ಶಾಲೆಯಲ್ಲಿ ಭಗವದ್ಗೀತೆ ಕಲಿಸುವುದನ್ನು ಸ್ವಾಗತಿಸ್ತೇನೆ; ನೈತಿಕ ವಿಚಾರ ಕಲಿಸುವುದಕ್ಕೆ ನಮ್ಮ ವಿರೋಧವಿಲ್ಲ: ಸಿದ್ದರಾಮಯ್ಯ

Siddaramaiah: ಶಾಲೆಯಲ್ಲಿ ಭಗವದ್ಗೀತೆ ಕಲಿಸುವುದನ್ನು ಸ್ವಾಗತಿಸ್ತೇನೆ. ನೈತಿಕ ವಿಚಾರ ಕಲಿಸುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಕೊಡಬೇಕು. ಭಗವದ್ಗೀತೆ, ಕುರಾನ್, ಬೈಬಲ್ ಯಾವುದನ್ನೂ ವಿರೋಧಿಸಲ್ಲ ಎಂದು ಮಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶಾಲೆಯಲ್ಲಿ ಭಗವದ್ಗೀತೆ ಕಲಿಸುವುದನ್ನು ಸ್ವಾಗತಿಸ್ತೇನೆ; ನೈತಿಕ ವಿಚಾರ ಕಲಿಸುವುದಕ್ಕೆ ನಮ್ಮ ವಿರೋಧವಿಲ್ಲ: ಸಿದ್ದರಾಮಯ್ಯ
ಸಿದ್ದರಾಮಯ್ಯ
Follow us
TV9 Web
| Updated By: ganapathi bhat

Updated on:Mar 19, 2022 | 12:09 PM

ಮಂಗಳೂರು: ಕಾಂಗ್ರೆಸ್‌ನದ್ದು ಸಾಫ್ಟ್, ಹಾರ್ಡ್ ಹಿಂದುತ್ವ ಎಂಬುದಿಲ್ಲ. ನಾವು ಎಲ್ಲಾ ಧರ್ಮಗಳನ್ನು ಸಮನಾಗಿ ಕಾಣುತ್ತೇವೆ ಎಂದು ಮಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು (ಮಾರ್ಚ್ 19) ಹೇಳಿಕೆ ನೀಡಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಕನ್ನಡಕ್ಕೆ ಡಬ್ ಮಾಡುವ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಯಾವ ಸಿನಿಮಾನಾದ್ರೂ ತೋರಿಸಲಿ, ಸತ್ಯ ತೋರಿಸಲಿ. ಕಾಶ್ಮೀರದಲ್ಲಿ ಯಾರಿಗೆ ಸಮಸ್ಯೆ ಆಗಿತ್ತೆಂದು ಹೇಳಬೇಕು. ಕಾಶ್ಮೀರದಲ್ಲಿ ಉಗ್ರರ ಕೃತ್ಯ, ಕಾಶ್ಮೀರ ಪಂಡಿತರ ಸಮಸ್ಯೆ, ಬೇರೆ ಯಾರಿಗೆ ಸಮಸ್ಯೆ ಆಗಿತ್ತು ಎಂಬುದನ್ನು ಹೇಳಬೇಕು. ಆಗ ಅಲ್ಲಿ ಯಾರ ಸರ್ಕಾರವಿತ್ತು, ಸರ್ಕಾರ ಏನು ಮಾಡಿತು. ಗುಜರಾತ್ ಘಟನೆ, ಲಖೀಂಪುರ ಘಟನೆ ಎಲ್ಲವೂ ತೋರಿಸಲಿ. ನಾನು ಚಿತ್ರಮಂದಿರಕ್ಕೆ ಹೋಗಿ ಸಿನಿಮಾ ನೋಡುವುದು ಕಡಿಮೆ. ನಾನು ದಿ ಕಾಶ್ಮೀರ್ ಫೈಲ್ಸ್ ನೋಡುವುದಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಶಾಲೆಯಲ್ಲಿ ಭಗವದ್ಗೀತೆ ಕಲಿಸುವುದನ್ನು ಸ್ವಾಗತಿಸ್ತೇನೆ. ನೈತಿಕ ವಿಚಾರ ಕಲಿಸುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಕೊಡಬೇಕು. ಭಗವದ್ಗೀತೆ, ಕುರಾನ್, ಬೈಬಲ್ ಯಾವುದನ್ನೂ ವಿರೋಧಿಸಲ್ಲ ಎಂದು ಮಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ಕೊರೊನಾಗಿಂತಾ ಮಾರಕ: ತನ್ವೀರ್ ಸೇಠ್

ಇತ್ತ ಮೈಸೂರಿನಲ್ಲಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ಬಗ್ಗೆ ಮಾತನಾಡಿದ್ದಾರೆ. ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ಕೊರೊನಾಗಿಂತಾ ಮಾರಕ. ಇಂತಹ ನಿರ್ಧಾರಗಳಿಂದ ಮಕ್ಕಳ ಶಿಕ್ಷಣ ಕುಂಠಿತವಾಗುತ್ತದೆ ಎಂದು ಅಭಿಪ್ರಾಯ ತಿಳಿಸಿದ್ದಾರೆ.

ನಾನು ಚಿಕ್ಕಂದಿನಿಂದಲೂ ಯಾವುದೇ ಸಿನಿಮಾ ನೋಡಿದವನಲ್ಲ. ಇಂದು ದಿ ಕಾಶ್ಮೀರ್ ಫೈಲ್ಸ್​ ಎಂಬ ಸಿನಿಮಾ ಬಂದಿದೆ ನಾಳೆ ಗುಜರಾತ್ ಫೈಲ್ಸ್​ ಬರಲಿದೆ ಮತ್ತೊಂದು ದಿನ ಇನ್ಯಾವುದೋ ಫೈಲ್ಸ್ ಎಂದು ಸಿನಿಮಾ ಬರಲಿದೆ. ನನಗೆ ಸಿನಿಮಾಗಳ ಮೇಲೆ ಯಾವುದೇ ಆಸಕ್ತಿ ಇಲ್ಲ. ಹೀಗಾಗಿ ನಾನು ದಿ ಕಾಶ್ಮೀರ್ ಫೈಲ್ಸ್​ ಸಿನಿಮಾ ನೋಡಲ್ಲ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.

ಕುರಾನ್, ಬೈಬಲ್ ಧಾರ್ಮಿಕ ಗ್ರಂಥಗಳು. ಆದರೆ ಭಗವದ್ಗೀತೆ ಧಾರ್ಮಿಕ ಗ್ರಂಥವಲ್ಲ: ಪ್ರತಾಪ್ ಸಿಂಹ

ಕುರಾನ್, ಬೈಬಲ್ ಧಾರ್ಮಿಕ ಗ್ರಂಥಗಳು. ಆದರೆ ಭಗವದ್ಗೀತೆ ಧಾರ್ಮಿಕ ಗ್ರಂಥವಲ್ಲ. ಭಗವದ್ಗೀತೆಯಲ್ಲಿ ನೈತಿಕ ಪಾಠ ಇದೆ. ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸಿದರೆ ತಪ್ಪಿಲ್ಲ. ಜೀವನದ ಮೌಲ್ಯಗಳನ್ನು ಭಗವದ್ಗೀತೆ ತಿಳಿಸಿಕೊಡುತ್ತದೆ ಎಂದು ಮಡಿಕೇರಿಯಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಭಗವದ್ಗೀತೆಯಂತೆ ಕುರಾನ್ ಬಗ್ಗೆ ಚಿಂತನೆ ಮಾಡುತ್ತಾರಾ?; ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಗೆ ಸಿಎಫ್ಐ ವಿರೋಧ!

ಇದನ್ನೂ ಓದಿ: ಈ ವರ್ಷ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಸೇರಿಸುವುದಿಲ್ಲ: ಬಿಸಿ ನಾಗೇಶ್ ಹೇಳಿಕೆ

Published On - 12:03 pm, Sat, 19 March 22

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ