ವೀರ್ ಸಾವರ್ಕರ್ ಫೋಟೋ ಹಿಡಿದು ವಿದ್ಯಾರ್ಥಿಗಳ ನೃತ್ಯ: ಎಸ್ಡಿಪಿಐ ಸದಸ್ಯರಿಂದ ಕಿರಿಕ್, ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸ್
ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಗುರುಪುರ ಬೆಥನಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ನೃತ್ಯ ಮಾಡಿದರು.
ಮಂಗಳೂರು: ವಿದ್ಯಾರ್ಥಿಗಳು ಸಾವರ್ಕರ್(Veer Savarkar) ಫೋಟೋ ಹಿಡಿದು ನೃತ್ಯ ಮಾಡಿದ್ದಕ್ಕೆ ಎಸ್ಡಿಪಿಐ ಸದಸ್ಯರು(SDPI) ಆಕ್ಷೇಪ ವ್ಯಕ್ತಪಡಿಸಿರುವ ಘಟನೆ ಮಂಗಳೂರು ಹೊರವಲಯದ ಗುರುಪುರ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.
ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಗುರುಪುರ ಬೆಥನಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ನೃತ್ಯ ಮಾಡಿದರು. ನೃತ್ಯದ ವೇಳೆ ವಿದ್ಯಾರ್ಥಿಗಳು ಸಾವರ್ಕರ್ ಫೋಟೋ ಹಿಡಿದು ನೃತ್ಯ ಮಾಡಿದ್ದಾರೆ. ಈ ವೇಳೆ ಎಸ್ಡಿಪಿಐ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ ಕಿರಿಕ್ ಮಾಡಿದ್ದಾರೆ. ಗ್ರಾ.ಪಂ. ಸಿಬ್ಬಂದಿ ಜೊತೆ SDPI ಮುಖಂಡರು ವಾಗ್ವಾದ ನಡೆಸಿದ್ದಾರೆ. ತಕ್ಷಣ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಸಾವರ್ಕರ್ ಬ್ಯಾನರ್ ತೆರವು ಖಂಡಿಸಿ ಹಿಂದೂ ಪರ ಸಂಘಟನೆಗಳ ಧರಣಿ
75ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ ಶಿವಮೊಗ್ಗದಲ್ಲಿ ಸಾವರ್ಕರ್ ಬ್ಯಾನರ್ ಹಾಕಲಾಗಿತ್ತು. ಆದ್ರೆ ಕಿಡಿಗೇಡಿಗಳು ಸಾವರ್ಕರ್ ಬ್ಯಾನರ್ ತೆರವುಗೊಳಿಸಿದ್ದಾರೆ. ಶಿವಮೊಗ್ಗದ ಅಮೀರ್ ಅಹ್ಮದ್ ವೃತ್ತದಲ್ಲಿ ಬ್ಯಾನರ್ ತೆರವು ಖಂಡಿಸಿ ಹಿಂದೂ ಪರ ಸಂಘಟನೆಗಳು ಧರಣಿ ನಡೆಸುತ್ತಿವೆ. ಸಾವರ್ಕರ್ ಫ್ಲೆಕ್ಸ್ ಹಾಕಲು ಕಾರ್ಯಕರ್ತರು ಮುಂದಾಗಿದ್ದು ಈ ವೇಳೆ ಪೊಲೀಸರು ಫ್ಲೆಕ್ಸ್ ಹಾಕುವುದನ್ನು ತಡೆದಿದ್ದಾರೆ. ಕಾರ್ಯಕರ್ತರು-ಪೊಲೀಸರ ನಡುವೆ ಮಾತಿನ ಚಕಮಕಿ ಆಗಿದೆ. ಲಘು ಲಾಠಿ ಪ್ರಹಾರ ಕೂಡ ಆಗಿದೆ. ಫ್ಲೆಕ್ಸ್ ಹಾಕಲು ಬಂದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಅಮೀರ್ ಅಹ್ಮದ್ ವೃತ್ತದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಲಕ್ಷ್ಮಿ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Published On - 3:22 pm, Mon, 15 August 22