ಎಸ್.ಡಿ.ಎಮ್ ಡಿಗ್ರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಬಿ.ಯಶೋವರ್ಮ ವಿಧಿವಶ

ನಿವೃತ್ತಿ ಬಳಿಕ ಅನಾರೋಗ್ಯದಿಂದ ಬಳಲುತ್ತಿದ್ದು, ಸಿಂಗಾಪೂರಕ್ಕೆ ಚಿಕಿತ್ಸೆಗಾಗಿ ಹೋಗಿದ್ದರು. ಭಾನುವಾರ ಮಧ್ಯರಾತ್ರಿ ಬಿಪಿ ಲೋ ಆಗಿ ನಿಧನ ಹೊಂದಿದ್ದಾರೆ.

ಎಸ್.ಡಿ.ಎಮ್ ಡಿಗ್ರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಬಿ.ಯಶೋವರ್ಮ ವಿಧಿವಶ
ನಿವೃತ್ತ ಪ್ರಾಂಶುಪಾಲ ಡಾ.ಬಿ.ಯಶೋವರ್ಮ
Edited By:

Updated on: May 23, 2022 | 5:13 PM

ಮಂಗಳೂರು: ಬೆಳ್ತಂಗಡಿ ತಾಲೂಕಿನ ಉಜಿರೆ ಎಸ್.ಡಿ.ಎಮ್ ಡಿಗ್ರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಯಶೋವರ್ಮ (66) ಅವರು ಅನಾರೋಗ್ಯದಿಂದ ಭಾನುವಾರ ಮಧ್ಯರಾತ್ರಿ ಸಿಂಗಪುರದಲ್ಲಿ ವಿಧಿವಶರಾಗಿದ್ದಾರೆ. ನಿವೃತ್ತಿ ಬಳಿಕ ಅನಾರೋಗ್ಯದಿಂದ ಬಳಲುತ್ತಿದ್ದು, ಸಿಂಗಾಪೂರಕ್ಕೆ ಚಿಕಿತ್ಸೆಗಾಗಿ ಹೋಗಿದ್ದರು. ಭಾನುವಾರ ಮಧ್ಯರಾತ್ರಿ ಬಿಪಿ ಲೋ ಆಗಿ ನಿಧನ ಹೊಂದಿದ್ದಾರೆ. ಡಾ.ಯಶೋವರ್ಮ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪತ್ನಿ ಹೇಮಾವತಿ ಹೆಗ್ಗಡೆಯವರ ಸಹೋದರಾಗಿದ್ದಾರೆ. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಎಸ್‍ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿಯಾಗಿದ್ದರು.

ಇದನ್ನೂ ಓದಿ: ಹಿಂದಿ ಸಿನಿಮಾ ಆಫರ್​ ಬದಿಗಿಟ್ಟು ಕನ್ನಡದ ಚಿತ್ರ ಆಯ್ಕೆ ಮಾಡಿಕೊಂಡ ರವಿ ವರ್ಮಾ; ಮನಸಾರೆ ಹೊಗಳಿದ ಅದಿತಿ 

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 10:16 am, Mon, 23 May 22