ಕೊರೊನಾ ನೆಗೆಟಿವ್ ವರದಿ ಇದ್ದರೆ ಮಾತ್ರ ಪ್ರವೇಶ; ತಲಪಾಡಿ ಗಡಿಯಲ್ಲಿ ಪೊಲೀಸ್ ಬಿಗಿಬಂದೋಬಸ್ತ್
ನಿನ್ನೆ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಕೇರಳ ರಾಜ್ಯದ ಗಡಿಯಲ್ಲಿ ಪ್ರತಿಭಟನೆ ಮಾಡಲಾಗಿತ್ತು. ರಾಜ್ಯದಿಂದ ತೆರಳುತ್ತಿರುವ ಬಸ್‌ಗಳಿಗೆ ತಡೆಯೊಡ್ಡಿದ್ದರು. ಹೀಗಾಗಿ ತಲಪಾಡಿ ಗಡಿಯಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಮಂಗಳೂರು: ರಾಜ್ಯ ಸರ್ಕಾರದ ಸೂಚನೆ ಬೆನ್ನಲ್ಲೇ ಕೇರಳ-ಕರ್ನಾಟಕ ಗಡಿಯಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು ತಲಪಾಡಿ ಗಡಿಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಮಂಗಳೂರು, ಕೇರಳಕ್ಕೆ ಸಂಪರ್ಕ ಕಲ್ಪಿಸುವ ತಲಪಾಡಿಯಲ್ಲಿ ಭದ್ರತೆಗಾಗಿ ಕೆಎಸ್‌ಆರ್‌ಪಿ ತುಕಡಿ, ಪೊಲೀಸರ ನಿಯೋಜನೆ ಮಾಡಲಾಗಿದೆ.
ನಿನ್ನೆ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಕೇರಳ ರಾಜ್ಯದ ಗಡಿಯಲ್ಲಿ ಪ್ರತಿಭಟನೆ ಮಾಡಲಾಗಿತ್ತು. ರಾಜ್ಯದಿಂದ ತೆರಳುತ್ತಿರುವ ಬಸ್‌ಗಳಿಗೆ ತಡೆಯೊಡ್ಡಿದ್ದರು. ಹೀಗಾಗಿ ತಲಪಾಡಿ ಗಡಿಯಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸದ್ಯ ಇಂದು ಸಿಎಂ ಬಸವರಾಜ ಬೊಮ್ಮಾಯಿ ಸೂಚನೆಯಂತೆ ಎಡಿಜಿಪಿ ಪ್ರತಾಪ್ ರೆಡ್ಡಿ ತಲಪಾಡಿ ಗಡಿಗೆ ಭೇಟಿ ನೀಡಿದ್ದಾರೆ. ಈ ವೇಳೆ ರಸ್ತೆಯಲ್ಲಿ ನಿಂತು ಮತ್ತೊಮ್ಮೆ ಕೇರಳಿಗರು ಪ್ರತಿಭಟನೆ ಮಾಡುತ್ತಿದ್ದಾರೆ. ಕೊವಿಡ್ ನೆಗೆಟಿವ್ ವರದಿ ಕಡ್ಡಾಯ ಎಂಬ ಆದೇಶವನ್ನು ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನು ಪ್ರತಿಭಟನೆ ನಡುವೆಯೂ ಎಡಿಜಿಪಿ ಪ್ರತಾಪ್ ರೆಡ್ಡಿ ಗಡಿಯಲ್ಲಿ ಭದ್ರತೆಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಎಡಿಜಿಪಿಗೆ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್, ದಕ್ಷಿಣ ಕನ್ನಡ ಎಸ್‌ಪಿ ಋಷಿಕೇಶ್ ಸೋನಾವಣೆ ಸಾಥ್ ನೀಡಿದ್ದಾರೆ. ಗಡಿಯಲ್ಲಿ ತಪಾಸಣೆ ಬಗ್ಗೆ ದಕ್ಷಿಣ ಕನ್ನಡ ಡಿಸಿ ಮಾಹಿತಿ ನೀಡಿದ್ರು. ಇನ್ನು ವೇಳೆ ಮಾತನಾಡಿದ ಪ್ರತಾಪ್‌ರೆಡ್ಡಿ, ಕೇರಳದಲ್ಲಿ ಕೊರೊನಾ ಪ್ರಕರಣ ಹೆಚ್ಚಾದ ಹಿನ್ನೆಲೆ ತಪಾಸಣೆ ನಡೆಸಲಾಗುತ್ತಿದೆ. ಕೇರಳದಲ್ಲಿ ಕೊರೊನಾ ಇಳಿಕೆಯಾಗುವವರೆಗೆ ತಪಾಸಣೆ ನಡೆಯುತ್ತೆ. ಸದ್ಯಕ್ಕೆ ತಲಪಾಡಿ ಗಡಿಯಲ್ಲಿ ಯಾವುದೇ ಗೊಂದಲವಿಲ್ಲ. ತುರ್ತುಸೇವೆಗೆ ಅವಕಾಶ ನೀಡಲಾಗಿದೆ ಎಂದು ಪ್ರತಾಪ್‌ರೆಡ್ಡಿ ತಿಳಿಸಿದ್ದಾರೆ. ಪರೀಕ್ಷಾ ಪ್ರವೇಶ ಪತ್ರ ತೋರಿಸಿದರೂ ಬಿಡಲಾಗುತ್ತದೆ. ಕೇರಳ ಭಾಗದ ವಿದ್ಯಾರ್ಥಿಗಳನ್ನು ಬಿಡಲಾಗುವುದು ಎಂದು ಹೇಳಿದರು.
ಇನ್ನು ರಾಜ್ಯದಲ್ಲಿ ಕೊರೊನಾ 3ನೇ ಅಲೆಯ ಆತಂಕ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಬೀದರ್ ಜಿಲ್ಲೆಯ ಗಡಿಯಲ್ಲಿ ತಪಾಸಣೆ ನಡೆಸಲಾಗುತ್ತಿದೆ. ರಾಜ್ಯ ಸರ್ಕಾರದ ಆದೇಶದಂತೆ ಗಡಿಯಲ್ಲಿ ತಪಾಸಣೆ ಕೈಗೊಂಡಿದ್ದು ಕೊವಿಡ್ ನೆಗೆಟಿವ್ ವರದಿ ಇದ್ದರೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ. ಉಳಿದವರು ರಾಜ್ಯದೊಳಗೆ ಪ್ರವೇಶಿಸಲು ಅವಕಾಶವಿಲ್ಲ.
ಇದನ್ನೂ ಓದಿ: ನವ ಜೋಡಿಗೆ ಉಡುಗೊರೆ ನೀಡಲು ಸ್ನೇಹಿತರ ಸಕತ್ ಪ್ಲಾನ್! ಗಿಫ್ಟ್ ನೋಡಿ ನಗುತ್ತಾ ನಾಚಿ ತಲೆ ತಗ್ಗಿಸಿದ ವಧು
Published On - 12:47 pm, Tue, 3 August 21