AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೈವದ ಗಗ್ಗರ ಕಟ್ಟಲು ಕಾಲುಗಳೇ ಇಲ್ಲ: ದೈವ ನರ್ತಕನಿಗೆ ಆಸರೆಯಾದ ಕೃತಕ ಕಾಲು

ಮಂಗಳೂರು ರೋಟರಿ ಕ್ಲಬ್ ಕಾಸರಗೋಡಿನ ಹಿರಿಯ ದೈವ ನರ್ತಕ ಬಾಬು ಅವರಿಗೆ ಹೊಸ ಬದುಕು ನೀಡಿದೆ. ಮಧುಮೇಹದಿಂದ ಎಡಗಾಲು ಕಳೆದುಕೊಂಡು ಸಂಕಷ್ಟದಲ್ಲಿದ್ದ ಬಾಬು, ರೋಟರಿ ಮಾಜಿ ಗವರ್ನರ್ ಡಾ. ದೇವದಾಸ್ ರೈ ನೆರವಿನಿಂದ 2.10 ಲಕ್ಷ ರೂ. ಮೌಲ್ಯದ ಕೃತಕ ಕಾಲು ಪಡೆದರು. ರೋಟರಿ ಮಂಗಳೂರು ಸೆಂಟ್ರಲ್‌ನ ಈ ಮಾನವೀಯ ಕಾರ್ಯದಿಂದ ಬಾಬು ಈಗ ಆಧಾರವಿಲ್ಲದೆ ನಡೆಯುತ್ತಿದ್ದು, ತಮ್ಮ 'ಮರುಜೀವ'ಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ದೈವದ ಗಗ್ಗರ ಕಟ್ಟಲು ಕಾಲುಗಳೇ ಇಲ್ಲ: ದೈವ ನರ್ತಕನಿಗೆ ಆಸರೆಯಾದ ಕೃತಕ ಕಾಲು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Feb 16, 2026 | 3:31 PM

Share

ಮಂಗಳೂರು, ಫೆ.16: ತುಳುನಾಡಿನ ನಂಬಿಕೆಯ ಪ್ರಕಾರ, ದೈವಗಳು ದೇವರಿಗಿಂತ ಭಿನ್ನ. ದೇವರು ಕಣ್ಣಿಗೆ ಕಾಣದ ಶಕ್ತಿಯಾದರೆ, ದೈವಗಳು ನೆಲದ ಮೇಲೆ ಸಂಚರಿಸುವ, ಭಕ್ತರ ಕಷ್ಟಗಳಿಗೆ ತಕ್ಷಣ ಸ್ಪಂದಿಸುವ ಶಕ್ತಿಗಳು. ದೈವಗಳನ್ನು ನಂಬಿದವರ ಕೈ ಬಿಡದ ಶಕ್ತಿಗಳು  ಎಂದು ಕರೆಯಲಾಗುತ್ತದೆ. ಇನ್ನು ದೈವಗಳ ನೇಮೋತ್ಸವದಂದು ಗಗ್ಗರ ಸೇವೆ ಮೊದಲು ನಡೆಯುತ್ತದೆ. ಈ ವೇಳೆ ದೈವ ನರ್ತಕರು ಕಾಲಿಗೆ ಗಗ್ಗರ ಕಟ್ಟುತ್ತಾರೆ. ಆದರೆ ಇಲ್ಲೊಬ್ಬ ನರ್ತಕರಿಗೆ ಅದನ್ನು ಕಟ್ಟಲು ಕಾಲುಗಳೇ ಇಲ್ಲ. ಇದೀಗ ಕಾಸರಗೋಡು ತಾಲೂಕಿನ ಪೆರ್ಮುದೆ ಗ್ರಾಮದ ಹಿರಿಯ ದೈವ ನರ್ತಕ ಬಾಬು (53 ವರ್ಷ) ಅವರಿಗೆ ಮಂಗಳೂರು ಸೆಂಟ್ರಲ್ ರೋಟರಿ ಸಂಸ್ಥೆಯು ಮಾನವೀಯತೆಯ ನೆಲೆಯಲ್ಲಿ ಹೊಸ ಬದುಕು ನೀಡಿದೆ. ಬಾಬು ಅವರು ದೀರ್ಘಕಾಲದಿಂದ ದೈವ ನರ್ತಕರಾಗಿ ಸೇವೆ ಸಲ್ಲಿಸುತ್ತಿದ್ದರು. ಆದರೆ, ಅತಿಯಾದ ಮಧುಮೇಹದಿಂದಾಗಿ ಅವರ ಎಡಗಾಲಿಗೆ ‘ಗ್ಯಾಂಗ್ರೀನ್’ ರೋಗ ತಗುಲಿತ್ತು. ಪರಿಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ವೈದ್ಯರು ಅವರ ಕಾಲನ್ನೇ ಕತ್ತರಿಸಬೇಕಾಯಿತು.

ಕಾಲು ಕಳೆದುಕೊಂಡು ಆರ್ಥಿಕ ಸಂಕಷ್ಟದಲ್ಲಿದ್ದ ಬಾಬು ಅವರು ರೋಟರಿ ಮಾಜಿ ಜಿಲ್ಲಾ ಗವರ್ನರ್ ಮತ್ತು ಖ್ಯಾತ ವೈದ್ಯರಾದ ಡಾ. ದೇವದಾಸ್ ರೈ ಅವರನ್ನು ಭೇಟಿ ಮಾಡಿ ಸಹಾಯ ಕೋರಿದ್ದರು. ಬಾಬು ಅವರ ಕರುಣಾಜನಕ ಸ್ಥಿತಿಯನ್ನು ಮನಗಂಡ ಡಾ. ರೈ ಅವರು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್‌ನ ಸಮಾಜ ಸೇವಾ ಯೋಜನೆಯಡಿ ಸುಮಾರು 2.10 ಲಕ್ಷ ರೂಪಾಯಿ ಮೌಲ್ಯದ ಕೃತಕ ಕಾಲನ್ನು ಮಂಜೂರು ಮಾಡಿಸಿದರು.

ಇದನ್ನೂ ಓದಿ: ಭಾರತದ ಈ ರೈಲು ನಿಲ್ದಾಣಗಳಿಂದ ನೇರವಾಗಿ ಫಾರಿನ್​ಗೆ ಹೋಗಬಹುದು ಗೊತ್ತೇ!

ಇಲ್ಲಿದೆ ನೋಡಿ ಫೋಟೋ: 

Pm Modi Opens Buddha Piprahwa (9)

ಇತ್ತೀಚೆಗೆ ಮಂಗಳೂರಿನ ಡಾ. ದೇವದಾಸ್ ರೈ ಅವರ ‘ಸೌರಭ್’ ಚಿಕಿತ್ಸಾಲಯದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಾಬು ಅವರಿಗೆ ಕೃತಕ ಕಾಲನ್ನು ಜೋಡಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಕಾರ್ಯದರ್ಶಿ ವಿಕಾಸ್ ಕೋಟ್ಯಾನ್, ಮಾಜಿ ಅಧ್ಯಕ್ಷ ಸಂತೋಷ್ ಶೆಟ್ ಮತ್ತು ಮಾಧ್ಯಮ ಸಲಹೆಗಾರ ಎಂ.ವಿ. ಮಲ್ಯ ಉಪಸ್ಥಿತರಿದ್ದರು. ಈಗ ಬಾಬು ಅವರು ಯಾವುದೇ ಆಧಾರವಿಲ್ಲದೆ ಸುಸೂತ್ರವಾಗಿ ನಡೆದಾಡುತ್ತಿದ್ದು, ತಮಗೆ ಮರುಜೀವ ನೀಡಿದ ರೋಟರಿ ಸಂಸ್ಥೆಗೆ ತುಂಬು ಹೃದಯದ ಕೃತಜ್ಞತೆ ಸಲ್ಲಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:26 pm, Mon, 16 February 26

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್