ಕರಾವಳಿಯಲ್ಲಿ ಚಂದ್ರನ ದರ್ಶನ: ನಾಳೆಯಿಂದ ರಂಜಾನ್ ಉಪವಾಸ ಆರಂಭ

Ramadan 2024: ಸೌದಿ ಅರೇಬಿಯಾದಲ್ಲಿ ನಿನ್ನೆ ಚಂದ್ರನ ದರ್ಶನವಾಗಿದ್ದು, ಇಂದಿನಿಂದ ರಂಜಾನ್ ತಿಂಗಳು ಆರಂಭಗೊಂಡಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಚಂದ್ರನ ದರ್ಶನವಾಗಿದ್ದು, ನಾಳೆಯಿಂದ ಉಪವಾಸ ಆರಂಭವಾಗಲಿದೆ. ಈ ಬಗ್ಗೆ ಮಂಗಳೂರಿನ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಎಸ್.ಎಂ.ರಶೀದ್ ಹಾಜಿ ಮಾಹಿತಿ ನೀಡಿದ್ದಾರೆ.

ಕರಾವಳಿಯಲ್ಲಿ ಚಂದ್ರನ ದರ್ಶನ: ನಾಳೆಯಿಂದ ರಂಜಾನ್ ಉಪವಾಸ ಆರಂಭ
ಕರಾವಳಿಯಲ್ಲಿ ಚಂದ್ರನ ದರ್ಶನ: ನಾಳೆಯಿಂದ ರಂಜಾನ್ ಉಪವಾಸ ಆರಂಭ (ಸಾಂದರ್ಭಿಕ ಚಿತ್ರ)
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Rakesh Nayak Manchi

Updated on:Mar 11, 2024 | 10:15 PM

ಮಂಗಳೂರು, ಮಾ.11: ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಚಂದ್ರನ ದರ್ಶನವಾಗಿದ್ದು, ನಾಳೆಯಿಂದ ಇಸ್ಲಾಂ ಮತದ ಪವಿತ್ರ ರಂಜಾನ್ (Ramadan 2024) ತಿಂಗಳು ಆರಂಭವಾಗಲಿದೆ. ದಕ್ಷಿಣ ಕನ್ನಡ (Dakshina Kannada), ಉಡುಪಿ, ಕಾಸರಗೋಡು ಸೇರಿದಂತೆ ಕರಾವಳಿಯಲ್ಲಿ ಮುಸ್ಲಿಂ ಸಮುದಾಯದವರು ಉಪವಾಸ ಆರಂಭಿಸಲಿದ್ದಾರೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಪರವಾಗಿ ಮಂಗಳೂರಿನ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಎಸ್.ಎಂ.ರಶೀದ್ ಹಾಜಿ ಮಾಹಿತಿ ನೀಡಿದ್ದಾರೆ.

ಮಂಗಳವಾರದಿಂದ ಉಪವಾಸ ಆಚರಿಸುವಂತೆ ಉಡುಪಿ ಸಂಯುಕ್ತ ಖಾಝಿ ಅಲ್‌ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಹಾಗೂ ಉಳ್ಳಾಲ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್‌ಬುಖಾರಿ ಕರೆ ನೀಡಿದ್ದಾಗಿ ಪ್ರಕಟನೆ ಹೊರಡಿಸಲಾಗಿದೆ.

ಇದನ್ನೂ ಓದಿ: Ramadan 2024: ರಂಜಾನ್ ಹಬ್ಬ; ಭಾರತದಲ್ಲಿ ಚಂದ್ರನ ದರ್ಶನ ಯಾವಾಗ?

ದೇಶದ ವಿವಿಧ ಭಾಗಗಳಲ್ಲಿ ನಾಳೆಯಿಂದ ರಂಜಾನ್

ಪವಿತ್ರ ರಂಜಾನ್ ತಿಂಗಳ ಆರಂಭಿಸಲು ಚಂದ್ರನ ದರ್ಶನಕ್ಕಾಗಿ ಪ್ರಪಂಚದಾದ್ಯಂತದ ಮುಸ್ಲಿಮರು ಕಾತುರದಿಂದ ಕಾಯುತ್ತಿದ್ದರು. ಇದೀಗ ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ ಚಂದ್ರನ ದರ್ಶನವಾಗಿದ್ದು, ಭಾರತದ ವಿವಿಧ ಭಾಗಗಳಲ್ಲಿ ಚಂದ್ರನ ದರ್ಶನವಾಗಿದೆ. ಹೀಗಾಗಿ ಮಂಗಳವಾರದಿಂದ ಅಂದರೆ, ನಾಳೆಯಿಂದಲೇ ಮುಸ್ಲಿಂ ಸಮುದಾಯದವರು ಉಪವಾಸ ಆರಂಭಿಸಲಿದ್ದಾರೆ. ದೇಶದ ಹಲವು ಭಾಗಗಳಲ್ಲಿ ಚಂದ್ರನ ದರ್ಶನವಾಗಿರುವುದರಿಂದ ಮೊದಲ ರಂಜಾನ್ ಮಂಗಳವಾರ, ಮಾರ್ಚ್ 12 ರಂದು ಬರುತ್ತದೆ ಎಂದು ಘೋಷಿಸಿದ್ದಾಗಿ ರುಯಾತ್-ಎ-ಹಿಲಾಲ್ ಸಮಿತಿ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:03 pm, Mon, 11 March 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ