ಕೊರೊನಾ ಆತಂಕ: ಕೇರಳ-ಕರ್ನಾಟಕ ಗಡಿಯಲ್ಲಿ ಕಠಿಣ ಕ್ರಮ ಜಾರಿ; ಇಂದು ಸಂಜೆ ಜಿಲ್ಲಾಡಳಿತಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ಗಡಿ ಪ್ರದೇಶಗಳ ಮೇಲೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಹೆಚ್ಚಿನ ನಿಗಾ ವಹಿಸಿದ್ದು, ಮಂಗಳೂರು-ಕೇರಳ ಗಡಿ ತಲಪಾಡಿಯಲ್ಲಿ ತಪಾಸಣೆ‌ ಬಿಗಿಯಾಗಿದೆ.

ಕೊರೊನಾ ಆತಂಕ: ಕೇರಳ-ಕರ್ನಾಟಕ ಗಡಿಯಲ್ಲಿ ಕಠಿಣ ಕ್ರಮ ಜಾರಿ; ಇಂದು ಸಂಜೆ ಜಿಲ್ಲಾಡಳಿತಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Skanda

Updated on: Jul 31, 2021 | 8:04 AM

ಮಂಗಳೂರು: ನೆರೆಯ ಕೇರಳ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ (Corona Cases) ಸಂಖ್ಯೆ ಏಕಾಏಕಿ ಹೆಚ್ಚಳವಾಗುತ್ತಿದ್ದು, ಪ್ರತಿನಿತ್ಯ 22 ಸಾವಿರಕ್ಕೂ ಅಧಿಕ ಸೋಂಕಿತರು ಹೊಸದಾಗಿ ಪತ್ತೆಯಾಗುತ್ತಿರುವ ಹಿನ್ನೆಲೆ ಕರ್ನಾಟಕ-ಕೇರಳ (Karnataka – Kerala Border) ಗಡಿ ಪ್ರದೇಶದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ಕಠಿಣ ನಿರ್ಧಾರ ಕೈಗೊಳ್ಳಲಾಗಿದ್ದು ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Karnataka CM Basavaraj Bommai) ಆದೇಶದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ‌.ವಿ.ರಾಜೇಂದ್ರ ಮತ್ತು ಮಂಗಳೂರು ಪೊಲೀಸ್ ಕಮಿಷನರ್ ಎನ್‌.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಆದೇಶದ ಅನ್ವಯ ಕೇರಳಕ್ಕೆ ಹೊಂದಿಕೊಂಡ ದಕ್ಷಿಣ ಕನ್ನಡ ಜಿಲ್ಲೆಯ 18 ಗಡಿ ಪ್ರದೇಶಗಳಲ್ಲಿ ತಪಾಸಣೆ‌ ನಡೆಸುವುದಾಗಿ ಸೂಚಿಸಿದ್ದು, ಆರ್​ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಅಥವಾ ಲಸಿಕೆ ಆದವರಿಗೆ ಮಾತ್ರ ಪ್ರವೇಶ ನೀಡಲು ನಿರ್ಧರಿಸಿಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ಗಡಿ ಪ್ರದೇಶಗಳ ಮೇಲೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಹೆಚ್ಚಿನ ನಿಗಾ ವಹಿಸಿದ್ದು, ಮಂಗಳೂರು-ಕೇರಳ ಗಡಿ ತಲಪಾಡಿಯಲ್ಲಿ ತಪಾಸಣೆ‌ ಬಿಗಿಯಾಗಿದೆ. ಕೇರಳದಲ್ಲಿ ಹೆಚ್ಚುತ್ತಿರುವ ಸೋಂಕು ಕರ್ನಾಟಕಕ್ಕೂ ಆತಂಕಕಾರಿಯಾಗಿದ್ದು, ಒಂದುವೇಳೆ ಸರಿಯಾದ ಕ್ರಮಗಳನ್ನು ಕೈಗೊಳ್ಳದೇ ಇದ್ದಲ್ಲಿ ಅಪಾಯ ಕಟ್ಟಿಟ್ಟಬುತ್ತಿ ಎನ್ನಲಾಗುತ್ತಿದೆ.

ಆದರೆ, ಇತ್ತ ಕೇರಳದಿಂದ ಚಾಮರಾಜನಗರ ಮಾರ್ಗವಾಗಿ ಸಂಪರ್ಕ ಕಲ್ಪಿಸುವ ಚೆಕ್​ಪೋಸ್ಟ್​ನಲ್ಲಿ ತಪಾಸಣೆ ನಡೆಸಲು ಸಿಬ್ಬಂದಿಯೇ ಇಲ್ಲ ಎನ್ನುವ ಪರಿಸ್ಥಿತಿ ಇದ್ದು, ಮೂಲೆಹೊಳೆ ಚೆಕ್​ಪೋಸ್ಟ್​ನಲ್ಲಿ ಆರೋಗ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಕಣ್ಮರೆಯಾಗಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 212ರಲ್ಲಿ ಬರುವ ಮೂಲೆಹೊಳೆ ಚೆಕ್​ಪೋಸ್ಟ್​ನಲ್ಲಿ ಸಂಪೂರ್ಣ ನಿರ್ಲಕ್ಷ್ಯ ಎದ್ದು ಕಾಣುತ್ತಿದ್ದು ಅಪಾಯವನ್ನು ಮೈಮೇಲೆ ಎಳೆದುಕೊಳ್ಳುವಂತಿದೆ.

ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ಇಂದು ಸಂಜೆ 4.55ಕ್ಕೆ ದೆಹಲಿಯಿಂದ ವಾಪಸಾಗಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಜೆ 5.30ಕ್ಕೆ ಕೊರೊನಾ ಹೆಚ್ಚಿರುವ ಜಿಲ್ಲೆಗಳ ಜಿಲ್ಲಾಡಳಿತಗಳ ಜತೆ ಸಭೆ ಹಮ್ಮಿಕೊಂಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬೊಮ್ಮಾಯಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದು, ಬಿಬಿಎಂಪಿ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳ ಜಿಲ್ಲಾಡಳಿತಗಳ ಜತೆ ಸಂವಾದ ನಡೆಸಲಿದ್ದಾರೆ.

ಇದನ್ನೂ ಓದಿ: ಕೇರಳ ಆಯ್ತು, ಈಗ ಕರ್ನಾಟಕ ತಮಿಳುನಾಡಿನಲ್ಲಿ ಹೆಚ್ಚಾದ ಕೊರೊನಾ ಪ್ರಕರಣಗಳು; ದಕ್ಷಿಣ ಕನ್ನಡಕ್ಕೆ ಆತಂಕ 

Corona Cases: ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳ: ದಕ್ಷಿಣ ಕನ್ನಡ ಜಿಲ್ಲೆ ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ

(RTPCR Negative report or Vaccination is must in Kerala Karnataka Border CM Basavaraj Bommai to hold meeting today with District Administration)

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ