AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ತೂರು: ರಥದಲ್ಲಿ ಸಾವರ್ಕರ್​ ಬದಲು ಟಿಪ್ಪು ಫೋಟೋ ಹಾಕಲು ಒತ್ತಡ; ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಿದ ಎಸ್​ಡಿಪಿಐ ಕಾರ್ಯಕರ್ತರು

ಫೋಟೋ ವಿಚಾರಕ್ಕೆ ಶುರುವಾದ ಜಗಳ ದೊಡ್ಡದಾಗುತ್ತಾ ಹೋಗಿ ಪರಸ್ಪರ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಅಲ್ಲದೇ, ಈ ವೇಳೆ ರಥಕ್ಕೆ ಅಡ್ಡಪಡಿಸಿದವರ ಮೇಲೆ ಕಾರು ಹತ್ತಿಸುವ ಯತ್ನವೂ ನಡೆದು ಮತ್ತಷ್ಟು ಸಂಘರ್ಷಕ್ಕೆ ಕಾರಣವಾಗಿದೆ.

ಪುತ್ತೂರು: ರಥದಲ್ಲಿ ಸಾವರ್ಕರ್​ ಬದಲು ಟಿಪ್ಪು ಫೋಟೋ ಹಾಕಲು ಒತ್ತಡ; ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಿದ ಎಸ್​ಡಿಪಿಐ ಕಾರ್ಯಕರ್ತರು
ಎಸ್​ಡಿಪಿಐ ಕಾರ್ಯಕರ್ತರಿಂದ ಆಕ್ರೋಶ
TV9 Web
| Edited By: |

Updated on: Aug 15, 2021 | 12:37 PM

Share

ದಕ್ಷಿಣ ಕನ್ನಡ: ಭಾರತ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿದ್ದು, ಇಡೀ ದೇಶ ಕೊರೊನಾದಂತಹ ಸಂಕಷ್ಟದ ಪರಿಸ್ಥಿತಿಯಲ್ಲೂ ಸ್ವಾತಂತ್ರ್ಯದ ಅಮೃತಮಹೋತ್ಸವವನ್ನು ಆಚರಿಸುತ್ತಿದೆ. ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ಅಹಿತಕರ ಘಟನೆಯೊಂದು ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಕಬಕ ಗ್ರಾಮದಲ್ಲಿ ಸ್ವಾತಂತ್ರ್ಯ ಸಂಭ್ರಮದಲ್ಲಿ ಫೋಟೋ ವಿಚಾರಕ್ಕೆ ಜಟಾಪಟಿ ನಡೆದಿದ್ದು, ರಥದಲ್ಲಿ ಸಾವರ್ಕರ್ ಫೋಟೋ ಅಳವಡಿಸಿದ್ದಕ್ಕೆ ಎಸ್​ಡಿಪಿಐ (SDPI) ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ಟಿಪ್ಪು ಸುಲ್ತಾನ್ ಫೋಟೋ ಹಾಕುವಂತೆ ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಈ ವೇಳೆ ರಥಕ್ಕೆ ಅಡ್ಡಪಡಿಸಿದವರ ಮೇಲೆ ಕಾರು ಹತ್ತಿಸುವ ಯತ್ನವೂ ನಡೆದಿದ್ದು ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಸ್ವಾತಂತ್ರ್ಯ ರಥದಲ್ಲಿ ಸಾವರ್ಕರ್​ ಫೋಟೋ ಹಾಕಿದ್ದು ಎಸ್‌ಡಿಪಿಐ ಕಾರ್ಯಕರ್ತರನ್ನು ಕೆರಳಿಸಿದ್ದು, ಅದೇ ಕಾರಣಕ್ಕಾಗಿ ತಕರಾರು ತೆಗೆದಿದ್ದಾರೆ ಎನ್ನಲಾಗಿದೆ. ಹೀಗಾಗಿ ರಥಕ್ಕೆ ತಡೆಯೊಡ್ಡಿ ಸಾವರ್ಕರ್ ಬದಲು ಟಿಪ್ಪು ಫೋಟೋ ಹಾಕುವಂತೆ ಒತ್ತಡ ಹೇರಿದ್ದಾರೆ. ಆದರೆ, ಫೋಟೋ ವಿಚಾರಕ್ಕೆ ಶುರುವಾದ ಜಗಳ ದೊಡ್ಡದಾಗುತ್ತಾ ಹೋಗಿ ಪರಸ್ಪರ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಅಲ್ಲದೇ, ಈ ವೇಳೆ ರಥಕ್ಕೆ ಅಡ್ಡಪಡಿಸಿದವರ ಮೇಲೆ ಕಾರು ಹತ್ತಿಸುವ ಯತ್ನವೂ ನಡೆದು ಮತ್ತಷ್ಟು ಸಂಘರ್ಷಕ್ಕೆ ಕಾರಣವಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪುತ್ತೂರು ಪೊಲೀಸರು SDPI ಕಾರ್ಯಕರ್ತರನ್ನು ಚದುರಿಸಿದ್ದಾರೆ.

ಕಬಕ ಗ್ರಾಮಪಂಚಾಯತ್ ಆವರಣದಲ್ಲಿ ಘಟನೆ ನಡೆದಿದ್ದು, ಗ್ರಾಮಪಂಚಾಯತ್ ಸದಸ್ಯರು, ಉಪಾಧ್ಯಕ್ಷರ ಜೊತೆ ಎಸ್​ಡಿಪಿಐ ಕಾರ್ಯಕರ್ತರು ವಾಗ್ವಾದ ನಡೆಸಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂದರ್ಭದಲ್ಲಿ ಇಂಥದ್ದೊಂದು ಕಹಿ ಘಟನೆ ನಡೆದಿರುವುದಕ್ಕೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದು, ಈ ರೀತಿಯ ಜಗಳ ಆಗಬಾರದಿತ್ತು ಎಂದಿದ್ದಾರೆ.

ಇದನ್ನೂ ಓದಿ: ಸಂಘಪರಿವಾರ, ಎಸ್​ಡಿಪಿಐ ಒಂದೇ ನಾಣ್ಯದ ಎರಡು ಮುಖಗಳು: ರಾಮಲಿಂಗಾರೆಡ್ಡಿ 

ಪ್ರಚೋದನಕಾರಿ ಹೇಳಿಕೆ: ಸಚಿವ ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಎಸ್‌ಡಿಪಿಐ ಆಗ್ರಹ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?