AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು; ಮಳೆನೀರು ಕೊಯ್ಲಿಗೆ ಮಾದರಿಯಾಗಲಿದೆ ಸರ್ಕಾರಿ ಶಾಲೆ, ವಾರ್ಷಿಕ 5 ಲಕ್ಷ ಲೀಟರ್ ನೀರು ಉಳಿತಾಯಕ್ಕೆ ವ್ಯವಸ್ಥೆ

ಶತಮಾನದಷ್ಟು (ಸುಮಾರು 110 ವರ್ಷ) ಹಳೆಯ ಮೂಡುಶೆಡ್ಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅನುದಾನದ ಕೊರತೆ ಎದುರಿಸುತ್ತಿದೆ ಎನ್ನಲಾಗಿದೆ. ಈ ಶಾಲೆಯಲ್ಲಿ ಸದ್ಯ 110 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.

ಮಂಗಳೂರು; ಮಳೆನೀರು ಕೊಯ್ಲಿಗೆ ಮಾದರಿಯಾಗಲಿದೆ ಸರ್ಕಾರಿ ಶಾಲೆ, ವಾರ್ಷಿಕ 5 ಲಕ್ಷ ಲೀಟರ್ ನೀರು ಉಳಿತಾಯಕ್ಕೆ ವ್ಯವಸ್ಥೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Feb 25, 2023 | 9:31 AM

Share

ಮಂಗಳೂರು: ಜಲ ಸಂರಕ್ಷಣೆಯ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಶೆಡ್ಡೆಯ (Moodushedde) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (Govt school) ಮಹತ್ವದ ಕೆಲಸಕ್ಕೆ ಮುಂದಾಗಿದೆ. ಮಂಗಳೂರಿನ ‘ಇನ್ನರ್ ವೀಲ್ ಕ್ಲಬ್’ ಸಹಯೋಗದೊಂದಿಗೆ ಶಾಲೆಯಲ್ಲಿ ಮಳೆನೀರು ಕೊಯ್ಲು (Rainwater harvesting) ವ್ಯವಸ್ಥೆ ಅಳವಡಿಸಲಾಗುತ್ತಿದ್ದು, ವಾರ್ಷಿಕವಾಗಿ ಸುಮಾರು 5 ಲಕ್ಷ ಲೀಟರ್ ನೀರು ಸಂರಕ್ಷಿಸುವ ಗುರಿ ಹೊಂದಲಾಗಿದೆ. ಈ ವರ್ಷ ನಮ್ಮ ಕ್ಲಬ್ ಅಧ್ಯಕ್ಷರು ಮಳೆ ನೀರು ಕೊಯ್ಲಿಗೆ ಆದ್ಯತೆ ನೀಡಲು ಬಯಸಿದ್ದಾರೆ. ಸದಸ್ಯರ ಸಹಕಾರದೊಂದಿಗೆ ಶಾಲೆಯ ಆವರಣದಲ್ಲಿ ಮಳೆ ನೀರು ಸಂಗ್ರಹಕ್ಕೆ ವ್ಯವಸ್ಥೆ ಮಾಡಲಾಗಿದೆ. 45,000 ರೂ. ವೆಚ್ಚದಲ್ಲಿ ಯೋಜನೆ ಹಮ್ಮಿಕೊಳ್ಳಲಾಗುತ್ತಿದ್ದು, ಇದನ್ನು ಕ್ಲಬ್​​ ನಿರ್ವಹಣೆ ಮಾಡಲಿದೆ ಎಂದು ‘ಇನ್ನರ್ ವೀಲ್ ಕ್ಲಬ್’ ಖಜಾಂಚಿ ಶಿವಾನಿ ಬಾಳಿಗ ತಿಳಿಸಿದ್ದಾರೆ.

ಶತಮಾನದಷ್ಟು (ಸುಮಾರು 110 ವರ್ಷ) ಹಳೆಯ ಮೂಡುಶೆಡ್ಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅನುದಾನದ ಕೊರತೆ ಎದುರಿಸುತ್ತಿದೆ ಎನ್ನಲಾಗಿದೆ. ಈ ಶಾಲೆಯಲ್ಲಿ ಸದ್ಯ 110 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮನೆ ಕಟ್ಟಿಸುವವರು ಗಮನಿಸಿ: ಇನ್ಮುಂದೆ 30*40 ಸೈಟಿನಲ್ಲಿ ಮನೆ ಕಟ್ಟಲು ಮಳೆನೀರು ಕೊಯ್ಲು ಕಡ್ಡಾಯ

ನೀರಿಗಾಗಿ ಶಾಲೆಯಲ್ಲಿ ಬಾವಿಯೊಂದಿದೆ. ಆದರೆ ಅದು ಸಮರ್ಪಕ ಸ್ಥಿತಿಯಲ್ಲಿಲ್ಲ. ಬೇಸಗೆ ಬರುತ್ತಿದ್ದಂತೆ ಅದರಲ್ಲಿರುವ ನೀರು ಖಾಲಿಯಾಗುತ್ತದೆ. ಶಾಲೆಯ ಮೇಲ್ಛಾವಣಿಯಿಂದ ಸಂಗ್ರಹಿಸಿದ ಮಳೆನೀರನ್ನು ಶುದ್ಧೀಕರಿಸಿ ಬಾವಿಗೆ ಬಿಡಲು ವ್ಯವಸ್ಥೆ ಮಾಡಲಾಗುತ್ತದೆ. ಇದರಿಂದ ಸಮೀಪದ ಪ್ರದೇಶಗಳ ಜಲಮಟ್ಟ ಹೆಚ್ಚಳಕ್ಕೂ ಪ್ರಯೋಜನವಾಗಲಿದೆ ಎಂದು ಶಿವಾನಿ ಬಾಳಿಗ ಹೇಳಿದ್ದಾರೆ.

ಮಳೆನೀರು ಕೊಯ್ಲು ಇದೇ ಮೊದಲಲ್ಲ

ಅಂದಹಾಗೆ, ಶಾಲೆಯಲ್ಲಿ ಮಳೆನೀರು ಕೊಯ್ಲು ಆರಂಭಿಸುತ್ತಿರುವುದು ಇದೇ ಮೊದಲಲ್ಲ. ಕೆಲವು ವರ್ಷಗಳ ಹಿಂದೆ ಮಳೆ ನೀರು ಕೊಯ್ಲಿನ ವ್ಯವಸ್ಥೆ ಮಾಡಲಾಗಿತ್ತು. ಆದರೆ ಸಮರ್ಪಕವಾದ ನಿರ್ವಹಣೆ ಇಲ್ಲದೆ ಅದು ಯಶಸ್ವಿಯಾಗಿರಲಿಲ್ಲ. ಇದೀಗ ಮತ್ತೆ ಪರಿಣಾಮಕಾರಿಯಾಗಿ ಮಳೆ ನೀರು ಕೊಯ್ಲು ಅಳವಡಿಸಿಕೊಳ್ಳುತ್ತಿರುವುದು ಸಂತಸ ತಂದಿದೆ ಎಂದು ಶಾಲೆಯ ಮುಖ್ಯೋಪಾಧ್ಯಯ ಸುಬ್ರಾಯ ಪೈ ಹೇಳಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:28 am, Sat, 25 February 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!