ಮಂಗಳೂರಿನಲ್ಲಿ ಆಯೋಜಿಸಿದ್ದ ರೋಹಿತ್ ಚಕ್ರತೀರ್ಥಗೆ ನಾಗರಿಕ ಸನ್ಮಾನ ರದ್ದು

ಸನ್ಮಾನ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದವು. ಈ ಹಿನ್ನೆಲೆ ಕಾರ್ಯಕ್ರಮವನ್ನು ಸದ್ಯ ಮುಂದೂಡಲಾಗಿದೆ. ಸನ್ಮಾನ ಕಾರ್ಯಕ್ರಮಕ್ಕೆಂದು ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗೂ ಆಹ್ವಾನಿಸಲಾಗಿತ್ತು.

ಮಂಗಳೂರಿನಲ್ಲಿ ಆಯೋಜಿಸಿದ್ದ ರೋಹಿತ್ ಚಕ್ರತೀರ್ಥಗೆ ನಾಗರಿಕ ಸನ್ಮಾನ ರದ್ದು
ರೋಹಿತ್ ಚಕ್ರತೀರ್ಥ
Follow us
TV9 Web
| Updated By: sandhya thejappa

Updated on:Jun 25, 2022 | 8:18 AM

ಮಂಗಳೂರು: ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಆಯೋಜಿಸಿದ್ದ ರೋಹಿತ್ ಚಕ್ರತೀರ್ಥ (Rohith Chakrathirtha) ಅವರಿಗೆ ನಾಗರಿಕ ಸನ್ಮಾನ ಕಾರ್ಯಕ್ರಮವನ್ನು ರುದ್ದುಗೊಳಿಸಲಾಗಿದೆ. ಇಂದು (ಜೂನ್ 25) ಕೆನರಾ (Canara College) ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಆದರೆ ಪಠ್ಯ ಪರಿಷ್ಕರಣೆ ವಿವಾದದಿಂದ ಎಡಪಂಥೀಯ ಸಂಘಟನೆಗಳು ಸನ್ಮಾನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿವೆ. ಜೊತೆಗೆ ಸನ್ಮಾನ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದವು. ಈ ಹಿನ್ನೆಲೆ ಕಾರ್ಯಕ್ರಮವನ್ನು ಸದ್ಯ ಮುಂದೂಡಲಾಗಿದೆ. ಸನ್ಮಾನ ಕಾರ್ಯಕ್ರಮಕ್ಕೆಂದು ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗೂ ಆಹ್ವಾನಿಸಲಾಗಿತ್ತು.

ಮತ್ತೊಂದು ಸಮಿತಿ ರಚನೆ: ರೋಹಿತ್ ಚಕ್ರತೀರ್ಥ ಸಮಿತಿ ಪಠ್ಯ ಪರಿಷ್ಕರಣೆ ನಂತರ ವಾದ-ಪ್ರತಿವಾದಗಳ ಅಡಕತ್ತರಿಗೆ ಸಿಲುಕಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಮ್ಮೆ ಪಠ್ಯ ಪರಿಷ್ಕರಣೆಗೆ ಮುಂದಾಗಿದೆ. ರೋಹಿತ್ ಚಕ್ರತೀರ್ಥ ಸಮಿತಿ ನಿರ್ವಹಿಸಿದ್ದ ಪರಿಷ್ಕರಣೆಯಲ್ಲಿ ಹಲವು ಸಮಸ್ಯೆಗಳು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೂಚನೆಯಂತೆ ಮತ್ತೊಮ್ಮೆ ಪಠ್ಯ ಪುಸ್ತಕಗಳಲ್ಲಿ ಅಗತ್ಯ ಮಾರ್ಪಾಡು ತರಲು ರಾಜ್ಯ ಸರ್ಕಾರ ಮುಂದಾಗಿದೆ. ಪಠ್ಯ ಪರಿಷ್ಕರಣೆಗಾಗಿ ಹೊಸದಾಗಿ ಮತ್ತೊಂದು ಸಮಿತಿ ರಚಿಸಲಾಗಿದೆ. ಆದರೆ ಈ ಸಮಿತಿಯಲ್ಲಿ ಶಿಕ್ಷಣ ತಜ್ಞರು, ಚಿಂತಕರು, ಸಾಹಿತಿಗಳು ಇಲ್ಲ.

ಇದನ್ನೂ ಓದಿ: ಚಾಕುನಿಂದ ಪತ್ನಿಯ ಕತ್ತು ಸೀಳಿದ ಗಂಡ ಪಕ್ಕದಲ್ಲೇ ಕೈ ಹಿಡಿದು ಕೂತು ಅವಳ ಫೇವರಿಟ್ ಹಾಡು ಪ್ಲೇ ಮಾಡಿದನಂತೆ!

ಇದನ್ನೂ ಓದಿ
Image
ಚಾಕುನಿಂದ ಪತ್ನಿಯ ಕತ್ತು ಸೀಳಿದ ಗಂಡ ಪಕ್ಕದಲ್ಲೇ ಕೈ ಹಿಡಿದು ಕೂತು ಅವಳ ಫೇವರಿಟ್ ಹಾಡು ಪ್ಲೇ ಮಾಡಿದನಂತೆ!
Image
Ram Gopal Varma: ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಬಗ್ಗೆ ವಿವಾದಾತ್ಮಕ ಟ್ವೀಟ್; ರಾಮ್​ಗೋಪಾಲ್ ವರ್ಮ ವಿರುದ್ಧ ದೂರು ದಾಖಲು
Image
ರಸ್ತೆಗೆ ಸ್ಪೀಡ್ ಬ್ರೇಕರ್ಸ್ ಅಳವಡಿಸಲು ಬಿಬಿಎಂಪಿಗೆ ಡೆಡ್​ಲೈನ್​ ನೀಡಿದ ಬೆಂಗಳೂರು ವಿವಿ ವಿದ್ಯಾರ್ಥಿಗಳು
Image
IND vs LEI: ಭರತ್ ಮೇಲೆ ಭಾರತ ನಂಬಿಕೆ: ದ್ವಿತೀಯ ಇನ್ನಿಂಗ್ಸ್​​ನಲ್ಲಿ ಟೀಮ್ ಇಂಡಿಯಾ ಮುನ್ನಡೆ

ಸಾಹಿತಿಗಳಿಗೆ ಅಥವಾ ಪ್ರಭಾವಿಗಳಿಗೆ ಅವಕಾಶ ನೀಡಿದರೆ ಮತ್ತೆ ವಿರೋಧ ಕೇಳಿ ಬರುವ ಆತಂಕದಿಂದ ಸಮಿತಿಯಲ್ಲಿ ಶಿಕ್ಷಣ ಇಲಾಖೆಯು ಯಾರಿಗೂ ಅವಕಾಶ ನೀಡಿಲ್ಲ. ಜಿಲ್ಲಾ ಮಟ್ಟದ ಡಯಟ್ ಕೇಂದ್ರಗಳ ಕೆಲ ಪ್ರಾಚಾರ್ಯರು ಹಾಗೂ ನುರಿತ ಶಿಕ್ಷಕರ ನೇತೃತ್ವದಲ್ಲಿ ತಪ್ಪುಗಳನ್ನು ಸರಿಪಡಿಸುವ ಕೆಲಸಕ್ಕೆ ಚಾಲನೆ ನೀಡಲಾಗಿದೆ. ತಜ್ಞ ಶಿಕ್ಷಕರ ಜೊತೆಗೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳೇ ಪರಿಷ್ಕರಣೆ ಮಾಡಲು ಮುಂದಾಗಿದ್ದಾರೆ.

ಇನ್ನು ಪಠ್ಯ ಪುಸ್ತಕ ಪರಿಷ್ಕರಣೆಯನ್ನು ಕರ್ನಾಟಕ ಸರ್ಕಾರ ಪ್ರಬಲವಾಗಿ ಸಮರ್ಥಿಸಿಕೊಂಡಿದೆ. ಸಚಿವ ಆರ್ ಅಶೋಕ್ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಆರ್.ಅಶೋಕ್ ಗುರುವಾರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಪಠ್ಯ ಪರಿಷ್ಕರಣೆ ಕುರಿತ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು. ಹಿಂದಿನ ಸರ್ಕಾರಗಳು ಕೆಲವು ಪಠ್ಯಗಳನ್ನು ತೆಗೆದುಹಾಕಿವೆ. ಅವರಿಗೆ ರಾಮ, ಈಶ್ವರ ಹೆಸರು ಕೇಳಲು ಇಷ್ಟ ಇರಲಿಲ್ಲ. ಅವರಿಗೆ ಬೇಕು ಬೇಕಾದಂತೆ ಪಠ್ಯಗಳನ್ನು ಸೇರಿಸುತ್ತಿದ್ದರು. ನಮ್ಮ ಸರ್ಕಾರ ಇದ್ದಾಗ ಕುವೆಂಪು ಅವರ 8 ಪದ್ಯ / ಗದ್ಯ ಸೇರಿಸಿದ್ದೆವು. ಹಿಡನ್ ಅಜೆಂಡಾ ಇರುವ ಕೆಲ ಸಾಹಿತಿಗಳು ಹಿಂದೂ ಮಲಗಿದರೆ ದೇಶ ಮಲಗುತ್ತೆ ಎಂಬ‌ ಭ್ರಮೆಯಲ್ಲಿದ್ದಾರೆ. ಸಿದ್ದರಾಮಯ್ಯ ಅವಧಿಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆಯಾದಾಗ ಈ ಸಾಹಿತಿಗಳು ಏಕೆ ಧ್ವನಿ ಎತ್ತಲಿಲ್ಲ ಎಂದು ಪ್ರಶ್ನಿಸಿದ್ದರು.

Published On - 8:12 am, Sat, 25 June 22

ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮರಳಿನಲ್ಲಿ ಸಿಲುಕಿಕೊಂಡ ಫೆರಾರಿ ಕಾರು; ರಸ್ತೆಗೆ ಎಳೆದು ತಂದ ಎತ್ತಿನ ಗಾಡಿ
ಮರಳಿನಲ್ಲಿ ಸಿಲುಕಿಕೊಂಡ ಫೆರಾರಿ ಕಾರು; ರಸ್ತೆಗೆ ಎಳೆದು ತಂದ ಎತ್ತಿನ ಗಾಡಿ