AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮೀಣ ಪ್ರದೇಶಗಳಿಗೆ ಹೆಚ್ಚು ಕೆಎಸ್​ಆರ್​​ಟಿಸಿ ಬಸ್ ಒದಗಿಸಿ; ರಾಮಲಿಂಗಾ ರೆಡ್ಡಿಗೆ ಪುತ್ತೂರು ಶಾಸಕ ಅಶೋಕ್‌ ರೈ ಮನವಿ

ಕೋವಿಡ್ -19 ಲಾಕ್‌ಡೌನ್‌ಗಳ ನಂತರ ಬಸ್‌ಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ. ಹೀಗಾಗಿ ತೊಂದರೆ ಅನುಭವಿಸುತ್ತಿರುವ ಗ್ರಾಮಸ್ಥರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಚಿವರಿಗೆ ಮನವಿ ಮಾಡಿದ್ದೇನೆ ಎಂದು ಶಾಸಕರು ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶಗಳಿಗೆ ಹೆಚ್ಚು ಕೆಎಸ್​ಆರ್​​ಟಿಸಿ ಬಸ್ ಒದಗಿಸಿ; ರಾಮಲಿಂಗಾ ರೆಡ್ಡಿಗೆ ಪುತ್ತೂರು ಶಾಸಕ ಅಶೋಕ್‌ ರೈ ಮನವಿ
ಪುತ್ತೂರು ಶಾಸಕ ಅಶೋಕ್‌ ರೈ (ಚಿತ್ರ ಕೃಪೆ; ಶಾಸಕರ ಫೇಸ್​ಬುಕ್ ಖಾತೆ)Image Credit source: Facebook
Ganapathi Sharma
|

Updated on: Jun 10, 2023 | 3:10 PM

Share

ಮಂಗಳೂರು: ಪುತ್ತೂರು ಡಿಪೋದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ (KSRTC Bus) ಸಂಖ್ಯೆಯನ್ನು ಹೆಚ್ಚಿಸಬೇಕು ಮತ್ತು ಗ್ರಾಮೀಣ ಪ್ರದೇಶದ ಜನರ ಅನುಕೂಲಕ್ಕಾಗಿ ಸಾಕಷ್ಟು ಸಿಬ್ಬಂದಿಯನ್ನು ನೇಮಿಸಬೇಕು ಎಂದು ಕಾಂಗ್ರೆಸ್‌ನ ಪುತ್ತೂರು ಶಾಸಕ ಅಶೋಕ್‌ ಕುಮಾರ್ ರೈ (Ashok Kumar Rai) ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿ ಪುತ್ತೂರು ಡಿಪೋದಲ್ಲಿ ಖಾಲಿ ಇರುವ ಚಾಲಕರು ಹಾಗೂ ಇತರೆ ತಾಂತ್ರಿಕ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಒತ್ತಾಯಿಸಿರುವುದಾಗಿ ಶಾಸಕರು ತಿಳಿಸಿದ್ದಾರೆ.

ಈ ಹಿಂದೆ ಕೆಎಸ್‌ಆರ್‌ಟಿಸಿಯ ಪುತ್ತೂರು ಘಟಕದಲ್ಲಿ ಬಸ್‌ಗಳ ಕೊರತೆ ಇರಲಿಲ್ಲ. ಇದರಿಂದ ಹಳ್ಳಿಗಳ ಜನರು, ವಿಶೇಷವಾಗಿ ವಿದ್ಯಾರ್ಥಿಗಳು ಮತ್ತು ಕೂಲಿ ಕಾರ್ಮಿಕರ ಸಂಚಾರಕ್ಕೆ ತೊಂದರೆಯಾಗಲಿಲ್ಲ. ಆದಾಗ್ಯೂ, ಕೋವಿಡ್ -19 ಲಾಕ್‌ಡೌನ್‌ಗಳ ನಂತರ ಬಸ್‌ಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ. ಹೀಗಾಗಿ ತೊಂದರೆ ಅನುಭವಿಸುತ್ತಿರುವ ಗ್ರಾಮಸ್ಥರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಚಿವರಿಗೆ ಮನವಿ ಮಾಡಿದ್ದೇನೆ ಎಂದು ಶಾಸಕರು ತಿಳಿಸಿದ್ದಾರೆ.

ಪುತ್ತೂರಿನಿಂದ ಹಲವು ಸಿಬ್ಬಂದಿ ವರ್ಗಾವಣೆಗೊಂಡಿದ್ದು, ಡಿಪೋದಲ್ಲಿ ಆಡಳಿತಾತ್ಮಕ ಸಮಸ್ಯೆ ತಲೆದೋರಿದೆ ಎಂಬುದನ್ನು ಸಚಿವರ ಗಮನಕ್ಕೆ ತರಲಾಗಿದೆ ಎಂದು ಅಶೋಕ್ ರೈ ತಿಳಿಸಿದ್ದಾರೆ.

ಸಚಿವರಿಗೆ ಮತ್ತು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮನವಿಯನ್ನು ಸಲ್ಲಿಸಿದ್ದೇನೆ ಎಂದು ಹೇಳಿದ ಅವರು, ಸಚಿವರು ಬೇಡಿಕೆಗಳನ್ನು ಪರಿಗಣಿಸಲು ಒಪ್ಪಿಗೆ ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಉಪ್ಪಿನಂಗಡಿಯಲ್ಲಿ ದೇವಸ್ಥಾನಕ್ಕೆ ಭೂಮಿ ಖರೀದಿಸಲು ಮಂಜೂರಾತಿ ನೀಡುವಂತೆ ಕೋರಿ ಮುಜರಾಯಿ ಇಲಾಖೆ ಸಚಿವರೂ ಆಗಿರುವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಿದ್ದೇನೆ ಎಂದು ಶಾಸಕರು ಹೇಳಿದ್ದಾರೆ.

ಇದನ್ನೂ ಓದಿ: KSRTC: ರವಿವಾರ ಉಚಿತ ಪ್ರಯಾಣದ ಗ್ಯಾರಂಟಿಗೆ ಚಾಲನೆ ನೀಡುವ ಸಿದ್ದರಾಮಯ್ಯ ಕೆಎಸ್​ಆರ್​ಟಿಸಿ ಸಿಬ್ಬಂದಿಯ ಯೂನಿಫಾರ್ಮ್ ಕಡೆ ಗಮನ ಹರಿಸುವರೇ?

ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನಕ್ಕೆ ಭೂಮಿ ಖರೀದಿಸಲು ಮುಜರಾಯಿ ಇಲಾಖೆಯಿಂದ ಅನುಮತಿ ಕೋರಿದ್ದೇನೆ. ಇದು ಪ್ರಸಿದ್ಧ ದೇವಸ್ಥಾನವಾಗಿದ್ದು, ಜಿಲ್ಲೆ ಮತ್ತು ಹೊರರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಆದರೆ ಸಾಕಷ್ಟು ಮೂಲಸೌಕರ್ಯ ವ್ಯವಸ್ಥೆ ಒದಗಿಸಬೇಕಿದೆ. ಅತಿಥಿ ಗೃಹ ಮತ್ತು ಪಾರ್ಕಿಂಗ್ ಸೌಲಭ್ಯದ ಕೊರತೆ ಇದೆ. ಹೀಗಾಗಿ ಭಕ್ತರು ಹಾಗೂ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯವರು ದೇವಸ್ಥಾನದ ಪಕ್ಕದಲ್ಲೇ 32 ಸೆಂಟ್ಸ್ ಜಾಗ ಗುರುತಿಸಿದ್ದಾರೆ. ಇಲಾಖೆ ಅನುಮತಿ ನೀಡಿದರೆ ಭೂಮಿ ಖರೀದಿಸಬಹುದು ಎಂದು ಶಾಸಕರು ಹೇಳಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್