ನೇಣು ಬಿಗಿದ ಸ್ಥಿತಿಯಲ್ಲಿ ಸೋಶಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ ‘ಚಿನ್ನು ಪಾಪು’ ಶವ ಪತ್ತೆ

ಕಾಸರಗೋಡಿನಲ್ಲಿ ಪ್ರಖ್ಯಾತ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಚಿನ್ನು ಪಪ್ಪು ಅಲಿಯಾಸ್ ರೇಷ್ಮಾ ನಿಗೂಢವಾಗಿ ಮೃತಪಟ್ಟಿದ್ದಾರೆ. ಪತಿಯಿಂದ ವಿಚ್ಛೇದನ ಪಡೆದು ಒಬ್ಬರೇ ವಾಸಿಸುತ್ತಿದ್ದ ರೇಷ್ಮಾ, ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. 2.06 ಲಕ್ಷ ಫಾಲೋವರ್ಸ್‌ ಹೊಂದಿದ್ದ ರೇಷ್ಮಾ ಸಾವು ಹಲವರಲ್ಲಿ ಆಘಾತ ಮೂಡಿಸಿದೆ. ಪೊಲೀಸರು ಇವರ ಮೊಬೈಲ್ ವಶಕ್ಕೆ ಪಡೆದು ಪರಿಶೀ​​ಲನೆ ನಡೆಸುತ್ತಿದ್ದು, ಸಾವಿಗೆ ನಿಖರ ಕಾರಣ ಇನ್ನಷ್ಟೇ ಗೊತ್ತಾಗಬೇಕಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಸೋಶಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ ಚಿನ್ನು ಪಾಪು ಶವ ಪತ್ತೆ
ಮೃತ ರೇಷ್ಮಾ
Image Credit source: Google
Edited By:

Updated on: Feb 10, 2026 | 2:40 PM

ಮಂಗಳೂರು, ಫೆಬ್ರವರಿ 10: ನಿಗೂಢ ರೀತಿಯಲ್ಲಿ ಪ್ರಖ್ಯಾತ ಸೋಶಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ ಮೃತಪಟ್ಟಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ‘ಚಿನ್ನು ಪಾಪು’ ಎಂದೇ ಪ್ರಖ್ಯಾತರಾಗಿದ್ದ ರೇಷ್ಮಾ, ಉಳಿಯತ್ತಡ್ಕದಲ್ಲಿರುವ ತಮ್ಮ ಬಾಡಿಗೆ ಮನೆಯ ಕೋಣೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅಕ್ಕಪಕ್ಕದವರು ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವಷ್ಟರಲ್ಲಿಯೇ ಅವರು ಮೃತಪಟ್ಟಿರುವ ಬಗ್ಗೆ ವೈದ್ಯರು ಖಚಿತಪಡಿಸಿದ್ದಾರೆ.

ಕಳೆದ ಐದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ರೇಷ್ಮಾ, 4 ವರ್ಷ ವಯಸ್ಸಿನ ಮಗುವನ್ನು ಕೂಡ ಹೊಂದಿದ್ದಾರೆ. ಗಂಡನಿಂದ ಇತ್ತೀಚೆಗೆ ವಿಚ್ಛೇದನ ಪಡೆದಿದ್ದ ಇವರು, ಬಳಿಕ ಕಾಸರಗೋಡಿನಲ್ಲಿ ಒಬ್ಬಳೇ ವಾಸ ಮಾಡುತ್ತಿದ್ದರು. ಅವರ ನಾಲ್ಕು ವರ್ಷದ ಮಗು ರೇಷ್ಮಾಪೋಷಕರೊಂದಿಗೆ ಆಡುವೂರಿನಲ್ಲಿ ವಾಸಿಸುತ್ತಿದೆ ಎನ್ನಲಾಗಿದ್ದು, ಇವರ ಮನೆಗೆ ಹೊಸ ಬಾಯ್ ಫ್ರೆಂಡ್ ಒಬ್ಬ ಬಂದು ಹೋಗುತ್ತಿದ್ದ ಬಗ್ಗೆ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರೇಷ್ಮಾ ಮೊಬೈಲ್​​ನ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಎಲ್ಲ ಆಯಾಮದಲ್ಲೂ ಪೊಲೀಸರ ತನಿಖೆ ಮುಂದುವರಿದಿದೆ.

ಇದನ್ನೂ ಓದಿ: ಬೆಳ್ತಂಗಡಿಯಲ್ಲಿ ವಿದ್ಯಾರ್ಥಿನಿ ಕಿಡ್ನ್ಯಾಪ್​​ ಯತ್ನ ಕೇಸ್​​ಗೆ ಬಿಗ್​​ ಟ್ವಿಸ್ಟ್​​; ಇಲ್ಲಿದೆ ಅಸಲಿ ಕಹಾನಿ

ಚಿನ್ನು ಪಪ್ಪು ಅಲಿಯಾಸ್ ರೇಷ್ಮಾ ಯಾರು?

ಕಾಸರಗೋಡಿನ ಆಡುವೂರು ನಿವಾಸಿಯಾಗಿದ್ದ 24 ವರ್ಷದ ಚಿನ್ನು ಪಪ್ಪು, ಇನ್‌ಸ್ಟಾಗ್ರಾಮ್‌ನಲ್ಲಿ 2.06 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್​​ ಹೊಂದಿರುವ ಯುವ ಇನ್‌ಫ್ಲ್ಯೂಯೆನ್ಸರ್‌ ಆಗಿದ್ದರು.  ಇನ್‌ಸ್ಟಾಗ್ರಾಮ್‌ನಲ್ಲಿ ಗ್ರಾಮೀಣ ಬದುಕು, ಆಹಾರ, ಅನಾವೃತ ಸ್ಥಳಗಳು ಹಾಗೂ ತುಳು ಸಂಸ್ಕೃತಿ ಕುರಿತ ವಿಷಯಗಳನ್ನು ಹಂಚಿಕೊಳ್ಳುತ್ತಿದ್ದರು. ವಾರದ ಹಿಂದೆ ಇವರು ಹಂಚಿಕೊಂಡಿದ್ದ ಪೋಸ್ಟ್‌ಗೆ ಸುಮಾರು 6,000 ಲೈಕ್‌ಗಳು ಬಂದಿದ್ದವು.

ರೇಷ್ಮಾ ಸಾವಿಗೆ ಸಂತಾಪ

ಕಾರು ಮತ್ತು ತಂತ್ರಜ್ಞಾನ ಸಂಬಂಧಿತ ವಿಷಯಗಳನ್ನು ಹಂಚಿಕೊಳ್ಳುವ ಕಂಟೆಂಟ್ ಕ್ರಿಯೇಟರ್ ಗೋಪಿಕೃಷ್ಣ ಸೇರಿದಂತೆ ಹಲವರು, ಸದಾ ನಗುವ ಮುಖದ ಚಿನ್ನು ಪಪ್ಪು ಇಷ್ಟೊಂದು ಬೇಗ ನಮ್ಮನ್ನೆಲ್ಲ ಬಿಟ್ಟು ಹೋಗಿದ್ದಾರೆಂಬುದು ನಂಬಲಾಗುತ್ತಿಲ್ಲ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ

Published On - 2:38 pm, Tue, 10 February 26

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Loading...
Unable to load recommendations.
Follow Us