AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆ. 2 ರಂದು ಗಣೇಶನ ಹಬ್ಬಕ್ಕೆ ಮಂಗಳೂರಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ, ಕಾರಣ ಇಲ್ಲಿದೆ

ಸೆ.2ರಂದು ಮಂಗಳೂರಿನಲ್ಲಿ ‌ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ನಡೆಯಲಿದೆ. ಅಲ್ಲದೆ ಹಲವೆಡೆ ಗಣೇಶೋತ್ಸವ ‌ಶೋಭಾಯಾತ್ರೆ ನಡೆಯಲಿದ್ದು ಇದರಿಂದ ಜನಸಂಚಾರ ಮತ್ತು‌ ವಾಹನದಟ್ಟಣೆ ಹಿನ್ನೆಲೆ ರಜೆ ಘೋಷಣೆ ಮಾಡಲಾಗಿದೆ.

ಸೆ. 2 ರಂದು ಗಣೇಶನ ಹಬ್ಬಕ್ಕೆ ಮಂಗಳೂರಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ, ಕಾರಣ ಇಲ್ಲಿದೆ
ಸಾಂಧರ್ಬಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Aug 30, 2022 | 4:13 PM

Share

ಮಂಗಳೂರು: ಸೆಪ್ಟೆಂಬರ್ 2 ರಂದು ‌ಮಂಗಳೂರಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಗಣೇಶೋತ್ಸವ ಮೆರವಣಿಗೆ ಮತ್ತು ಪ್ರಧಾನಿ ಮೋದಿ ಕಾರ್ಯಕ್ರಮ ಇರುವುದರಿಂದ ವಾಹನದಟ್ಟಣೆ ಸಾಧ್ಯತೆ ಹಿನ್ನೆಲೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಪ್ರಧಾನಿ ನರೇಂದ್ರ ‌ಮೋದಿ ಅವರು ಸೆಪ್ಟೆಂಬರ್ 1 ಮತ್ತು 2 ರಂದು ಕೇರಳ ಮತ್ತು ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಸೆ.2ರಂದು ಮಂಗಳೂರಿನಲ್ಲಿ ‌ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ನಡೆಯಲಿದೆ. ಅಲ್ಲದೆ ಹಲವೆಡೆ ಗಣೇಶೋತ್ಸವ ‌ಶೋಭಾಯಾತ್ರೆ ನಡೆಯಲಿದ್ದು ಇದರಿಂದ ಜನಸಂಚಾರ ಮತ್ತು‌ ವಾಹನದಟ್ಟಣೆ ಹಿನ್ನೆಲೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ 3,800 ಕೋಟಿ ರೂ. ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ

ಸೆ. 2ರಂದು ಮಧ್ಯಾಹ್ನ 1.30ಕ್ಕೆ ಮಂಗಳೂರಿನಲ್ಲಿ ಸುಮಾರು 3,800 ಕೋಟಿ ರೂ.ಗಳ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ. 1951ರಲ್ಲಿ ಜವಾಹರಲಾಲ್ ನೆಹರೂ ಪ್ರಧಾನಿಯಾಗಿದ್ದಾಗ ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದ ಉದ್ಘಾಟನೆಗೆ ಆಗಮಿಸಿದ್ದರು. ಲಾಲ್​ ಬಹದ್ದೂರ್ ಶಾಸ್ತ್ರಿ, ರಾಜೀವ್ ಗಾಂಧಿ ಕೂಡ ಪ್ರಧಾನಿಯಾಗಿದ್ದಾಗ ಮಂಗಳೂರಿಗೆ ಆಗಮಿಸಿದ್ದರು. ಅಟಲ್ ಬಿಹಾರಿ ವಾಜಪೇಯಿ ಕೂಡ ಮಂಗಳೂರು, ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದರು. ಇದೀಗ ನರೇಂದ್ರ ಮೋದಿಯವರು ಈ ವಾರ ಮಂಗಳೂರಿಗೆ ಆಗಮಿಸಲಿದ್ದಾರೆ.

ಪ್ರಧಾನಮಂತ್ರಿಯವರು ಭಾರತದಲ್ಲಿ ಮೊದಲ ಬಾರಿಗೆ ವಿನ್ಯಾಸಗೊಳಿಸಿದ ಮತ್ತು ನಿರ್ಮಿಸಿದ ಯುದ್ಧನೌಕೆಯನ್ನು ಉದ್ಘಾಟನೆ ಮಾಡಲಿದ್ದಾರೆ. ಭಾರತೀಯ ನೌಕಾಪಡೆಯ ಆಂತರಿಕ ಯುದ್ಧನೌಕೆ ವಿನ್ಯಾಸ ಬ್ಯೂರೋ (WDB) ವಿನ್ಯಾಸಗೊಳಿಸಿದ ಮತ್ತು ಬಂದರುಗಳು, ಶಿಪ್ಪಿಂಗ್ ಮತ್ತು ಜಲಮಾರ್ಗಗಳ ಸಚಿವಾಲಯದ ಅಡಿಯಲ್ಲಿ ಸಾರ್ವಜನಿಕ ವಲಯದ ಶಿಪ್‌ಯಾರ್ಡ್ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಿಂದ ನಿರ್ಮಿಸಲ್ಪಟ್ಟಿದೆ. ವಿಕ್ರಾಂತ್ ಅತ್ಯಾಧುನಿಕ ಯಾಂತ್ರೀಕೃತಗೊಂಡ ವೈಶಿಷ್ಟ್ಯಗಳೊಂದಿಗೆ ನಿರ್ಮಿಸಲ್ಪಟ್ಟಿದೆ.

Published On - 3:57 pm, Tue, 30 August 22

Follow Us
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಸೋನು ಶ್ರೀನಿವಾಸ್ ಗೌಡಗೆ ಇನ್ನೂ ಕಾಡುತ್ತಿದೆ ಬಾಯ್​​ಫ್ರೆಂಡ್ ನೆನಪು?
ಸೋನು ಶ್ರೀನಿವಾಸ್ ಗೌಡಗೆ ಇನ್ನೂ ಕಾಡುತ್ತಿದೆ ಬಾಯ್​​ಫ್ರೆಂಡ್ ನೆನಪು?