ಹಾಡಹಗಲೇ ಮನೆಗೆ ನುಗ್ಗಿ ಯುವತಿಯನ್ನು ಹತ್ಯೆಗೈದ ಆರೋಪಿ 24 ಗಂಟೆಯೊಳಗೆ ಸಿಕ್ಕ, ಪೊಲೀಸರ ಮುಂದೆ ಅಸಲಿ ಕಾರಣ ಬಾಯ್ಬಿಟ್ಟ

ಮಂಗಳೂರಿನ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದಲ್ಲಿ ಮನೆಯೊಂದಕ್ಕೆ ನುಗ್ಗಿ ಯುವತಿಯನ್ನು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಹಾಡಹಗಲೇ ಮನೆಗೆ ನುಗ್ಗಿ ಯುವತಿಯನ್ನು ಹತ್ಯೆಗೈದ ಆರೋಪಿ 24 ಗಂಟೆಯೊಳಗೆ ಸಿಕ್ಕ, ಪೊಲೀಸರ ಮುಂದೆ ಅಸಲಿ ಕಾರಣ ಬಾಯ್ಬಿಟ್ಟ
ಕೊಲೆಯಾದ ಯುವತಿ ಜಯಶ್ರೀ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Jan 18, 2023 | 12:33 AM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದಲ್ಲಿ ಮನೆಯೊಂದಕ್ಕೆ ನುಗ್ಗಿ ಯುವತಿಯನ್ನು ಕೊಚ್ಚಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಜಯಶ್ರೀ ಕೊಲೆಯಾದ 24 ಗಂಟೆಯೊಳಗೆ ಸಂಪ್ಯಾ ಗ್ರಾಮಾಂತರ ಠಾಣೆ ಪೊಲೀಸರು ಕನಕಮಜಲು ಗ್ರಾಮದ ನಿವಾಸಿ ಉಮೇಶ್ ಎನ್ನುವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಯಶ್ರೀ ದೂರ ಮಾಡಿದ್ದಕ್ಕೆ ಅಸಮಾಧಾನಗೊಂಡು ಕೊಲೆ ಮಾಡಿರುವುದಾಗಿ ಆರೋಪಿ ಉಮೇಶ್ ಪೊಲೀಸರ ತನಿಖೆ ವೇಲೆ ಬಾಯ್ಬಿಟ್ಟಿದ್ದಾನೆ.

ಇದನ್ನೂ ಓದಿ: ಮಂಗಳೂರು: ಹಾಡಹಗಲೇ ಮನೆಗೆ ನುಗ್ಗಿ ಯುವತಿಗೆ ಚೂರಿ ಇರಿದು ಹತ್ಯೆ

​ಕೆಲವು ದಿನಗಳಿಂದ ಜಯಶ್ರೀಯನ್ನು ಪ್ರೀತಿಸುತ್ತಿದ್ದ ಉಮೇಶ್​, ಆಗಾಗ ಜಯಶ್ರೀ ಮನೆಗೆ ಬಂದು ಹೋಗುತ್ತಿದ್ದ. ಆದ್ರೆ, ಇಬ್ಬರ ನಡುವೆ ನಡುವೆ ಏನಾಗಿತ್ತೋ ಏನೋ 2022ರ ನವೆಂಬರ್​ನಿಂದ ಜಯಶ್ರೀ ಉಮೇಶ್​ನಿಂದ ದೂರವಾಗಿದ್ದಳು. ಇದರಿಂದ ಕೋಪಗೊಂಡಿದ್ದ ಉಮೇಶ್​, ಇಂದು(ಜನವರಿ 17) ಆಕೆಯ ಮನೆಗೆ ನುಗ್ಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ತನಿಖೆ ವೇಳೆ ತಿಳಿದುಬಂದಿದೆ.

ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರಿನ ಕಂಪ ಮನೆಯಲ್ಲಿ ಯುವತಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿ ಚೂರಿಯಿಂದ ಇರಿದು ಜಯಶ್ರೀ (23) ಎಂಬ ಯುವತಿಯನ್ನು ಕೊಲೆ ಮಾಡಿದ್ದ. ವಿಷಯ ತಿಳಿದು ಸಂಪ್ಯಾ ಗ್ರಾಮಾಂತರ ಪೊಲೀಸರು, ಶ್ವಾನ ದಳ, ಬೆರಳಚ್ಚು ತಜ್ಞರ ತಂಡ ದೌಡಾಯಿಸಿದ್ದರು.

ಇನ್ನು ಮೃತ ಯುವತಿ ತಾಯಿ ಉಮೇಶ್ ಮೇಲೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದಳು. ಇದೀಗ ಪೊಲೀಸ್ ತನಿಖೆ ವೇಳೆ ಉಮೇಶನೇ ಜಯಶ್ರೀಯನ್ನ ಕೊಚ್ಚಿ ಕೊಂದಿದ್ದಾನೆ ಎಂದು ತಿಳಿದುಬಂದಿದೆ.

Published On - 12:32 am, Wed, 18 January 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ