ಮಂಗಳೂರು: ಸೆಪ್ಟೆಂಬರ್ 2 ರಂದು ಮಂಗಳೂರಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಗಣೇಶೋತ್ಸವ ಮೆರವಣಿಗೆ ಮತ್ತು ಪ್ರಧಾನಿ ಮೋದಿ ಕಾರ್ಯಕ್ರಮ ಇರುವುದರಿಂದ ವಾಹನದಟ್ಟಣೆ ಸಾಧ್ಯತೆ ಹಿನ್ನೆಲೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 1 ಮತ್ತು 2 ರಂದು ಕೇರಳ ಮತ್ತು ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಸೆ.2ರಂದು ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ನಡೆಯಲಿದೆ. ಅಲ್ಲದೆ ಹಲವೆಡೆ ಗಣೇಶೋತ್ಸವ ಶೋಭಾಯಾತ್ರೆ ನಡೆಯಲಿದ್ದು ಇದರಿಂದ ಜನಸಂಚಾರ ಮತ್ತು ವಾಹನದಟ್ಟಣೆ ಹಿನ್ನೆಲೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
ಮಂಗಳೂರಿನಲ್ಲಿ 3,800 ಕೋಟಿ ರೂ. ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ಸೆ. 2ರಂದು ಮಧ್ಯಾಹ್ನ 1.30ಕ್ಕೆ ಮಂಗಳೂರಿನಲ್ಲಿ ಸುಮಾರು 3,800 ಕೋಟಿ ರೂ.ಗಳ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ. 1951ರಲ್ಲಿ ಜವಾಹರಲಾಲ್ ನೆಹರೂ ಪ್ರಧಾನಿಯಾಗಿದ್ದಾಗ ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದ ಉದ್ಘಾಟನೆಗೆ ಆಗಮಿಸಿದ್ದರು. ಲಾಲ್ ಬಹದ್ದೂರ್ ಶಾಸ್ತ್ರಿ, ರಾಜೀವ್ ಗಾಂಧಿ ಕೂಡ ಪ್ರಧಾನಿಯಾಗಿದ್ದಾಗ ಮಂಗಳೂರಿಗೆ ಆಗಮಿಸಿದ್ದರು. ಅಟಲ್ ಬಿಹಾರಿ ವಾಜಪೇಯಿ ಕೂಡ ಮಂಗಳೂರು, ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದರು. ಇದೀಗ ನರೇಂದ್ರ ಮೋದಿಯವರು ಈ ವಾರ ಮಂಗಳೂರಿಗೆ ಆಗಮಿಸಲಿದ್ದಾರೆ.
ಪ್ರಧಾನಮಂತ್ರಿಯವರು ಭಾರತದಲ್ಲಿ ಮೊದಲ ಬಾರಿಗೆ ವಿನ್ಯಾಸಗೊಳಿಸಿದ ಮತ್ತು ನಿರ್ಮಿಸಿದ ಯುದ್ಧನೌಕೆಯನ್ನು ಉದ್ಘಾಟನೆ ಮಾಡಲಿದ್ದಾರೆ. ಭಾರತೀಯ ನೌಕಾಪಡೆಯ ಆಂತರಿಕ ಯುದ್ಧನೌಕೆ ವಿನ್ಯಾಸ ಬ್ಯೂರೋ (WDB) ವಿನ್ಯಾಸಗೊಳಿಸಿದ ಮತ್ತು ಬಂದರುಗಳು, ಶಿಪ್ಪಿಂಗ್ ಮತ್ತು ಜಲಮಾರ್ಗಗಳ ಸಚಿವಾಲಯದ ಅಡಿಯಲ್ಲಿ ಸಾರ್ವಜನಿಕ ವಲಯದ ಶಿಪ್‌ಯಾರ್ಡ್ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಿಂದ ನಿರ್ಮಿಸಲ್ಪಟ್ಟಿದೆ. ವಿಕ್ರಾಂತ್ ಅತ್ಯಾಧುನಿಕ ಯಾಂತ್ರೀಕೃತಗೊಂಡ ವೈಶಿಷ್ಟ್ಯಗಳೊಂದಿಗೆ ನಿರ್ಮಿಸಲ್ಪಟ್ಟಿದೆ.
Published On - 3:57 pm, Tue, 30 August 22