AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಸ್ನೇಹಮಯಿ ಕೃಷ್ಣ ವಿರುದ್ಧ ವಾಮಾಚಾರ ಪ್ರಕರಣ, ಮಹಿಳಾ ಪೊಲೀಸ್ ಅಧಿಕಾರಿಯ ನಂಟು!

ಸ್ನೇಹಮಯಿ ಕೃಷ್ಣ ವಿರುದ್ಧದ ವಾಮಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಲ್ಲರ ಚಿತ್ತ ಉಡುಪಿಯ ಮಹಿಳಾ ಪೊಲೀಸ್ ಅಧಿಕಾರಿಯ ಮೇಲಿದೆ. ಇವರಿಗೂ ಹಾಗೂ ವಾಮಾಚಾರಕ್ಕೂ ನಂಟಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಾಮಾಚಾರ ಪ್ರಕರಣದಲ್ಲಿ ಉಡುಪಿಯ ಮಹಿಳಾ ಸಬ್​ಇನ್​ಸ್ಪೆಕ್ಟರ್​ ಹೆಸರು ಥಳುಕು ಹಾಕಿಕೊಂಡಿದೆ. ರಾಮಸೇನಾ ಮುಖಂಡ ಪ್ರಸಾದ್ ಅತ್ತಾವರ್ ಪತ್ನಿ ಸುಮಾ ನಂಟಿದೆ ಎಂದು ಹೇಳಲಾಗಿದೆ. ಮಹಿಳಾ ಪೊಲೀಸ್ ಅಧಿಕಾರಿ ನಂಟಿನ ಬಗ್ಗೆ ಖುದ್ದಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

ಮಂಗಳೂರು: ಸ್ನೇಹಮಯಿ ಕೃಷ್ಣ ವಿರುದ್ಧ ವಾಮಾಚಾರ ಪ್ರಕರಣ, ಮಹಿಳಾ ಪೊಲೀಸ್ ಅಧಿಕಾರಿಯ ನಂಟು!
ಸ್ನೇಹಮಯಿ ಕೃಷ್ಣ
ಅಶೋಕ್​ ಪೂಜಾರಿ, ಮಂಗಳೂರು
| Updated By: ನಯನಾ ರಾಜೀವ್|

Updated on:Feb 27, 2025 | 10:18 AM

Share

ಮಂಗಳೂರು, ಫೆಬ್ರವರಿ 27: ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ (Snehamayi Krishna) ಹಾಗೂ ಗೋವಿಂದರಾಜು ಸೇರಿ ಹಲವರ ಮೇಲೆ ವಾಮಾಚಾರ ನಡೆದಿದೆ ಎನ್ನುವ ಆರೋಪ ಕೇಳಿಬಂದಿದ್ದು, ಇದೆಲ್ಲದರ ಹಿಂದೆ ಮಹಿಳಾ ಪೊಲೀಸ್ ಅಧಿಕಾರಿಯ ಕೈವಾಡವಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಈಗಾಗಲೇ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಸ್ನೇಹಮಯಿ ಕೃಷ್ಣ ಮೇಲೆ ಬೆಂಗಳೂರಿನ ಅಶೋಕ್ ನಗರದ ಸ್ಮಶಾನದಲ್ಲಿ ಇಬ್ಬರು ಆರೋಪಿಗಳು ಕಾಳಿಕಾಂಬ ಗುಡಿಯ ಅರ್ಚಕರಿಗೆ ವಿಚಾರ ತಿಳಿಸದೆ ಕುರಿಗಳನ್ನು ಬಲಿ ನೀಡಿ, ವಾಮಾಚಾರ ಮಾಡಿದ್ದಾರೆ ಎಂದು ಪೊಲೀಸರು ತನಿಖೆಯಲ್ಲಿ ತಿಳಿದುಬಂದಿತ್ತು.

ವಾಮಾಚಾರ ಪ್ರಕರಣದಲ್ಲಿ ಉಡುಪಿಯ ಮಹಿಳಾ ಸಬ್​ಇನ್​ಸ್ಪೆಕ್ಟರ್​ ಹೆಸರು ಥಳುಕು ಹಾಕಿಕೊಂಡಿದೆ. ರಾಮಸೇನಾ ಮುಖಂಡ ಪ್ರಸಾದ್ ಅತ್ತಾವರ್ ಪತ್ನಿ ಸುಮಾ ನಂಟಿದೆ ಎಂದು ಹೇಳಲಾಗಿದೆ. ಮಹಿಳಾ ಪೊಲೀಸ್ ಅಧಿಕಾರಿ ನಂಟಿನ ಬಗ್ಗೆ ಖುದ್ದಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ
Image
ಮುಡಾ ಹಗರಣ: ಸಿದ್ದರಾಮಯ್ಯಗೆ ಬಿಗ್​ ರಿಲೀಫ್​​
Image
ಸಿದ್ದರಾಮಯ್ಯ ರಾಜೀನಾಮೆ: ಕೋರ್ಟ್​ ತೀರ್ಪು ಮೊದಲೇ ಸ್ನೇಹಮಯಿ ಕೃಷ್ಣ ಭವಿಷ್ಯ
Image
ಮುಡಾ ಹಗರಣ ಬೆನ್ನಲ್ಲೇ ಸಿದ್ದರಾಮಯ್ಯಗೆ ಮತ್ತೊಂದು ಕೇಸ್ ಸಂಕಷ್ಟ: ಏನದು?
Image
ಮುಡಾ ಹಗರಣ: ಸಿಎಂ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ

ಮತ್ತಷ್ಟು ಓದಿ: ಸ್ನೇಹಮಯಿ ಕೃಷ್ಣ ವಿರುದ್ಧ ಬೆಂಗಳೂರಿನ ಸ್ಮಶಾನದಲ್ಲಿ ವಾಮಾಚಾರ: ಪೊಲೀಸ್​

ವಾಮಾಚಾರ ಪ್ರಕರಣದಲ್ಲಿ ಅವರ ಹೆಸರು ಕೇಳಿಬರುತ್ತಿದ್ದಂತೆ ಅವರು ತಲೆಮರೆಸಿಕೊಂಡಿದ್ದಾರೆ. ಮಂಗಳೂರು ಪೊಲೀಸರು ನೋಟಿಸ್ ಕಳುಹಿಸಿದರೂ ಯಾವ ಉತ್ತರವೂ ಬಂದಿಲ್ಲ. ಪ್ರಸಾದ್ ಅತ್ತಾವರ ಮೊಬೈಲ್​ನಲ್ಲಿ ಸಿಕ್ಕ ವಾಮಾಚಾರ ಫೋಟೊಗಳಲ್ಲೂ ಸುಮಾ ಹೆಸರಿದೆ. ಪ್ರಾಣಿ ಬಲಿ ಕೊಡುವ ವೇಳೆ ಚೀಟಿಯಲ್ಲೂ ಸುಮಾ ಹೆಸರು ಉಲ್ಲೇಖಿಸಲಾಗಿದೆ. ಪ್ರಸಾದ್ ಅತ್ತಾವರ, ಸ್ನೇಹಮಯಿ ಕೃಷ್ಣ, ಗಂಗರಾಜು, ಶ್ರೀನಿಧಿ ಹೆಸರಿನ ಜೊತೆ ಸುಮಾ ಹೆಸರು ಉಲ್ಲೇಖಿಸಲಾಗಿದೆ.

ಡಿ.7, 2024ರಂದು ಹಣದ ಬ್ಯಾಗ್ ನ ಫೋಟೋ ಸುಮಾಗೆ ಪ್ರಸಾದ್ ಕಳುಹಿಸಿದ್ದರು, ಪ್ರಸಾದ್ ಅತ್ತಾವರ ಜೊತೆ ಪತ್ನಿ ಸುಮಾ ಕೂಡ ಕೇಸ್ ನಲ್ಲಿ ನಾಪತ್ತೆಯಾಗಿದ್ದಾರೆ. ಪ್ರಸಾದ್ ಮೂಲಕ ಮೈಸೂರು ಮೂಲದವರು ವಾಮಚಾರ ಮಾಡಿಸಿರುವ ಅನುಮಾನ ಮೂಡಿದೆ. ಬೆಂಗಳೂರಿನ ಅಶೋಕ ನಗರ ಸ್ಮಶಾನದ ಕಾಳಿಕಾಂಬ ಗುಡಿಯಲ್ಲಿ ವಾಮಾಚಾರ ಪ್ರಯೋಗ ಮಾಡಲಾಗಿದೆ. ಪ್ರಸಾದ್ ಅತ್ತಾವರ ಅಧ್ಯಾತ್ಮ ಮತ್ತು ವಿಭಿನ್ನ ಆರಾಧನೆಗಳಲ್ಲಿ ಹಲವು ವರ್ಷಗಳಿಂದ ಆಸಕ್ತಿ ಹೊಂದಿರುವುದು ತಿಳಿದುಬಂದಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:12 am, Thu, 27 February 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ