AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಟ್ವಾಳ ಹಿಂದೂ ರಾಷ್ಟ್ರ ಸಭೆಗೆ SDPI ವಿರೋಧ: ಸಂವಿಧಾನ ಉಲ್ಲಂಘನೆ ಆರೋಪ, ದೂರು ದಾಖಲು

ಬಂಟ್ವಾಳದ ಅರಳದಲ್ಲಿ ಫೆಬ್ರವರಿ 22ರಂದು ನಡೆಯಲಿರುವ 'ಹಿಂದೂ ರಾಷ್ಟ್ರ ಜಾಗೃತಿ ಸಭೆ'ಗೆ ಎಸ್‌ಡಿಪಿಐ ತೀವ್ರ ವಿರೋಧ ವ್ಯಕ್ತಪಡಿಸಿದೆ. ಯಾವುದೇ ಧರ್ಮ ಅಥವಾ ಜಾತಿಯ ಹೆಸರಿನಲ್ಲಿ ರಾಷ್ಟ್ರವನ್ನು ಗುರುತಿಸುವುದು ಸಂವಿಧಾನದ ಉಲ್ಲಂಘನೆ ಮತ್ತು ದೇಶದ್ರೋಹ ಎಂದು ಆರೋಪಿಸಿ, ಎಸ್‌ಡಿಪಿಐ ಮುಖಂಡರು ಸಭೆಯ ಆಯೋಜಕರ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.

ಬಂಟ್ವಾಳ ಹಿಂದೂ ರಾಷ್ಟ್ರ ಸಭೆಗೆ SDPI ವಿರೋಧ: ಸಂವಿಧಾನ ಉಲ್ಲಂಘನೆ ಆರೋಪ, ದೂರು ದಾಖಲು
SDPI ಮುಖಂಡರಿಂದ ದೂರು Image Credit source: tv9 kannada
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Feb 15, 2026 | 7:10 PM

Share

ಮಂಗಳೂರು, ಫೆಬ್ರವರಿ 15: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿರುವ ಅರಳ ಗರುಡ ಮಹಾಕಾಳಿ ದೇಗುಲದಲ್ಲಿ ಫೆ.22ರಂದು ನಡೆಯುವ ಹಿಂದೂ ರಾಷ್ಟ್ರ ಜಾಗೃತಿ ಸಭೆಗೆ (Hindu Rashtra Jagruti Sabha) SDPIನಿಂದ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಆಯೋಜಕರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.

ಫೆ.22ರಂದು ನಡೆಯಲಿರುವ ಹಿಂದೂ ರಾಷ್ಟ್ರ ಜಾಗೃತಿ ಸಭೆಗೆ ಸದ್ಯ ವಿರೋಧ ವ್ಯಕ್ತವಾಗಿದೆ. SDPI ಮುಖಂಡ S.H.ಶಾಹುಲ್, ಕಬೀರ್ ಅಕ್ಕರಂಗಡಿ, ಅಕ್ಬರ್ ಅಲಿ ಪೊನ್ನೋಡಿ, ಇಮ್ರಾನ್ ಬಂಟ್ವಾಳ, ಉಬೈದ್​ರಿಂದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ದೂರಿನಲ್ಲೇನಿದೆ?

ಹಿಂದೂ ಜನಜಾಗೃತಿ ಸಮಿತಿ ಇದರ ವತಿಯಿಂದ ಹಿಂದೂ ರಾಷ್ಟ್ರ ನಿರ್ಮಾಣ ಎಂಬ ಸಂವಿಧಾನ ವಿರೋದಿ ದೇಶದ್ರೋಹಿ ಚಟುವಟಿಕೆಗಳಿಗೆ ಕರೆನೀಡುವ ಮತ್ತು ಸಮಾಜದಲ್ಲಿ ಆತಂಕ ಸೃಷ್ಟಿಸುವ ಕಾರ್ಯಕ್ರಮದ ಅನುಮತಿಯನ್ನು ನಿರಾಕರಿಸಬೇಕು ಹಾಗೂ ಕಾರ್ಯಕ್ರಮ ಆಯೋಜಕರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವಂತೆ ದೂರು ನೀಡಲಾಗಿದೆ.

ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗ ನಡೆಯಬೇಕಿದ್ದ ದಫ್ ಕಾರ್ಯಕ್ರಮ ರದ್ದು

ಇನ್ನು ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಆಯೋಜಿಸಲು ಉದ್ದೇಶಿಸಿದ್ದ ದಫ್ ಪ್ರದರ್ಶನಕ್ಕೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿತ್ತು.

ಇದನ್ನೂ ಓದಿ: ಮಂಗಳೂರಿನಲ್ಲಿ ಬೋಟ್ ಆಂಬ್ಯುಲೆನ್ಸ್ ಲೋಕಾರ್ಪಣೆ: ಏನೆಲ್ಲಾ ಸೌಲಭ್ಯ, ಹೇಗೆ ಕಾರ್ಯನಿರ್ವಹಿಸುತ್ತೆ?

ಕೆವಿಜಿ ಸುಳ್ಯ ಹಬ್ಬ ಸಮಾಜ ಸಂಘದ ವತಿಯಿಂದ “ಕೆವಿಜಿ ಸುಳ್ಯ ಹಬ್ಬ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದರ ಅಂಗವಾಗಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ, ಮಂಗಳೂರು ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮವಾಗಿ ದಫ್ ಪ್ರದರ್ಶನವನ್ನು ಏರ್ಪಡಿಸಲು ಸಿದ್ಧತೆ ನಡೆಸಲಾಗಿತ್ತು. ಆದರೆ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ ಒತ್ತಡ ಹೇರಿದ ಪರಿಣಾಮ, ಆಯೋಜಕರು ದಫ್ ಪ್ರದರ್ಶನವನ್ನು ಕಾರ್ಯಕ್ರಮ ಪಟ್ಟಿಯಿಂದ ಕೈಬಿಡಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?