Eid al-Fitr: ಒಂದು ದಿನ ಮೊದಲೇ ಕರಾವಳಿ ಭಾಗದಲ್ಲಿ ರಂಜಾನ್ ಹಬ್ಬ ಆಚರಣೆ: ಮಾ 20ರಂದು ಸಾರ್ವತ್ರಿಕ ರಜೆ ಘೋಷಣೆ

ರಂಜಾನ್ ಹಬ್ಬ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶವ್ವಾಲ್ ಮಾಸದ ಚಂದ್ರದರ್ಶನ ಹಿನ್ನೆಲೆ ನಾಳೆ ಈದುಲ್ ಫಿತ್ರ್ ಹಬ್ಬ ಆಚರಣೆಗೆ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಘೋಷಿಸಿದ್ದಾರೆ. ಕರಾವಳಿಯಾದ್ಯಂತ ರಂಜಾನ್ ಸಂಭ್ರಮ ಮನೆಮಾಡಿದೆ. ಮಾರ್ಚ್ 20ರಂದು ಜಿಲ್ಲಾಧಿಕಾರಿ ದಕ್ಷಿಣ ಕನ್ನಡಕ್ಕೆ ಸಾರ್ವತ್ರಿಕ ರಜೆ ಘೋಷಿಸಿದ್ದಾರೆ.

Eid al-Fitr: ಒಂದು ದಿನ ಮೊದಲೇ ಕರಾವಳಿ ಭಾಗದಲ್ಲಿ ರಂಜಾನ್ ಹಬ್ಬ ಆಚರಣೆ: ಮಾ 20ರಂದು ಸಾರ್ವತ್ರಿಕ ರಜೆ ಘೋಷಣೆ
ಪ್ರಾತಿನಿಧಿಕ ಚಿತ್ರ
Image Credit source: google
Edited By:

Updated on: Mar 19, 2026 | 10:11 PM

ಮಂಗಳೂರು, ಮಾರ್ಚ್​ 19: ರಾಜ್ಯದ ಕರಾವಳಿ ಭಾಗದಲ್ಲಿ ನಾಳೆ ಅಂದರೆ ಮಾರ್ಚ್​​ 20ರಂದು ‘ಈದುಲ್ ಫಿತ್ರ್’ ಹಬ್ಬ (eid-ul-fitr) ಆಚರಣೆ ಮಾಡಲಾಗುತ್ತಿದೆ. ಆ ಮೂಲಕ ಒಂದು ದಿನ ಮೊದಲೇ ರಂಜಾನ್ ಹಬ್ಬ ಆಚರಣೆ ಮಾಡಲಾಗುತ್ತಿದೆ. ಇಂದು ಶವ್ವಾಲ್ ಮಾಸದ ಚಂದ್ರದರ್ಶನ ಹಿನ್ನೆಲೆ ಶುಕ್ರವಾರ ರಂಜಾನ್ ಹಬ್ಬ ಆಚರಣೆಗೆ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಘೋಷಣೆ ಮಾಡಿದ್ದಾರೆ. ಆ ಮೂಲಕ ಕಳೆದ ಒಂದು ತಿಂಗಳಿಂದ ಮುಸ್ಲಿಂ ಬಾಂಧವರು ಶ್ರದ್ಧಾಭಕ್ತಿಯಿಂದ ಆಚರಿಸುತ್ತಿದ್ದ ಉಪವಾಸ ವ್ರತ ಮುಕ್ತಾಯವಾಗಲಿದೆ.

ಇಂದಿಗೆ ಉಪವಾಸ ವ್ರತ ಕೊನೆ

ಕಳೆದ ಒಂದು ತಿಂಗಳಿಂದ ಮುಸ್ಲಿಂ ಬಾಂಧವರು ಉಪವಾಸ ವ್ರತ ಆಚರಿಸುತ್ತಿದ್ದರು. ಚಂದ್ರದರ್ಶನ ಹಿನ್ನೆಲೆಯಲ್ಲಿ ಇಂದಿಗೆ ಉಪವಾಸ ವ್ರತ ಕೊನೆಯಾಗಿದೆ. ಹೀಗಾಗಿ ನಾಳೆ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಮೂಲಕ ಹಬ್ಬ ಆಚರಣೆ ಮಾಡಲಾಗುತ್ತದೆ. ಇತ್ತ ಮನೆಗಳಲ್ಲಿ ಹಬ್ಬದ ಅಡುಗೆಯ ತಯಾರಿ ಕೂಡ ಜೋರಾಗಿದೆ.

ಇದನ್ನೂ ಓದಿ: ಪುಂಡರ ಅಟ್ಟಹಾಸ ನೋಡಿ! ರಂಜಾನ್ ಉಪವಾಸದ ಲಾಂಗ್ ಡ್ರೈವ್ ಹೆಸರಲ್ಲಿ ಬಂದು ಚೆನ್ನೈ ಎಕ್ಸ್​ಪ್ರೆಸ್ ವೇನಲ್ಲಿ ವ್ಹೀಲಿಂಗ್

ಶುಕ್ರವಾರ ಬೆಳಗಿನ ವೇಳೆ ಜಿಲ್ಲೆಯ ಪ್ರಮುಖ ಮಸೀದಿಗಳಲ್ಲಿ ವಿಶೇಷ ಈದ್ ನಮಾಜ್ ನಡೆಯಲಿದೆ. ಸಾವಿರಾರು ಭಕ್ತರು ಒಂದೇ ಸ್ಥಳದಲ್ಲಿ ಸೇರಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸುತ್ತಾರೆ. ಬಳಿಕ ಪರಸ್ಪರ ಹಸ್ತಲಾಘವ ಮತ್ತು ಆಲಿಂಗಿಸಿಕೊಳ್ಳುವ ಮೂಲಕ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ.

ನಾಳೆ ಸಾರ್ವತ್ರಿಕ ರಜೆ

ಇನ್ನು ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅವರಿಂದ ರಂಜಾನ್ ಹಬ್ಬ ಘೋಷಣೆ ಆಗುತ್ತಿದ್ದಂತೆ ಇತ್ತ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹೆಚ್.ವಿ.ದರ್ಶನ್, ನಾಳೆ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಿದ್ದಾರೆ. ಸದ್ಯ ಕರಾವಳಿ ಭಾಗದಲ್ಲಿ ರಂಜಾನ್ ಹಬ್ಬದ ಸಂಭ್ರಮ ಕಳೆಗಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us