ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಫಿ ಬೆಳ್ಳಾರೆಗೆ ಟಿಕೆಟ್​​ ಘೋಷಿಸಿದ ಎಸ್​ಡಿಪಿಐ​

| Updated By: ಗಂಗಾಧರ​ ಬ. ಸಾಬೋಜಿ

Updated on: Feb 13, 2023 | 3:44 PM

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಫಿ ಬೆಳ್ಳಾರೆಗೆ ಎಸ್​ಡಿಪಿಐ ಮುಂದಿನ ವಿಧಾನಸಭಾ ಚುನಾವಣೆಗೆ ಪುತ್ತೂರಿನಿಂದ ಟಿಕೆಟ್​ ಘೋಷಿಸಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಫಿ ಬೆಳ್ಳಾರೆಗೆ ಟಿಕೆಟ್​​ ಘೋಷಿಸಿದ ಎಸ್​ಡಿಪಿಐ​
ಮೃತ ಪ್ರವೀಣ್ ನೆಟ್ಟಾರು, ಜೈಲುಪಾಲಾಗಿರುವ ಶಾಫಿ ಬೆಳ್ಳಾರೆ
Follow us on

ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಇನ್ನೇನು ಕೆಲ ತಿಂಗಳು ಬಾಕಿ ಇದೆ. ಪ್ರತಿಯೊಂದು ಪಕ್ಷಗಳು ಸಹ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ. ಇತ್ತ ಎಸ್​ಡಿಪಿಐ (SDPI) ಕೂಡ ಚುನಾವಣೆಗೆ ತಯಾರಿ ನಡೆಸಿದ್ದು, ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಫಿ ಬೆಳ್ಳಾರೆ (Shafi Bellare) ಗೆ ಎಸ್​ಡಿಪಿಐ ಮುಂದಿನ ವಿಧಾನಸಭಾ ಚುನಾವಣೆಗೆ ಪುತ್ತೂರಿನಿಂದ ಟಿಕೆಟ್​ ಘೋಷಿಸಿದೆ. ಎಸ್​ಡಿಪಿಐನ ಈ ನಡೆ ವಿವಾದ ಕೂಡ ಉಂಟುಮಾಡಿದೆ. ಸಾಕ್ಷ್ಯಾಧಾರ ಮುಂದಿಟ್ಟು ಎನ್​ಐಎ ಶಾಫಿ ಬೆಳ್ಳಾರೆಯನ್ನು ಬಂಧಿಸಿದೆ. ಸದ್ಯ ಕೇಂದ್ರ ತನಿಖಾ ಸಂಸ್ಥೆಗಳ ವಶದಲ್ಲಿದ್ದು, ಜೈಲಿನಿಂದಲೇ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಶಾಫಿ ಬೆಳ್ಳಾರೆ ಅವರನ್ನು ಕಣಕ್ಕಿಳಿಸುವುದಾಗಿ ಎಸ್​ಡಿಪಿಐ ಕಾರ್ಯಕರ್ತರ ಸಮಾವೇಶ ದಲ್ಲಿ ಘೋಷಣೆ ಮಾಡಲಾಗಿದೆ. ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್​ ಖಾನ್​ ಆಗಿದ್ದು, ಶಾಫಿ ಬೆಳ್ಳಾರೆ ಎಸ್​ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಆಗಿದ್ದಾರೆ. ಸದ್ಯ ಪ್ರವೀಣ್ ನೆಟ್ಟಾರ್ ಪ್ರಕರಣದಲ್ಲಿ NIA ಬಂಧನದಲ್ಲಿರುವ ಶಾಫಿ ಬೆಳ್ಳಾರೆ, ಜೈಲಿನಿಂದಲೇ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಆರೋಪಿ ಶಾಫಿ ಬೆಳ್ಳಾರೆಯನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಮೂಲಕ SDPI ಭಾರಿ ವಿವಾದ ಸೃಷ್ಟಿಸಿದೆ.

ಇದನ್ನೂ ಓದಿ: Praveen Nettar: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಪತ್ತೆಗೆ 10 ಲಕ್ಷ ರೂ. ಬಹುಮಾನ ಘೋಷಿಸಿದ ಎನ್​ಐಎ

ಉಗ್ರರನ್ನು ಕರೆತಂದು ಟಿಕೆಟ್ ಕೊಡ್ತಾರೆ: ಆರ್.ಅಶೋಕ್

ಈ ಕುರಿತಾಗಿ ಬೆಂಗಳೂರು ನಗರದಲ್ಲಿ ಕಂದಾಯ ಸಚಿವ ಆರ್.ಅಶೋಕ್​ ಪ್ರತಿಕ್ರಿಯೆ ನೀಡಿದ್ದು, ದೇಶದಲ್ಲಿ‌ ಈಗಾಗಲೇ ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಲಾಗಿದೆ. ಪಿಎಫ್‌ಐ ರೀತಿ ಎಸ್​ಡಿ‌ಪಿಐ ಸಂಘಟನೆ ಕೂಡ ಬ್ಯಾನ್ ಮಾಡಬೇಕು. ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸುತ್ತೇನೆ. SDPI ಸಂಘಟನೆಯವರು ಉಗ್ರರನ್ನು ಕರೆತಂದು ಟಿಕೆಟ್ ಕೊಡ್ತಾರೆ. ಆಗ ಅವರಿಗೂ ಭದ್ರತೆ ಕೊಡಬೇಕಾಗುತ್ತೆ. ಬಳಿಕ ಅವರನ್ನು ಬಿಡುಗಡೆ ಮಾಡುವಂತೆ ಕೋರ್ಟ್​ಗೆ ಹೋಗ್ತಾರೆ. ಪ್ರವೀಣ್‌ ಹತ್ಯೆಯಲ್ಲಿ ಭಾಗಿಯಾದವನು ಚುನಾವಣೆಗೆ ಸ್ಪರ್ಧಿಸುತ್ತಿದ್ದಾನೆ. SDPI ಸಂಘಟನೆ ದೇಶವಿರೋಧಿ ಚಟುವಟಿಕೆಯ ಅಂಗ ಎಂದು ವಾಗ್ದಾಳಿ ಮಾಡಿದರು.

20 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಿದ NIA

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಒಟ್ಟು 20 ಆರೋಪಿಗಳ ವಿರುದ್ಧ ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. 240 ಸಾಕ್ಷಿಗಳ ಹೇಳಿಕೆಗಳು ಒಳಗೊಂಡಿರುವ ಒಟ್ಟು 1,500 ಪುಟಗಳ ಚಾರ್ಜ್​ಶೀಟ್ ಅನ್ನು NIA ಅಧಿಕಾರಿಗಳು ಕೋರ್ಟ್​ಗೆ ಸಲ್ಲಿಸಿದ್ದಾರೆ. ಕೊಲೆ ಪ್ರಕರಣ ಸಂಬಂಧ ಈವರೆಗೆ 14 ಆರೋಪಿಗಳನ್ನು ಬಂಧಿಸಿಲಾಗಿದ್ದು, 6 ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಈ ಬಗ್ಗೆ ರಾಷ್ಟ್ರೀಯ ತನಿಖಾ ದಳದಿಂದ ಟಿವಿ9ಗೆ ಅಧಿಕೃತ ಮಾಹಿತಿ ಲಭ್ಯವಾಗಿದೆ.

ಶರಣ್​ ಪಂಪ್​​ವೆಲ್​ಗೆ ಸಂಕಷ್ಟ

ಬಿಜೆಪಿ ಮುಖಂಡ ಪ್ರವೀಣ್ ‌ನೆಟ್ಟಾರು ಹತ್ಯೆಯ ಪ್ರತೀಕಾರಕ್ಕಾಗಿಯೇ ಫಾಜಿಲ್ ಹತ್ಯೆಯಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್​​ವೆಲ್​ ಇತ್ತೀಚೆಗೆ ಉಳ್ಳಾಲದಲ್ಲಿ ನಡೆದ ಶೌರ್ಯ ಯಾತ್ರೆಯಲ್ಲಿ ಹೇಳಿದ್ದರು. ಈ ವಿಚಾರವಾಗಿ ಫಾಜಿಲ್ ತಂದೆ ಉಮಾರ್ ಫಾರೂಕ್​ ಮಂಗಳೂರು ಕಮಿಷನರ್ ಶಶಿಕುಮಾರ್​ಗೆ ಶರಣ್ ಪಂಪ್ ವೆಲ್​ನನ್ನು ಬಂಧಿಸಿ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ. ಬಳಿಕ ಮಾಧ್ಯಮದವರೊಂದಿ ಮಾತನಾಡಿ, ಮಗನ ಹತ್ಯೆ ಕೇಸ್​ನಲ್ಲಿ ಎಂಟು ಜನರನ್ನು ಬಂಧಿಸಿ ಕೋರ್ಟ್​ಗೆ ಚಾರ್ಜ್ ಶೀಟ್ ಹಾಕಲಾಗಿದೆ.

ಇದನ್ನೂ ಓದಿ: ಪ್ರವೀಣ್ ‌ನೆಟ್ಟಾರು ಹತ್ಯೆಯ ಪ್ರತೀಕಾರಕ್ಕಾಗಿಯೇ ಫಾಜಿಲ್ ಹತ್ಯೆ: ಶರಣ್ ಪಂಪ್​ವೆಲ್

ಪ್ರಕರಣದ ಸೂತ್ರಧಾರಿಗಳ ತನಿಖೆಗೆ ನಾನು ಮನವಿ ಮಾಡುತ್ತಲೇ ಇದ್ದೇನೆ. ಆದರೆ ಈವರೆಗೆ ತನಿಖಾಧಿಕಾರಿ ಸೂತ್ರಧಾರಿ ಯಾರೆಂದು ತನಿಖೆ ನಡೆಸಿಲ್ಲ. ಇದೀಗ ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್ ನನ್ನ ಮಗನ ಹತ್ಯೆಯನ್ನು ಸಮರ್ಥಿಸಿದ್ದಾನೆ ಎಂದು ಉಮಾರ್ ಫಾರೂಕ್​ ಆರೋಪಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:36 pm, Mon, 13 February 23