ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ವಿಚಾರಣಾಧೀನ ಕೈದಿ ನಾಮಪತ್ರ ಸಲ್ಲಿಸಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿಯಾಗಿರುವ ಶಾಫಿ ಬೆಳ್ಳಾರೆ ಅವರು ತಮ್ಮ ಏಜೆಂಟ್ ಮೂಲಕ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಾಫಿ ಬೆಳ್ಳಾರೆ ಅವರನ್ನು ಯುಎಪಿಎ ಕಾಯ್ದೆಯಡಿ ಎನ್ಐಎ ತಂಡ ಬಂಧಿಸಿತ್ತು.
ಪಕ್ಷದ ಸಭೆ ನಡೆಸಿ ಪುತ್ತೂರು ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಅವರನ್ನು ಆಯ್ಕೆ ಮಾಡಲಾಗಿತ್ತು. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಶಾಫಿ ಬೆಳ್ಳಾರೆ ಸದ್ಯ ಜೈಲಿನಲ್ಲಿದ್ದಾರೆ. ಶಾಫಿ ಬೆಳ್ಳಾರೆ ಜೈಲಿನಿಂದಲೇ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಜೈಲಿನಿಂದಲೇ ನಾಮಪತ್ರ ಸಲ್ಲಿಸಲು ಅವಕಾಶವಿರುವುದರಿಂದ ತಮ್ಮ ಏಜೆಂಟರ ಮೂಲಕ ನಾಮಪತ್ರ ಸಲ್ಲಿಸಿದ್ದಾರೆ. ಶಾಫಿ ಬಂಧನದ ನಂತರ ಎಸ್‌ಡಿಪಿಐಗೆ ಭಾರೀ ಹೊಡೆತ ಬಿದ್ದಿತ್ತು.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ