್ಲಿ ವರ್ತಕರ ಹಿತರಕ್ಷಣೆ, ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಪುತ್ತೂರಿನ ಎಲ್ಲಾ ಸಮಾಜ ಬಾಂಧವರು ಮತ್ತು ನಾಗರಿಕರು ಆ.25ರ ಬಂದ್‌ಗೆ ಸಹಕರಿಸಬೇಕೆಂದು ಹಿಂಜಾವೇ ಜಿಲ್ಲಾ ಸಂಯೋಜಕ ಮೋಹನ್ ದಾಸ್ ಕಾಣಿಯೂರು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ. ದರ್ಬೆಯ ಡಿಜಿಟಲ್ ಸೇವಾ ಕೇಂದ್ರದಲ್ಲಿ ನಡೆದ ಘಟನೆ ಹಾಗೂ ಪೊಲೀಸ್ ವಾಹನಕ್ಕೆ ಮುತ್ತಿಗೆ ಹಾಕಿದ ಪ್ರಕರಣಗಳ ಹಿಂದೆ ನಿಷೇಧಿತ PFI ಸಂಘಟನೆಯ ವ್ಯವಸ್ಥಿತ ಸಂಚಿದೆ ಎಂದು ಹಿಂಜಾವೇ ಆರೋಪಿಸಿದೆ. ಪೊಲೀಸ್ ಜೀಪ್‌ಗೆ ನುಗ್ಗಿ ಕರ್ತವ್ಯಕ್ಕೆ ಅಡ್ಡಿಪಡಿಸಿದವರನ್ನು ಮತ್ತು ಸೇವಾ ಕೇಂದ್ರದ ಮಹಿಳೆಯ ಮೇಲೆ ಹಲ್ಲೆಗೆ ಯತ್ನಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ಬಂಧಿಸಬೇಕು ಎಂದು ಆಗ್ರಹಿಸಲಾಗಿದೆ.

ಇದನ್ನೂ ಓದಿ; ಫುಟ್‌ಪಾತ್ ಮೇಲೆ ರೈಡಿಂಗ್‌ಗೆ ಬ್ರೇಕ್: 500 ರೂ. ದಂಡ 5,000 ರೂ.ಗೆ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ

ಘಟನೆಯ ಹಿನ್ನೆಲೆ:

ಸುಳ್ಯ ತಾಲೂಕಿನ ಜಾಲ್ಸೂರಿನ ಫಾತಿಮತ್ ಮಿಸ್ವಾನ (32) ಎಂಬವರು ತಮ್ಮ ಸಹೋದರ ಮತ್ತು ಸಹೋದರಿಯೊಂದಿಗೆ ದರ್ಬೆಯ ಡಿಜಿಟಲ್ ಸೇವಾ ಕೇಂದ್ರಕ್ಕೆ ದಾಖಲೆಗಳ ಲ್ಯಾಮಿನೇಷನ್‌ಗೆ ಬಂದಿದ್ದರು. ತಾಂತ್ರಿಕ ಕಾರಣದಿಂದ ದಾಖಲೆಯೊಂದು ಸುಟ್ಟು ಹೋಗಿದ್ದಕ್ಕೆ ಸಂಬಂಧಿಸಿದಂತೆ ಅಂಗಡಿ ಮಾಲೀಕರಾದ ಅಂಜನ ಪೈ, ಸುದರ್ಶನ್ ಪೈ ಹಾಗೂ ಗ್ರಾಹಕರ ನಡುವೆ ಮಾತಿನ ಚಕಮಕಿ ನಡೆದು ಹೊಡೆದಾಟಕ್ಕೆ ತಿರುಗಿತ್ತು. ಪ್ರಕರಣ ಸಂಬಂಧ ಪುತ್ತೂರು ನಗರ ಠಾಣೆ ಪೊಲೀಸರು ದೂರು-ಪ್ರತಿದೂರುಗಳನ್ನು ದಾಖಲಿಸಿಕೊಂಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:20 pm, Mon, 24 August 26

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!