ಮಂಗಳೂರಿನಲ್ಲಿ ಸರಣಿ ಅಪಘಾತ: 20ಕ್ಕೂ ಹೆಚ್ಚು ಜನರಿಗೆ ಗಾಯ

| Updated By: ವಿವೇಕ ಬಿರಾದಾರ

Updated on: Nov 23, 2024 | 10:45 AM

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಖಾಸಗಿ ಬಸ್, ಕೆಎಸ್​ಆರ್​ಟಿಸಿ ಬಸ್‌ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ. ಉಪ್ಪಿನಂಗಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಂಗಳೂರಿನಲ್ಲಿ ಸರಣಿ ಅಪಘಾತ: 20ಕ್ಕೂ ಹೆಚ್ಚು ಜನರಿಗೆ ಗಾಯ
ಸಾಂದರ್ಭಿಕ ಚಿತ್ರ
Follow us on

ಮಂಗಳೂರು, ನವೆಂಬರ್​ 23: ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಪುತ್ತೂರು (Puttur) ತಾಲೂಕಿನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಖಾಸಗಿ ಬಸ್, ಕೆಎಸ್​ಆರ್​ಟಿಸಿ ಬಸ್‌ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ.

ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಖಾಸಗಿ ಬಸ್​ನಲ್ಲಿ ಕುಂದಾಪುರಕ್ಕೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದರು. ಮರಳಿ ಬರುವಾಗ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ ಪಲ್ಟಿಯಾಗಿ ಕೆಎಸ್​ಆರ್​ಟಿಸಿ ಬಸ್​ಗೆ ಡಿಕ್ಕಿ ಹೊಡೆದಿದೆ. ಹಿಂದಿನಿಂದ ಬರುತ್ತಿದ್ದ ಕಾರು ಕೆಎಸ್​ಆರ್​ಟಿಸಿ ಬಸ್​ಗೆ ಡಿಕ್ಕಿ ಹೊಡೆಯುವ ಮೂಲಕ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ.

ಇದನ್ನೂ ಓದಿ: ಫ್ಯಾಷನ್ ಪ್ಯಾಂಟ್​ ಧರಿಸಿದವನ ಹಿಡಿದಿಟ್ಟು ಹೊಲಿಗೆ ಹಾಕಿದ ಪುಂಡರು: ವಿಡಿಯೋ ವೈರಲ್ ಆದ ಬೆನ್ನಲ್ಲೇ ಯುವಕ ಆತ್ಮಹತ್ಯೆಗೆ ಯತ್ನ

ಗಾಯಾಳುಗಳನ್ನು ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ‌ ನೀಡಲಾಗುತ್ತಿದೆ. ಹಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ರವಾನಿಸಲಾಗಿದೆ. ಉಪ್ಪಿನಂಗಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:39 am, Sat, 23 November 24