ಬಿಕೆ ಹರಿಪ್ರಸಾದ್‌ಗೆ ಅಯೋಧ್ಯೆಯಲ್ಲಿ ಮಂದಿರ ಉದ್ಘಾಟನೆ ಇಷ್ಟವಿಲ್ಲ: ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ
ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್‌ಗೆ ಅಯೋಧ್ಯೆಯಲ್ಲಿ ಮಂದಿರ ಉದ್ಘಾಟನೆ ಇಷ್ಟವಿಲ್ಲ. ಹೀಗಾಗಿ ಹೇಳಿಕೆ ಕೊಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ. ಬಿಕೆ.ಹರಿಪ್ರಸಾದ್‌ಗೆ ಕಾಮನ್‌ಸೆನ್ಸ್ ಇಲ್ಲ ಎಂದು ಕಿಡಿಕಾರಿದ್ದಾರೆ.
ಮಂಗಳೂರು, ಜನವರಿ 07: ಈಗ ಎಲ್ಲೆಡೆ ರಾಮನನ್ನು ನೋಡಿ ಸರ್ಕಾರ ಬಿದ್ದು ಹೋಗುತ್ತದೆ ಎಂಬ ಭಯ ಇದೆ. ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್‌ಗೆ ಅಯೋಧ್ಯೆಯಲ್ಲಿ ಮಂದಿರ ಉದ್ಘಾಟನೆ ಇಷ್ಟವಿಲ್ಲ. ಹೀಗಾಗಿ ಹೇಳಿಕೆ ಕೊಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಕೆ.ಹರಿಪ್ರಸಾದ್‌ಗೆ ಕಾಮನ್‌ಸೆನ್ಸ್ ಇಲ್ಲ ಎಂದು ಕಿಡಿಕಾರಿದ್ದಾರೆ.
ಈ ಹಿಂದೆ ಅಯೋಧ್ಯೆ ಕೇಸ್‌ಗೆ ವಿರುದ್ಧವಾಗಿ ಅಫಿಡವಿಟ್ ಹಾಕಿದ್ದರು. ಕಾಂಗ್ರೆಸ್ ಪ್ರೇರಿತ ವಕೀಲರೊಬ್ಬರು ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ್ದರು. ಯಶಸ್ವಿಯಾಗಿ ನಡೆಯಬಾರದು, ಕಂಟಕ ಉಂಟು ಮಾಡಬೇಕೆಂದು ಮಾಡುತ್ತಿದ್ದಾರೆ.
ಹರಿಪ್ರಸಾದ್‌ಗೆ ನೋಟಿಸ್ ನೀಡಿ 1-2 ದಿನ ಜೈಲಲ್ಲಿ ಕೂರಿಸಿ ವಿಚಾರಿಸಲಿ
ರಾಜ್ಯದಲ್ಲಿ ಗೋಧ್ರಾ ರೀತಿ ಘಟನೆ ಆಗುತ್ತೆಂದು ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಬಿ.ಕೆ.ಹರಿಪ್ರಸಾದ್‌ಗೆ ಈ ಬಗ್ಗೆ ಮಾಹಿತಿ ಇದ್ದರೆ ದೂರು ನೀಡಲಿ. ಅವರದ್ದೇ ಸರ್ಕಾರವಿದೆ, ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ. ಹರಿಪ್ರಸಾದ್‌ಗೆ ನೋಟಿಸ್ ನೀಡಿ 1-2 ದಿನ ಜೈಲಲ್ಲಿ ಕೂರಿಸಿ ವಿಚಾರಿಸಲಿ. ಯಾವ ರೈಲಿನಲ್ಲಿ ಬಾಂಬ್ ಇಟ್ಟಿದ್ದಾರೆಂದು ಹೇಳಲಿ. ಅದನ್ನು ಬಿಟ್ಟು ಗಾಳಿಯಲ್ಲಿ ಗುಂಡು ಹೊಡೆಯುವುದು ಸರಿಯಲ್ಲ ಎಂದಿದ್ದಾರೆ.
ಇದನ್ನೂ ಓದಿ: ರಾಮ ಮಂದಿರ ಉದ್ಘಾಟನೆಗೆ ದಿನಗಣನೆ: ಸಂಭ್ರಮ ಕೆಡಿಸಲು ಕಾಂಗ್ರೆಸ್ ಕುತಂತ್ರ, ಬಿಜೆಪಿ ಆರೋಪ
ರಾಮಮಂದಿರದ ಭೀತಿ ಇದರ ಜೊತೆ ಕಾಂಗ್ರೆಸ್ ನಾಯಕರಿಂದ ಮುಸಲ್ಮಾನರನ್ನ ಓಲೈಸುವ ಪ್ರಕ್ರಿಯೆ ನಡೆಯುತ್ತಿದೆ. ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಕೇಸ್ ಹಿಂಪಡೆಯುತ್ತೇವೆಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮುಸ್ಲಿಂರಿಗೆ 10,000 ಕೋಟಿ ರೂ. ಕೊಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹಿಂದೂ-ಮುಸ್ಲಿಂರನ್ನು ಒಡೆದು ಆಳುವ ಪ್ರವೃತ್ತಿ ಕಾಂಗ್ರೆಸ್ ಡಿಎನ್ಎನಲ್ಲೇ ಬಂದಿದೆ. ಕಾಂಗ್ರೆಸ್ ಪಕ್ಷದ ಮೊದಲ ಅಧ್ಯಕ್ಷ ಬ್ರಿಟಿಷರು ಹೀಗಾಗಿ ಈ ಬುದ್ಧಿ ಬಂದಿದೆ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: ಬಿಜೆಪಿಗರು ನನ್ನನ್ನೂ ಬಂಧಿಸಿ ಎನ್ನುತ್ತಿರುವುದು ತಾವು ಮಾಡಿದ ಅಕ್ರಮಗಳ ಪ್ರಾಯಶ್ಚಿತ್ತಕ್ಕಾಗಿಯೇ?: ಕಾಂಗ್ರೆಸ್ ಪ್ರಶ್ನೆ
ಜ.22ರಂದು ದೇವಸ್ಥಾನಗಳಲ್ಲಿ ಪೂಜೆಗೆ ಸರ್ಕಾರದಿಂದ ಆದೇಶ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಮುಜರಾಯಿ ದೇವಸ್ಥಾನದಲ್ಲಿ ಪೂಜೆಗೆ ಅಧಿಕೃತ ಆದೇಶ ನೀಡಿರಬಹುದು. ಆದರೆ ನಾವು ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಅಂದು ಪೂಜೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ನನ್ನ ಗಮನಕ್ಕೆ ಬಂದಿಲ್ಲ
ಗಲಭೆ ಎಬ್ಬಿಸುವ ಬಗ್ಗೆ ವಾಟ್ಸಾಪ್‌ನಲ್ಲಿ ಪುನೀತ್ ಕೆರೆಹಳ್ಳಿ ಸಂದೇಶ ವಿಚಾರವಾಗಿ ಮಾತನಾಡಿ, ಈ ವಿಚಾರ ನನ್ನ ಗಮನಕ್ಕೆ ಬಂದಿಲ್ಲ ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.