ಮಂಗಳೂರು ಡಿಸಿಪಿ ಕಾರಿನ ಮೇಲೆ ಮರಳು ಲಾರಿ ಹತ್ತಿಸಲು ಯತ್ನ: ಚಾಲಕನ ಬಂಧನ

ಡಿಸಿಪಿ ಕಾರಿನ ಮೇಲೆ ಮರಳು ಸಾಗಣೆ ಲಾರಿ ಹತ್ತಿಸಲು ಪ್ರಯತ್ನಿಸಿರುವ ಘಟನೆ ಪರಂಗಿಪೇಟೆ ಔಟ್​ಪೋಸ್ಟ್​ನಲ್ಲಿ ಈಚೆಗೆ ನಡೆದಿದೆ.

ಮಂಗಳೂರು ಡಿಸಿಪಿ ಕಾರಿನ ಮೇಲೆ ಮರಳು ಲಾರಿ ಹತ್ತಿಸಲು ಯತ್ನ: ಚಾಲಕನ ಬಂಧನ
ಡಿಸಿಪಿಯಿದ್ದ ವಾಹನಕ್ಕೆ ಡಿಕ್ಕಿ ಹೊಡೆಯಲು ಯತ್ನಿಸಿದ ಲಾರಿ ಮತ್ತು ಡಿಸಿಪಿ ಹರಿರಾಮ್ ಶಂಕರ್
Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Oct 21, 2021 | 11:39 PM

ಮಂಗಳೂರು: ಡಿಸಿಪಿ ಕಾರಿನ ಮೇಲೆ ಮರಳು ಸಾಗಣೆ ಲಾರಿ ಹತ್ತಿಸಲು ಪ್ರಯತ್ನಿಸಿರುವ ಘಟನೆ ಪರಂಗಿಪೇಟೆ ಔಟ್​ಪೋಸ್ಟ್​ನಲ್ಲಿ ಈಚೆಗೆ ನಡೆದಿದೆ. ಮಂಗಳೂರು ಹೊರವಲಯದ ಪರಂಗಿಪೇಟೆ ಔಟ್​ಪೋಸ್ಟ್​ನಲ್ಲಿ ಅಕ್ರಮ ಮರಳು ಸಾಗಣೆ ತಡೆಯಲು ಡಿಸಿಪಿ ಹರಿರಾಮ್ ಶಂಕರ್ ಪ್ರಯತ್ನಿಸಿದ್ದರು.

ಅಡ್ಯಾರು ಬಳಿ ಅಕ್ರಮ ಮರಳು ಸಾಗಣೆ ನಡೆಯುತ್ತಿರುವ ಕುರಿತು ಸಾರ್ವಜನಿಕರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಮಧ್ಯರಾತ್ರಿ ವೇಳೆ ದಾಳಿ ನಡೆಸಿದ್ದ ಡಿಸಿಪಿ ಹರಿರಾಮ್ ಶಂಕರ್​ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿ ಬೆನ್ನಟ್ಟಿ, ಪರಂಗಿಪೇಟೆ ಔಟ್​ ಪೋಸ್ಟ್​ ಬಳಿ ಲಾರಿ ಅಡ್ಡಗಟ್ಟಿದ್ದರು. ಈ ವೇಳೆ ಡಿಸಿಪಿ ಕಾರಿನ ಮೇಲೆ ಲಾರಿ ಹತ್ತಿಸಲು ಚಾಲಕ ಪ್ರಯತ್ನಿಸಿದ್ದ. ಬಳಿಕ ಔಟ್​ಪೋಸ್ಟ್​ನ ಬ್ಯಾರಿಕೇಡ್​ಗೆ ಡಿಕ್ಕಿ ಹೊಡೆಸಿ ಪರಾರಿಯಾಗಿದ್ದ.

ಮತ್ತೆ ಮರಳು ಸಾಗಣೆ ಲಾರಿ ಹಿಂಬಾಲಿಸಿದ್ದ ಡಿಸಿಪಿ ಹರಿರಾಮ್ ಸೂಚನೆಯಂತೆಎ ಪೊಲೀಸರು ಬಂಟ್ವಾಳದಲ್ಲಿ ಮರಳು ಲಾರಿ ವಶಕ್ಕೆ ಪಡೆದರು. ಲಾರಿ ಚಾಲಕ ಮತ್ತು ಲಾರಿಯನ್ನು ಹಿಂಬಾಲಿಸುತ್ತಿದ್ದ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದರು.

ಆರೋಪಿಗಳ ವಿರುದ್ಧ ಮರಳು ಕಳವು, ನಿರ್ಲಕ್ಷ್ಯದ ಚಾಲನೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಮೊಕದ್ದಮೆ ದಾಖಲು ಮಾಡಲಾಗಿದೆ. ಮರಳುಗಳ್ಳರು ತಪ್ಪಿಸಿಕೊಂಡು ಹೋಗುವ ಸಿಸಿಟಿವಿ ದೃಶ್ಯ ಪೊಲೀಸರಿಗೆ ಸಿಕ್ಕಿದೆ.

ಇದನ್ನೂ ಓದಿ: ‘ಸಲಗ’ VS​ ‘ರಿಯಲ್​ ಎಸ್ಟೇಟ್​’ ಸಿನಿಮಾಗಳ ವಿವಾದ ಅಂತ್ಯ; ಪೊಲೀಸ್​ ಠಾಣೆಯಲ್ಲಿ ಸಂಧಾನ
ಇದನ್ನೂ ಓದಿ: Crime News: ಬೆಂಗಳೂರಿನಲ್ಲಿ ಅಂಬರ್​ಗ್ರೀಸ್ ಮಾರುತ್ತಿದ್ದ ಐವರ ಬಂಧನ