ಎಸ್.ಡಿ.ಎಮ್ ಡಿಗ್ರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಬಿ.ಯಶೋವರ್ಮ ವಿಧಿವಶ

ಎಸ್.ಡಿ.ಎಮ್ ಡಿಗ್ರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಬಿ.ಯಶೋವರ್ಮ ವಿಧಿವಶ
ನಿವೃತ್ತ ಪ್ರಾಂಶುಪಾಲ ಡಾ.ಬಿ.ಯಶೋವರ್ಮ

ನಿವೃತ್ತಿ ಬಳಿಕ ಅನಾರೋಗ್ಯದಿಂದ ಬಳಲುತ್ತಿದ್ದು, ಸಿಂಗಾಪೂರಕ್ಕೆ ಚಿಕಿತ್ಸೆಗಾಗಿ ಹೋಗಿದ್ದರು. ಭಾನುವಾರ ಮಧ್ಯರಾತ್ರಿ ಬಿಪಿ ಲೋ ಆಗಿ ನಿಧನ ಹೊಂದಿದ್ದಾರೆ.

TV9kannada Web Team

| Edited By: Sushma Chakre

May 23, 2022 | 5:13 PM

ಮಂಗಳೂರು: ಬೆಳ್ತಂಗಡಿ ತಾಲೂಕಿನ ಉಜಿರೆ ಎಸ್.ಡಿ.ಎಮ್ ಡಿಗ್ರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಯಶೋವರ್ಮ (66) ಅವರು ಅನಾರೋಗ್ಯದಿಂದ ಭಾನುವಾರ ಮಧ್ಯರಾತ್ರಿ ಸಿಂಗಪುರದಲ್ಲಿ ವಿಧಿವಶರಾಗಿದ್ದಾರೆ. ನಿವೃತ್ತಿ ಬಳಿಕ ಅನಾರೋಗ್ಯದಿಂದ ಬಳಲುತ್ತಿದ್ದು, ಸಿಂಗಾಪೂರಕ್ಕೆ ಚಿಕಿತ್ಸೆಗಾಗಿ ಹೋಗಿದ್ದರು. ಭಾನುವಾರ ಮಧ್ಯರಾತ್ರಿ ಬಿಪಿ ಲೋ ಆಗಿ ನಿಧನ ಹೊಂದಿದ್ದಾರೆ. ಡಾ.ಯಶೋವರ್ಮ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪತ್ನಿ ಹೇಮಾವತಿ ಹೆಗ್ಗಡೆಯವರ ಸಹೋದರಾಗಿದ್ದಾರೆ. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಎಸ್‍ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿಯಾಗಿದ್ದರು.

Koo App

SDM ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳು, ದಕ್ಷ ಆಡಳಿತಗಾರ, ಆತ್ಮೀಯರಾದ ಡಾ.ಯಶೋವರ್ಮ ಅವರ ನಿಧನದ ಸುದ್ದಿ ಅತೀವ ದುಃಖವನ್ನು ತಂದಿದೆ. ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಶ್ರೀ ಮಂಜುನಾಥ ಸ್ವಾಮಿ ನೀಡಲಿ ಎಂದು ಪ್ರಾರ್ಥನೆ. ಓಂ ಶಾಂತಿ.

Shobha Karandlaje (@shobhabjp) 23 May 2022

ಇದನ್ನೂ ಓದಿ: ಹಿಂದಿ ಸಿನಿಮಾ ಆಫರ್​ ಬದಿಗಿಟ್ಟು ಕನ್ನಡದ ಚಿತ್ರ ಆಯ್ಕೆ ಮಾಡಿಕೊಂಡ ರವಿ ವರ್ಮಾ; ಮನಸಾರೆ ಹೊಗಳಿದ ಅದಿತಿ 

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow us on

Related Stories

Most Read Stories

Click on your DTH Provider to Add TV9 Kannada