AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಸದಂತೆ ಅಧಿಕಾರಿಗಳಿಗೆ ಸಚಿವ ಸೋಮಣ್ಣ ಸೂಚನೆ

ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವವರು ಮಂಗಳಸೂತ್ರ ಮತ್ತು ಜನಿವಾರ ತೆಗೆಯಬೇಕು ಎಂದು ಸೂಚಿಸಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ವಿಚಾರವಾಗಿ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಮಧ್ಯ ಪ್ರವೇಶಿಸಿ, ಪರೀಕ್ಷಾರ್ಥಿಗಳು ಧಾರ್ಮಿಕ ಸಂಕೇತಗಳನ್ನು ಹಾಗೂ ಮಂಗಳಸೂತ್ರವನ್ನು ತೆಗೆಯಬೇಕಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಧಾರ್ಮಿಕ ಸಂಕೇತಗಳನ್ನು ಹಾಗೂ ಮಂಗಳಸೂತ್ರವನ್ನು ತೆಗೆಸದಂತೆ ಅಧಿಕಾರಿಗಳಿಗೆ ಸೂಚನೆಯನ್ನೂ ನೀಡಿದ್ದಾರೆ.

ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಸದಂತೆ ಅಧಿಕಾರಿಗಳಿಗೆ ಸಚಿವ ಸೋಮಣ್ಣ ಸೂಚನೆ
ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಸದಂತೆ ಸಚಿವ ಸೋಮಣ್ಣ ಸೂಚನೆ
Follow us
TV9 Web
| Updated By: Ganapathi Sharma

Updated on: Apr 28, 2025 | 9:17 AM

ಮಂಗಳೂರು, ಏಪ್ರಿಲ್ 28: ರೈಲ್ವೆ ನೇಮಕಾತಿ ಮಂಡಳಿಯ (Railway Recruitment Board) ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ (Mangal Sutra) ತೆಗೆಸಬಾರದು ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ (V Somanna) ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ತಕ್ಷಣವೇ, ದಕ್ಷಿಣ ಕನ್ನಡ ಬಿಜೆಪಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಈ ವಿಚಾರವನ್ನು ರೈಲ್ವೆ ಇಲಾಖೆ ಸಚಿವರ ಗಮನಕ್ಕೆ ತಂದಿದ್ದರು.

‘ಭಾರತೀಯ ರೈಲ್ವೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆ ಬರೆಯುವವರು ಮಂಗಳಸೂತ್ರ, ಜನಿವಾರದಂತಹ ಧಾರ್ಮಿಕ ಸಂಕೇತಗಳು ಮತ್ತು ಆಭರಣಗಳನ್ನು ತೆಗೆಯುವಂತೆ ಮಾಡಬಾರದು. ಜನಿವಾರ, ಮಂಗಳಸೂತ್ರ ತೆಗೆಸದಂತೆ ಅಧಿಕಾರಿಗಳಿಗೆ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಸೂಚನೆ ನೀಡಿದ್ದಾರೆ ಎಂದು ತಿಳಿಸಲು ಸಂತೋಷವಾಗುತ್ತಿದೆ. ಮಂಗಳಸೂತ್ರ ಹಾಗೂ ಧಾರ್ಮಿಕ ಸಂಕೇತಗಳನ್ನು ತೆಗೆಯಬೇಕೆಂದು ಹಾಲ್​ಟಿಕೆಟ್​ನಲ್ಲಿ ಉಲ್ಲೇಖಿಸಲ್ಪಟ್ಟಿದ್ದ ಬಗ್ಗೆ ನಾವು ಅವರ ಗಮನಕ್ಕೆ ತಂದಿದ್ದೆವು. ಅವರು ಮಧ್ಯಪ್ರವೇಶಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ’ ಎಂದು ಎಕ್ಸ್​ ಸಂದೇಶದ ಮೂಲಕ ಬ್ರಿಜೇಶ್ ಚೌಟ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ
Image
ಸಚಿವ ಶಿವರಾಜ್ ತಂಗಡಗಿ ಕ್ಷೇತ್ರದಲ್ಲೇ ವಾರದಲ್ಲಿ ಎರಡೆರೆಡು ಬಾಲ್ಯ ವಿವಾಹ
Image
ರೈಲ್ವೆ ಪರೀಕ್ಷೆಯಲ್ಲಿ ಜನಿವಾರ ಮಾತ್ರವಲ್ಲ, ಮಂಗಳಸೂತ್ರವೂ ನಿಷಿದ್ಧ!
Image
ಜನಿವಾರ ವಿವಾದ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಹೈಕೋರ್ಟ್​ಗೆ ಪಿಐಎಲ್
Image
ಜನಿವಾರ ವಿವಾದ; ಅಧಿಕಾರಿಗಳದ್ದೇ ತಪ್ಪೆಂದು ವರದಿ ಸಲ್ಲಿಸಿದ ಡಿಸಿ

ಕ್ಯಾಪ್ಟನ್ ಬ್ರಿಜೇಶ್ ಚೌಟ ಎಕ್ಸ್​ ಸಂದೇಶ

ಶಿವಮೊಗ್ಗ, ಧಾರವಾಡ ಮತ್ತು ಬೀದರ್ ಜಿಲ್ಲೆಗಳಲ್ಲಿ ಕರ್ನಾಟಕ ಸಿಇಟಿ ಪರೀಕ್ಷೆಗೆ ಹಾಜರಾದ ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ ಪ್ರಕರಣ ಕರ್ನಾಟಕದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ವಿಚಾರವಾಗಿ ಸದ್ಯ ಕರ್ನಾಟಕ ಹೈಕೋರ್ಟ್​​​ನಲ್ಲಿ ಪಿಎಐಎಲ್ (ಸಾರ್ವಜನಿಕ ಹಿತಾಸಕ್ತಿ ಅರ್ಜಿ) ಕೂಡ ಸಲ್ಲಿಕೆಯಾಗಿದೆ. ಇಂಥ ಸಂದರ್ಭದಲ್ಲೇ ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆಯ ಪ್ರವೇಶ ಪತ್ರ ಕೂಡ ವಿವಾದಕ್ಕೆ ಗುರಿಯಾಗಿತ್ತು.

ಇದನ್ನೂ ಓದಿ: ರೈಲ್ವೆ ಪರೀಕ್ಷೆಯಲ್ಲಿ ಜನಿವಾರ ಮಾತ್ರವಲ್ಲ, ಮಂಗಳಸೂತ್ರವೂ ನಿಷಿದ್ಧ! ವ್ಯಾಪಕ ಆಕ್ರೋಶ

ರೈಲ್ವೆ ನೇಮಕಾತಿ ಮಂಡಳಿ ಕ್ರಮದ ವಿರುದ್ಧ ವಿಎಚ್​​ಪಿ ಮುಖಂಡ ಶರಣ್ ಪಂಪುವೆಲ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ, ಹಿಂದೂಗಳ ಭಾವನೆಗೆ ಧಕ್ಕೆಬಾರದ ರೀತಿಯಲ್ಲಿ ಪರೀಕ್ಷಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂದು ಸಂಸದರು ಹಾಗೂ ಸರ್ಕಾರವನ್ನು ಆಗ್ರಹಿಸಿದ್ದರು. ಇದೀಗ ಅಂತಿಮವಾಗಿ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವರ ಮಧ್ಯ ಪ್ರವೇಶದಿಂದ ಸಮಸ್ಯೆ ಬಗೆಹರಿದಿದೆ.

ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆ ಯಾವಾಗ?

ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆ ಏಪ್ರಿಲ್ 28, 29 ಹಾಗೂ 30 ರಂದು ನಡೆಯಲಿದೆ. ಮಂಗಳೂರಿನಲ್ಲಿ ಬೋಂದೆಲ್​ನ ಬೆಸೆಂಟ್ ವಿದ್ಯಾಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಎದೆ ಹಿಡಿದುಕೊಳ್ಳುತ್ತಿದ್ದ ರಾಕೇಶ್ ಪೂಜಾರಿ
ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಎದೆ ಹಿಡಿದುಕೊಳ್ಳುತ್ತಿದ್ದ ರಾಕೇಶ್ ಪೂಜಾರಿ
ದೇಶದ ಸೈನಿಕರಿಗೆ ಕರ್ತವ್ಯ ಮುಖ್ಯ; ವೈಯಕ್ತಿಕ ಸಂಬಂಧಗಳು, ಕೆಲಸಗಳಲ್ಲ
ದೇಶದ ಸೈನಿಕರಿಗೆ ಕರ್ತವ್ಯ ಮುಖ್ಯ; ವೈಯಕ್ತಿಕ ಸಂಬಂಧಗಳು, ಕೆಲಸಗಳಲ್ಲ
ಲಷ್ಕರ್ ಉಗ್ರನನ್ನು ಮುಗ್ದ ವ್ಯಕ್ತಿ, ಧರ್ಮ ಪ್ರಚಾರಕ ಎಂದು ಕರೆದ ಪಾಕ್
ಲಷ್ಕರ್ ಉಗ್ರನನ್ನು ಮುಗ್ದ ವ್ಯಕ್ತಿ, ಧರ್ಮ ಪ್ರಚಾರಕ ಎಂದು ಕರೆದ ಪಾಕ್