AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಹೆಚ್​ಪಿ ಮುಖಂಡ ಶರಣ್​ ಪಂಪ್ವೆಲ್​, ಭರತ್ ಕುಮ್ಡೇಲ್​​ಗೆ ಜೀವ ಬೆದರಿಕೆ: ಮಂಗಳೂರು ಪೊಲೀಸರಿಂದ ಪ್ರಕರಣ ದಾಖಲು

ಮಂಗಳೂರಿನಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಮುಖಂಡರಾದ ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೇಲ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ ಹಾಕಿರುವ ವಿಚಾರವಾಗಿ ಕದ್ರಿ ಮತ್ತು ಬಂಟ್ವಾಳ ಗ್ರಾಮಾಂತರ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಎಸ್​ಡಿಪಿಐ ಮುಖಂಡ ರಿಯಾಜ್ ಕಡಂಬು ಅವರಿಗೂ ಬೆದರಿಕೆ ಇದ್ದು, ಆ ಬಗ್ಗೆಯೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವಿಹೆಚ್​ಪಿ ಮುಖಂಡ ಶರಣ್​ ಪಂಪ್ವೆಲ್​, ಭರತ್ ಕುಮ್ಡೇಲ್​​ಗೆ ಜೀವ ಬೆದರಿಕೆ: ಮಂಗಳೂರು ಪೊಲೀಸರಿಂದ ಪ್ರಕರಣ ದಾಖಲು
ಬೆದರಿಕೆ ಸಂದೇಶಗಳು ಹಾಗೂ ಎಫ್​ಐಆರ್ ಪ್ರತಿ
ಅಶೋಕ್​ ಪೂಜಾರಿ
| Edited By: |

Updated on: May 05, 2025 | 8:36 AM

Share

ಮಂಗಳೂರು, ಮೇ 5: ಜೀವ ಬೆದರಿಕೆ (Death Threat) ಇರುವ ವಿಚಾರವಾಗಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್​ ಪಂಪ್ವೆಲ್ (Sharan Pumpwell) ಮಂಗಳೂರಿನ ಕದ್ರಿ ಠಾಣೆಗೆ ಭಾನುವಾರ ದೂರು ನೀಡಿದ್ದಾರೆ. ಅದರಂತೆ ಪ್ರಕರಣ ದಾಖಲಿಸಿಕೊಂಡ ಕದ್ರಿ ಠಾಣೆ ಪೊಲೀಸರು ಇನ್​ಫಾರ್ಮೇಶನ್ ಟೆಕ್ನಾಲಜಿ ಆ್ಯಕ್ಟ್ ಮತ್ತು ಬಿಎನ್​ಎಸ್ ಕಾಯ್ದೆ 351(4) ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಶರಣ್​ ಪಂಪ್ವೆಲ್​ಗೆ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಜೀವ ಬೆದರಿಕೆ ಒಡ್ಡಿದ್ದರು. ‘‘ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್’’ ಎಂದು ಪೋಸ್ಟ್ ಮಾಡಿದ್ದರು.

‘‘ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್. ಶರಣ್ ಹತ್ಯೆಯಾಗಲು ತಯಾರಾಗು’’ ಸಾಮಾಜಿಕ ಮಾಧ್ಯಮ ಸಂದೇಶದಲ್ಲಿ ಬೆದರಿಕೆ ಹಾಕಲಾಗಿತ್ತು. ಶರಣ್ ಪಂಪ್ವೆಲ್ ಮಾತ್ರವಲ್ಲದೆ ಇನ್ನೂ ಕೆಲವು ಮಂದಿ ಮುಖಂಡರಿಗೆ ಸಾಮಾಜಿಕ ಮಾಧ್ಯಮದ ಮೂಲಕ ಬೆದರಿಕೆ ಹಾಕಲಾಗಿದೆ.

ಬಜರಂಗದಳ ಮುಖಂಡ ಭರತ್ ಕುಮ್ಡೇಲ್ ಹತ್ಯೆ ಬೆದರಿಕೆ ಸಂದೇಶ ವಿಚಾರವಾಗಿ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಎನ್​ಎಸ್ ಕಾಯ್ದೆ 196(1)(C), 353(2) ಸೆಕ್ಷನ್ ಅಡಿ ಪ್ರಕರಣ ದಾಖಲಿಸಲಾಗಿದೆ. ‘‘ಅಶ್ರಫ್ ಕೊಂದ ಭರತ್​ನನ್ನು ಮರೆತಿಲ್ಲ ಎಂದು ಕಿಡಿಗೇಡಿಗಳು ಪೋಸ್ಟ್ ಹಾಕಿದ್ದರು. ‘‘Wait and watch’’ ಎಂದು ತಲ್ವಾರ್ ಫೋಟೋ ಪೋಸ್ಟ್ ಮಾಡಿದ್ದರು.

ಇದನ್ನೂ ಓದಿ
Image
ಮಂಗಳೂರು: ಮುಂದುವರಿದ ಪ್ರತೀಕಾರದ ಎಚ್ಚರಿಗಳು, ಕೊಚ್ಚಿ ಕೊಲ್ಲುವ ಸಂದೇಶಗಳು
Image
ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಮಂಗಳೂರಿನ 3 ಕಡೆ ಚಾಕು ಇರಿತ: 7 ಜನರ ಬಂಧನ
Image
ಸುಹಾಸ್ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿರುವ ಇಬ್ಬರು ಹಿಂದೂಗಳು ಯಾರು?
Image
ಸುಹಾಸ್ ಹತ್ಯೆ: ಫಿನೀಶ್, ರಿವೇಂಜ್ ಪೋಸ್ಟ್​​ಗಳ ವಿರುದ್ಧ 12 ಪ್ರಕರಣ ದಾಖಲು

ಇದನ್ನೂ ಓದಿ: ಸುಹಾಸ್ ಬೆನ್ನಲ್ಲೇ ಮತ್ತಿಬ್ಬರು ಹಿಂದೂ ಮುಖಂಡರಿಗೆ ಬೆದರಿಕೆ: ಹತ್ಯೆಗೆ ಸ್ಥಳ, ದಿನಾಂಕ ಫಿಕ್ಸ್

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಿಂದ ಕರಾವಳಿಯಲ್ಲಿ ಕೋಮು ಉದ್ವಿಗ್ನತೆ ಹೆಚ್ಚಾಗಿರುವ ಸಂದರ್ಭದಲ್ಲೇ ಇಂತಹ ಸಾಮಾಜಿಕ ಮಾಧ್ಯಮ ಸಂದೇಶಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನಿಶ್ಚಿತತೆ ಸೃಷ್ಟಿಸಿವೆ. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್ ಮತ್ತು ಭಾರತ್ ಕುಮ್ಡೇಲ್ ಎಂಬ ಬರಹವುಳ್ಳ ಸಂದೇಶಗಳು ಸಾಮಾಜಿಕ ಮಾಧ್ಯಮಗಳಾಗಿ ಹರಿದಾಡಿದ್ದವು.

ರಿಯಾಜ್ ಕಡಂಬು ವಿರುದ್ಧ ಬೆದರಿಕೆ: ಪ್ರಕರಣ ದಾಖಲು

ಎಸ್​​ಡಿಪಿಐ ಮುಖಂಡ ರಿಯಾಜ್ ಕಡಂಬು ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿದವರ ಮೇಲೆ ಎಫ್​ಐಆರ್​​ ದಾಖಲಿಸಲಾಗಿದೆ. ಕೊಲೆ ಬೆದರಿಕೆ ಹಾಕಿದ ಕೆ.ಆರ್ ರಾಕೇಶ್ ವಿರುದ್ಧ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಯೂಟ್ಯೂಬ್‌ನಲ್ಲಿ ಸುಹಾಸ್ ಶೆಟ್ಟಿ ಕೊಲೆ ಸುದ್ದಿ ಪ್ರಸಾರವಾಗುತ್ತಿದ್ದ ವೇಳೆ ಕಮೆಂಟ್ ಮೂಲಕ ಕೊಲೆ ಬೆದರಿಕೆ ಹಾಕಲಾಗಿತ್ತು. ‘‘Next is Riyaz Kadanbu hit list’’ ಎಂದು @Krrakesh9456 ಖಾತೆ ಮೂಲಕ ಕಮೆಂಟ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ರಿಯಾಜ್ ಕಡಂಬು ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ