ಮಂಗಳೂರು: ನೀರಿನ ಟ್ಯಾಂಕ್​​ ನಲ್ಲಿ ಬಿಜೆಪಿ ಮುಖಂಡನ ಮೃತದೇಹ ಪತ್ತೆ, ಸಾವಿನ ಸುತ್ತ ಅನುಮಾನಗಳ ಹುತ್ತ

ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ಶವವಾಗಿ ಪತ್ತೆಯಾಗಿದ್ದಾರೆ. ಪಾಣೆ-ಮಂಗಳೂರಿನ ಸೇತುವೆ ಬಳಿಯ ನೇತ್ರಾವತಿ ನದಿಯಲ್ಲಿ ನಾಪತ್ತೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ನಗರಸಭೆ ಬಿಜೆಪಿ ಸದಸ್ಯನ ಮೃತದೇಹ ಸಿಕ್ಕಿದೆ. ಹೀಗಾಗಿ ಈ ಸಾವಿನ ಬಗ್ಗೆ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿವೆ. ಮೊದಲಿಗೆ ಮೊಬೈಲ್ ಫೋನ್ ಹಾಗೂ ಬೈಕ್​ ಪತ್ತೆಯಾಗಿದ್ದು,ಬಳಿಕ ಅದೇ ಸ್ಥಳದ ಸುತ್ತಾಮುತ್ತಾ ಪರಿಶೀಲಿಸಿದಾಗ ಮೃತದೇಹ ಪತ್ತೆಯಾಗಿದೆ.

ಮಂಗಳೂರು: ನೀರಿನ ಟ್ಯಾಂಕ್​​ ನಲ್ಲಿ ಬಿಜೆಪಿ ಮುಖಂಡನ ಮೃತದೇಹ ಪತ್ತೆ, ಸಾವಿನ ಸುತ್ತ ಅನುಮಾನಗಳ ಹುತ್ತ
Ramesh Rai
Updated By: ರಮೇಶ್ ಬಿ. ಜವಳಗೇರಾ

Updated on: Jun 05, 2025 | 5:36 PM

ಮಂಗಳೂರು, (ಜೂನ್ 05): ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ರಮೇಶ್ ರೈ  (Ramesh Rai) ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಪುತ್ತೂರು ನಗರಸಭೆ ಬಿಜೆಪಿ ಸದಸ್ಯರಾಗಿದ್ದ ರಮೇಶ್ ರೈ ಮನೆಯಿಂದ ನಾಪತ್ತೆಯಾಗಿದ್ದರು. ಬಳಿಕ ಪಾಣಿ ಮಂಗಳೂರು ಸೇತುವೆಯ ಬಳಿ ರಮೇಶ್ ರೈ ಮೊಬೈಲ್ ಮತ್ತು ಬೈಕ್ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್ ಹಾಗೂ ಸ್ಥಳೀಯರು ಹುಡುಕಾಟ ನಡೆಸಿದಾಗ  ಇಂದು (ಜೂನ್ 05) ಣೆ ಮಂಗಳೂರಿನ ಸೇತುವೆ ಬಳಿಯ ನೀರಿನ ಟ್ಯಾಂಕಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿವೆ.

Published On - 5:32 pm, Thu, 5 June 25