AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಘಟನೆ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಉದ್ಯಮಿ, ಚಾಕೊಲೇಟ್ ಕೊಡಿಸುವುದಾಗಿ ಬಾಲಕಿ ಮೇಲೆ ಅತ್ಯಾಚಾರ

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹೊರವಲಯದ ಮುಲ್ಕಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 68 ವರ್ಷದ ಉದ್ಯಮಿಯನ್ನು ಬಂಧಿಸಲಾಗಿದೆ. ಬಾಲಕಿಯ ತಾಯಿಯ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದೇ ರೀತಿ ಮಂಡ್ಯದಲ್ಲಿ ಕೂಡ ಘಟನೆ ನಡೆದಿದೆ. ಚಾಕೊಲೇಟ್ ಕೊಡುವುದಾಗಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಪ್ರತ್ಯೇಕ ಘಟನೆ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಉದ್ಯಮಿ, ಚಾಕೊಲೇಟ್ ಕೊಡಿಸುವುದಾಗಿ ಬಾಲಕಿ ಮೇಲೆ ಅತ್ಯಾಚಾರ
ಪ್ರಾತಿನಿಧಿಕ ಚಿತ್ರ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Jul 13, 2025 | 10:39 AM

Share

ಮಂಗಳೂರು, ಜುಲೈ 13: ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆದೊಯ್ದು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ (Sexual assault) 68 ವರ್ಷದ ಉದ್ಯಮಿಯನ್ನು (businessman) ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸದ್ಯ ಸಂತ್ರಸ್ತೆ ತಾಯಿ ನೀಡಿದ ದೂರು ಆಧರಿಸಿ ಮುಲ್ಕಿ ಠಾಣಾ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿಕೊಂಡಿದ್ದಾರೆ.

ನಡೆದದ್ದೇನು?

ಉದ್ಯಮಿ ಕಳೆದ ಎರಡು ತಿಂಗಳಿಂದ ಉದ್ಯಮಿ ಬಾಲಕಿಯನ್ನು ತನ್ನ ಕಾರಿನಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ. ಈ ವೇಳೆ ಬಾಲಕಿಯನ್ನ ಪುಸಲಾಯಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಮುಲ್ಕಿ ಪೊಲೀಸರು ಸಂತ್ರಸ್ತೆಯ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ತನಿಖೆ‌ ನಡೆಸಿ ಆರೋಪಿಯನ್ನ ಬಂಧಿಸಿದ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆದರೆ ಅಧಿಕ ರಕ್ತದೊತ್ತಡಕ್ಕೆ ಒಳಗಾದ ಬಂಧಿತ ಆರೋಪಿಯನ್ನು ಮೂಲ್ಕಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾಕೊಲೇಟ್ ಕೊಡುವುದಾಗಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಾಕೋಲೆಟ್​​ ಕೊಡಿಸುವುದಾಗಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ವೆಸಗಿರುವಂತಹ ಘಟನೆ ನಡೆದಿದೆ. ಉತ್ತರ ಪ್ರದೇಶ ಮೂಲದ ಪ್ರವೀಣ್ (21) ನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ
Image
45ಕ್ಕೂ ಅಧಿಕ ಮಹಿಳೆಯರ ಅಶ್ಲೀಲ ವಿಡಿಯೋ;ಬೆಂಗಳೂರಿನಲ್ಲಿ ಶಾಕಿಂಗ್ ವಿಷಯ ಬಯಲು
Image
ಮಹಿಳೆಗೆ ಗುಪ್ತಾಂಗ ತೋರಿಸಿದ ಉಪಾಧ್ಯಕ್ಷ: ಬಿಜೆಪಿಯಿಂದ ಉಚ್ಛಾಟನೆ
Image
ಕಚೇರಿಯಲ್ಲೇ ಮಹಿಳೆ ಜೊತೆ ಚಕ್ಕಂದ: ಅಮಾನತು ಬೆನ್ನಲ್ಲೇ DYSP ಅರೆಸ್ಟ್​..!
Image
ತುಮಕೂರು: ದೂರು ನೀಡಲು ಬಂದ ಮಹಿಳೆಗೆ ಡಿವೈಎಸ್​ಪಿಯಿಂದ ಲೈಂಗಿಕ ಕಿರುಕುಳ

ಇದನ್ನೂ ಓದಿ: ಪುತ್ತೂರು: ಬಿಜೆಪಿ ಮುಖಂಡನ ಪುತ್ರ ಯುವತಿಯ ಗರ್ಭಿಣಿ ಮಾಡಿ ವಂಚಿಸಿದ್ದ ಪ್ರಕರಣಕ್ಕೆ ಭೂಗತ ಪಾತಕಿ ಎಂಟ್ರಿ!

ಸಂತ್ರಸ್ತ ಬಾಲಕಿ ಕುಟುಂಬ ಫ್ಲೈವುಡ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದು, ಅದೇ ಫ್ಯಾಕ್ಟರಿಯಲ್ಲಿ ಆರೋಪಿ ಪ್ರವೀಣ್ ಕೂಡ ಕೆಲಸ ಮಾಡುತ್ತಿದ್ದ. ಸದ್ಯ BNS 65(2), 4,5(i), 5(m), 6 ಹಾಗೂ ಪೋಕ್ಸೋ ಅಡಿ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆಯರಿಗೆ ಖಾಸಗಿ ಅಂಗಾಂಗ ತೋರಿಸಿ ವಿಕೃತಿ ಮೆರೆದಿದ್ದ ವ್ಯಕ್ತಿ

ಯಾದಗಿರಿ ಜಿಲ್ಲೆಯಲ್ಲಿ ಇತ್ತೀಚೆಗೆ ಮಹಿಳೆಯರಿಗೆ ಓರ್ವ ವ್ಯಕ್ತಿ ತನ್ನ ಖಾಸಗಿ ಅಂಗಾಂಗವನ್ನು ತೋರಿಸಿ ವಿಕೃತಿ ಮೆರೆದಿದ್ದ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ವ್ಯಕ್ತಿಯ ಈ ಕೃತ್ಯವನ್ನು ಪ್ರಶ್ನೆ ಮಾಡಿದ್ದ ವಿಧವಾ ಮಹಿಳೆ ಸೇರಿದಂತೆ ಅವರ ಪೋಷಕರ ಮೇಲೆಯೇ ಸುಳ್ಳು ಕೇಸ್​ ದಾಖಲಿಸಿದ್ದ. ಇದರಿಂದ ರೊಚ್ಚಿಗೆದಿದ್ದ ಗ್ರಾಮದ ಮಹಿಳೆಯರು ವಿಕೃತ ಮೆರೆದ ವ್ಯಕ್ತಿ ವಿರುದ್ಧ ಕೇಸ್ ದಾಖಲಿಸುವಂತೆ ಒತ್ತಾಯಿಸಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಮಾಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:36 am, Sun, 13 July 25

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ