ಹಿಂಜಾವೇ ಕಾರ್ಯಕರ್ತ ಕಾರ್ತಿಕ್ ಸುವರ್ಣ ಕೊಲೆ ಕೇಸ್: ಇಬ್ಬರು ಹಂತಕರಿಗೆ ಜೀವಾವಧಿ ಶಿಕ್ಷೆ, 6 ಲಕ್ಷ ರೂ. ದಂಡ

ಪುತ್ತೂರು ಕೋರ್ಟ್ ಕಾರ್ತಿಕ್ ಸುವರ್ಣ ಕೊಲೆ ಪ್ರಕರಣದಲ್ಲಿ ಮಹತ್ವದ ತೀರ್ಪು ನೀಡಿದೆ. ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಕಾರ್ತಿಕ್ ಸುವರ್ಣ ಮೇರ್ಲ ಹತ್ಯೆ ಪ್ರಕರಣದಲ್ಲಿ ಇಬ್ಬರು ಪ್ರಮುಖ ಅಪರಾಧಿಗಳಾದ ಪ್ರೀತೇಶ್ ಮತ್ತು ಕಿರಣ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಏಳು ವರ್ಷಗಳ ನಂತರ ಬಂದ ಈ ತೀರ್ಪು ಕಾರ್ತಿಕ್ ಕುಟುಂಬಕ್ಕೆ ನ್ಯಾಯ ಒದಗಿಸಿದೆ. ಗಣೇಶೋತ್ಸವದ ಪೆಂಡಾಲ್‌ನಲ್ಲಿ ನಡೆದಿದ್ದ ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಬೆಚ್ಚಿಬೀಳಿಸಿತ್ತು.

ಹಿಂಜಾವೇ ಕಾರ್ಯಕರ್ತ ಕಾರ್ತಿಕ್ ಸುವರ್ಣ ಕೊಲೆ ಕೇಸ್: ಇಬ್ಬರು ಹಂತಕರಿಗೆ ಜೀವಾವಧಿ ಶಿಕ್ಷೆ, 6 ಲಕ್ಷ ರೂ. ದಂಡ
ಕಾರ್ತಿಕ್ ಸುವರ್ಣ ಕೊಲೆ
Edited By:

Updated on: Sep 22, 2026 | 9:04 PM

ಪುತ್ತೂರು. ಸೆ.22: ದಕ್ಷಿಣ ಕನ್ನಡ ಜಿಲ್ಲೆಯನ್ನು ಬೆಚ್ಚಿಬೀಳಿಸಿದ್ದ ಹಿಂದೂ ಜಾಗರಣ ವೇದಿಕೆ (HJV) ಕಾರ್ಯಕರ್ತ ಕಾರ್ತಿಕ್ ಸುವರ್ಣ ಮೇರ್ಲ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಇಬ್ಬರು ಪ್ರಮುಖ ಅಪರಾಧಿಗಳಿಗೆ ಜೀವಾವಧಿ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ. ಗಣೇಶೋತ್ಸವದ ಪೆಂಡಾಲ್‌ನಲ್ಲೇ ನಡೆದಿದ್ದ ಈ ಭೀಕರ ಹತ್ಯೆಯ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು, ಆರೋಪಿಗಳ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಈ ಕಠಿಣ ಶಿಕ್ಷೆ ವಿಧಿಸಿದೆ.

2019ರ ಸೆಪ್ಟೆಂಬರ್ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸಂಪ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವ ನಡೆಯುತ್ತಿದ್ದ ಸ್ಥಳದಲ್ಲಿಯೇ ಈ ರಕ್ತಸಿಕ್ತ ಕೃತ್ಯ ನಡೆದಿತ್ತು.ಗಣೇಶೋತ್ಸವದ ಪೆಂಡಾಲ್‌ನಲ್ಲಿದ್ದ ಕಾರ್ತಿಕ್ ಸುವರ್ಣ ಮೇರ್ಲ ಅವರ ಕೈಗಳನ್ನು ಆರೋಪಿಗಳಾದ ಚರಣ್ ರಾಜ್ ಹಾಗೂ ಕಿರಣ್ ಗಟ್ಟಿಯಾಗಿ ಹಿಡಿದುಕೊಂಡರೆ, ಪ್ರಮುಖ ಆರೋಪಿ ಪ್ರೀತೇಶ್ ಚೂರಿಯಿಂದ ಭೀಕರವಾಗಿ ಇರಿದು ಕೊಲೆ ಮಾಡಿದ್ದ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರೀತೇಶ್ (A1), ಆತನ ಸಹೋದರರಾದ ಚರಣ್ ರಾಜ್ (A2), ಕಿರಣ್ (A3) ಹಾಗೂ ಹಂತಕರಿಗೆ ಆಶ್ರಯ ನೀಡಿದ್ದ ಆರೋಪದಡಿ ಸ್ಟೀವನ್ ಮೊಂತೇರೊ (A4) ಎಂಬುವವರನ್ನು ಬಂಧಿಸಿದ್ದರು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಪುತ್ತೂರಿನ 5ನೇ ಹೆಚ್ಚುವರಿ ಸತ್ರ ನ್ಯಾಯಾಲಯವು ಈ ಕೆಳಗಿನಂತೆ ತೀರ್ಪು ನೀಡಿದೆ.

ಅಪರಾಧಿಗಳಾದ ಪ್ರೀತೇಶ್ (A1) ಹಾಗೂ ಕಿರಣ್ (A3) ಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 3 ಲಕ್ಷ ರೂ. ದಂಡ (ಒಟ್ಟು ₹6 ಲಕ್ಷ) ವಿಧಿಸಲಾಗಿದೆ. ಅಪರಾಧಿಗಳಿಂದ ವಸೂಲಿ ಮಾಡಲಾಗುವ ದಂಡದ ಮೊತ್ತದಲ್ಲಿ 5.90 ಲಕ್ಷ ರೂಪಾಯಿಯನ್ನು ಕೊಲೆಯಾದ ಕಾರ್ತಿಕ್ ಅವರ ತಾಯಿ ಹೇಮಾವತಿ ಅವರಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಇದನ್ನೂ ಓದಿ: ಶಾರ್ಜಾದಲ್ಲಿ ಕುಂದಾಪುರ ಮೂಲದ ಪ್ರಕಾಶ್ ಭೀಕರ ಕೊಲೆ: 9 ತುಂಡು ಮಾಡಿದ ದುಷ್ಕರ್ಮಿಗಳು

ಆಶ್ರಯ ನೀಡಿದ ಆರೋಪ ಎದುರಿಸುತ್ತಿದ್ದ ಸ್ಟೀವನ್ ಮೊಂತೇರೊ (A4) ಅವರನ್ನು ಕೋರ್ಟ್ ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆಗೊಳಿಸಿದೆ. ಪ್ರಕರಣದ 2ನೇ ಆರೋಪಿಯಾಗಿದ್ದ ಚರಣ್ ರಾಜ್, 2022ರ ಜೂನ್ 4ರಂದು ಪೆರ್ಲಂಪಾಡಿಯಲ್ಲಿ ಭೀಕರವಾಗಿ ಹತ್ಯೆಯಾಗಿದ್ದ ಎಂಬುದು ಇಲ್ಲುಲ್ಲೇಖನೀಯ. ಸುಮಾರು 7 ವರ್ಷಗಳ ನಂತರ ಬಂದಿರುವ ಈ ನ್ಯಾಯಾಲಯದ ತೀರ್ಪು ಕಾರ್ತಿಕ್ ಸುವರ್ಣ ಅವರ ಕುಟುಂಬಕ್ಕೆ ಹಾಗೂ ಬೆಂಬಲಿಗರಿಗೆ ಸಮಾಧಾನ ತಂದಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:40 pm, Tue, 22 September 26

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Loading...
Unable to load recommendations.
Follow Us