
ಮಂಗಳೂರು, ಜುಲೈ 13: ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆದೊಯ್ದು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ (Sexual assault) 68 ವರ್ಷದ ಉದ್ಯಮಿಯನ್ನು (businessman) ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸದ್ಯ ಸಂತ್ರಸ್ತೆ ತಾಯಿ ನೀಡಿದ ದೂರು ಆಧರಿಸಿ ಮುಲ್ಕಿ ಠಾಣಾ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿಕೊಂಡಿದ್ದಾರೆ.
ಉದ್ಯಮಿ ಕಳೆದ ಎರಡು ತಿಂಗಳಿಂದ ಉದ್ಯಮಿ ಬಾಲಕಿಯನ್ನು ತನ್ನ ಕಾರಿನಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ. ಈ ವೇಳೆ ಬಾಲಕಿಯನ್ನ ಪುಸಲಾಯಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಮುಲ್ಕಿ ಪೊಲೀಸರು ಸಂತ್ರಸ್ತೆಯ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ತನಿಖೆ ನಡೆಸಿ ಆರೋಪಿಯನ್ನ ಬಂಧಿಸಿದ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆದರೆ ಅಧಿಕ ರಕ್ತದೊತ್ತಡಕ್ಕೆ ಒಳಗಾದ ಬಂಧಿತ ಆರೋಪಿಯನ್ನು ಮೂಲ್ಕಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಾಕೋಲೆಟ್ ಕೊಡಿಸುವುದಾಗಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ವೆಸಗಿರುವಂತಹ ಘಟನೆ ನಡೆದಿದೆ. ಉತ್ತರ ಪ್ರದೇಶ ಮೂಲದ ಪ್ರವೀಣ್ (21) ನನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: ಪುತ್ತೂರು: ಬಿಜೆಪಿ ಮುಖಂಡನ ಪುತ್ರ ಯುವತಿಯ ಗರ್ಭಿಣಿ ಮಾಡಿ ವಂಚಿಸಿದ್ದ ಪ್ರಕರಣಕ್ಕೆ ಭೂಗತ ಪಾತಕಿ ಎಂಟ್ರಿ!
ಸಂತ್ರಸ್ತ ಬಾಲಕಿ ಕುಟುಂಬ ಫ್ಲೈವುಡ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದು, ಅದೇ ಫ್ಯಾಕ್ಟರಿಯಲ್ಲಿ ಆರೋಪಿ ಪ್ರವೀಣ್ ಕೂಡ ಕೆಲಸ ಮಾಡುತ್ತಿದ್ದ. ಸದ್ಯ BNS 65(2), 4,5(i), 5(m), 6 ಹಾಗೂ ಪೋಕ್ಸೋ ಅಡಿ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾದಗಿರಿ ಜಿಲ್ಲೆಯಲ್ಲಿ ಇತ್ತೀಚೆಗೆ ಮಹಿಳೆಯರಿಗೆ ಓರ್ವ ವ್ಯಕ್ತಿ ತನ್ನ ಖಾಸಗಿ ಅಂಗಾಂಗವನ್ನು ತೋರಿಸಿ ವಿಕೃತಿ ಮೆರೆದಿದ್ದ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ವ್ಯಕ್ತಿಯ ಈ ಕೃತ್ಯವನ್ನು ಪ್ರಶ್ನೆ ಮಾಡಿದ್ದ ವಿಧವಾ ಮಹಿಳೆ ಸೇರಿದಂತೆ ಅವರ ಪೋಷಕರ ಮೇಲೆಯೇ ಸುಳ್ಳು ಕೇಸ್ ದಾಖಲಿಸಿದ್ದ. ಇದರಿಂದ ರೊಚ್ಚಿಗೆದಿದ್ದ ಗ್ರಾಮದ ಮಹಿಳೆಯರು ವಿಕೃತ ಮೆರೆದ ವ್ಯಕ್ತಿ ವಿರುದ್ಧ ಕೇಸ್ ದಾಖಲಿಸುವಂತೆ ಒತ್ತಾಯಿಸಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಮಾಡಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:36 am, Sun, 13 July 25