ಮಂಗಳೂರು: ಈಗಾಗಲೇ ಹಿಜಾಬ್ (Hijab) ಧರಿಸಿ ಶಾಲಾ- ಕಾಲೇಜಿಗೆ ಆಗಮಿಸುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಆದರೂ ಮುಸ್ಲಿಂ (Muslim) ಸಮುದಾಯದ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜುಗಳಿಗೆ ಆಗಮಿಸುತ್ತಿದ್ದರು. ಹೀಗೆ ಸತತ ಸೂಚನೆ ಬಳಿಕವೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬರುತ್ತಿದ್ದ ಆರು ವಿದ್ಯಾರ್ಥಿನಿಯರು ಅಮಾನತುಗೊಂಡಿದ್ದಾರೆ. ಉಪನ್ಯಾಸಕರ ಸಭೆಯಲ್ಲಿ ಒಮ್ಮತದ ನಿರ್ಧಾರದ ಬಳಿಕ ವಿದ್ಯಾರ್ಥಿನಿಯರನ್ನ ಅಮಾನತುಗೊಳಿಸಲಾಗಿದೆ.
ಅಮಾನತುಗೊಂಡಿರುವ 6 ವಿದ್ಯಾರ್ಥಿನಿಯರು ನಿತ್ಯ ಹಿಜಾಬ್ ಧರಿಸಿಯೇ ಕಾಲೇಜಿಗೆ ಬರುತ್ತಿದ್ದರು. ಹಿಜಾಬ್ ಧರಿಸಿದ್ದಕ್ಕೆ ಇತರೆ ವಿದ್ಯಾರ್ಥಿಗಳು ಅಸಮಾಧಾನಗೊಂಡಿದ್ದರು. ಈ ವೇಳೆ ಹಲವು ಬಾರಿ ಕಾಲೇಜು ಸಿಬ್ಬಂದಿ ವಿದ್ಯಾರ್ಥಿನಿಯರಿಗೆ ತಿಳಿ ಹೇಳಿದ್ದರು. ಆದರೂ ಹಿಜಾಬ್ ಧರಿಸಿ ತರಗತಿಗೆ ಪ್ರವೇಶಿಸುತ್ತಿದ್ದರು. ಕಾಲೇಜಿನಲ್ಲಿ ಸಂಘರ್ಷವಾಗುವ ಸಾಧ್ಯತೆ ಹಿನ್ನೆಲೆ ಸಭೆ ನಡೆಸಿ ವಿದ್ಯಾರ್ಥಿನಿಯರನ್ನ ಅಮಾನತುಗೊಳಸಲಾಗಿದೆ.
ಇದನ್ನೂ ಓದಿ: Telangana Formation Day 2022: ಇಂದು ತೆಲಂಗಾಣ ಸಂಸ್ಥಾಪನಾ ದಿನ; ಭಾರತದ ಕಿರಿಯ ರಾಜ್ಯದ ಬಗ್ಗೆ ನಿಮಗೆಷ್ಟು ಗೊತ್ತು?
ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆಗೆ ಯತ್ನ:
ಘಟನೆ ವರದಿ ಮಾಡಲು ತೆರಳಿದ ಸ್ಥಳೀಯ ಮಾಧ್ಯಮ ಪ್ರತಿನಿಧಿಗಳ ಮೇಲೆ ಒಂದು ಕೋಮಿನ ವಿದ್ಯಾರ್ಥಿಗಳು ಹಲ್ಲೆಗೆ ಯತ್ನಿಸಿದ್ದಾರೆ. ವಿದ್ಯಾರ್ಥಿಗಳು ವಿಡಿಯೋವನ್ನು ಬಲತ್ಕಾರವಾಗಿ ಡಿಲೀಟ್ ಮಾಡಿಸಿದ್ದಾರೆ. ಜೊತೆಗೆ ಕಾಲೇಜಿನ ಘಟನೆಯನ್ನು ವರದಿ ಮಾಡದಂತೆ ವಿದ್ಯಾರ್ಥಿಗಳು ತಾಕೀತು ಮಾಡಿದ್ದಾರೆ. ಈ ವೇಳೆ ಪೋಲೀಸರು ವಿದ್ಯಾರ್ಥಿಗಳನ್ನು ತಡೆದು ಪರಿಸ್ಥಿತಿ ನಿಯಂತ್ರಿಸಿದ್ದಾರೆ.
ಹಿಜಾಬ್ ಧರಿಸಿ ಬಂದ 16 ವಿದ್ಯಾರ್ಥಿನಿಯರು: ಇನ್ನು ಮಂಗಳೂರು ವಿವಿ ಘಟಕದ ಕಾಲೇಜಿನಲ್ಲಿ ನಿರ್ಬಂಧದ ನಡುವೆ ವಿದ್ಯಾರ್ಥಿನಿಯರು ಇಂದು ಹಿಜಾಬ್ ಧರಿಸಿ ಆಗಮಿಸಿದ್ದಾರೆ. ಆದರೆ ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಣೆ ಮಾಡಲಾಗಿದೆ. ತರಗತಿಗೆ ಹೋಗದಂತೆ ಪ್ರಾಂಶುಪಾಲೆ ಡಾ.ಅನುಸೂಯ ರೈ ತಡೆದಿದ್ದಾರೆ. ಸೋಮವಾರ ಜಿಲ್ಲಾಧಿಕಾರಿ ಜತೆ ಸಭೆ ನಡೆಸಿದ ಬಳಿಕ ಕಾಲೇಜಿಗೆ ಬಂದಿರಲಿಲ್ಲ. ಇಂದು ಮತ್ತೆ 16 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದಾರೆ.
ಇನ್ನಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:45 am, Thu, 2 June 22