AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಸೌತಡ್ಕ ಮಹಾಗಣಪತಿ ದೇವಸ್ಥಾನದ ಭೂಮಿ, ಹಣ ದುರುಪಯೋಗ ಆರೋಪ

ಸೌತಡ್ಕ ಮಹಾಗಣಪತಿ ದೇವಸ್ಥಾನದ ಜಾಗ ಮತ್ತು ಹಣದ ದುರುಪಯೋಗದ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಅಕ್ರಮಗಳ ವಿರುದ್ಧ ಅನಿರ್ದಿಷ್ಟಾವಧಿ ಧರಣಿಗೆ ನಿರ್ಧಾರ ಕೈಗೊಳ್ಳಲಾಗಿದೆ. ಶ್ರೀಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಪ್ರತಿಭಟನೆ ನಡೆಸುತ್ತಿದೆ.

ಮಂಗಳೂರು: ಸೌತಡ್ಕ ಮಹಾಗಣಪತಿ ದೇವಸ್ಥಾನದ ಭೂಮಿ, ಹಣ ದುರುಪಯೋಗ ಆರೋಪ
ಸೌತಡ್ಕ ಮಹಾಗಣಪತಿ ದೇವಸ್ಥಾನ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on:Nov 06, 2024 | 10:33 AM

Share

ಮಂಗಳೂರು, ನವೆಂಬರ್​ 06: ಪ್ರಸಿದ್ಧ ಸೌತಡ್ಕ ಮಹಾಗಣಪತಿ ದೇವಸ್ಥಾನದ (Sautdka Mahaganapati Temple) ಜಾಗ ಮತ್ತು ಹಣ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಶ್ರೀಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಗಂಭೀರ ಆರೋಪ ಮಾಡಿದೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಂಗಡಿ (Belthangady) ತಾಲೂಕಿನ ಕೊಕ್ಕಡದಲ್ಲಿ ಸೌತಡ್ಕ ಮಹಾಗಣಪತಿ ದೇವಸ್ಥಾನವಿದೆ. ಈ ದೇವಸ್ಥಾನ ಬಯಲು ಆಲಯ ಗಣಪನೆಂದೇ ಪ್ರಸಿದ್ಧಿ ಪಡೆದಿದೆ. ಸೌತಡ್ಕ ಮಹಾಗಣಪತಿ ದೇವಸ್ಥಾನ ಮುಜರಾಯಿ ಇಲಾಖೆಗೆ ಒಳಪಟ್ಟಿದೆ.

ದೇವಸ್ಥಾನದಲ್ಲಿನ ಅವ್ಯವಹಾರಗಳ ಸಮಗ್ರ ತನಿಖೆಗೆ ಒತ್ತಾಯಿಸಿ ನ.11ರಿಂದ ಅನಿರ್ಧಿಷ್ಟ ಧರಣಿ ನಡೆಸಲು ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ನಿರ್ಧರಿಸಿದೆ. ದೇವಸ್ಥಾನದ ಹೆಸರಿನಲ್ಲಿ ಖರೀದಿಸಿದ ಸ್ಥಿರಾಸ್ತಿ ದೇವಸ್ಥಾನದ ಹೆಸರಿಗೆ ಬರೆಸಬೇಕು. ಖಾಸಗಿಯಾಗಿ ರಚಿಸಿರುವ ಟ್ರಸ್ಟ್​ನ್ನು ರದ್ದುಪಡಿಸಿ ಅದರ ಆಸ್ತಿಯನ್ನು ದೇವಸ್ಥಾನಕ್ಕೆ ಹಸ್ತಾಂತರಿಸಬೇಕು. ಆದಾಯ ನೇರವಾಗಿ ದೇವಸ್ಥಾನದ ಖಜಾನೆಗೆ ಸೇರಬೇಕು. ಜಾಗವನ್ನು ದಾನಪತ್ರದ ಮೂಲಕ ಖಾಸಗಿ ಸಂಸ್ಥೆಗೆ ಹಸ್ತಾಂತರ ಮಾಡುವುದಕ್ಕೆ ತಡೆ ನೀಡಬೇಕು ಎಂದು ಸಂಘಟನೆ ಆಗ್ರಹಿಸಲಿದೆ.

ಭಕ್ತರ ವಾಹನಗಳ ಪಾರ್ಕಿಂಗ್, ಪೂಜಾ ಸಾಮಾಗ್ರಿಗಳ ಅಂಗಡಿ, ವಸತಿಗೃಹ ನಿರ್ಮಾಣಕ್ಕಾಗಿ 2004ರಲ್ಲಿ 3.46 ಎಕರೆ ಜಮೀನು ಖರೀದಿಸಲಾಗಿದೆ. ದೇವಸ್ಥಾನದಲ್ಲಿ ಹಣ ಇಲ್ಲದ ಕಾರಣ ಆಡಳಿತ ಮಂಡಳಿಯವರಿಂದಲೇ ಜಾಗ ಖರೀದಿ ಮಾಡಲಾಗಿದೆ. ತಮ್ಮ ಖಾಸಗಿ ಜಾಗ ಅಡವಿಟ್ಟು, ಈ ಜಾಗವನ್ನು ಮೂವರು ಖರೀದಿ ಮಾಡಿದ್ದರು. ಈ ಜಮೀನು ಮೂವರ ಹೆಸರಿನಲ್ಲೇ ನೋಂದಣಿಯಾಗಿತ್ತು.

ಇದನ್ನೂ ಓದಿ: ಬಂಟ್ವಾಳದ ದೇವಸ್ಥಾನದಲ್ಲಿ ಲಕ್ಷಾಂತರ ರೂ. ಮೌಲ್ಯದ ಬೆಳ್ಳಿ, ಚಿನ್ನಾಭರಣ ದರೋಡೆ

ವರ್ಷದ ಬಳಿಕ ಭಕ್ತರ ದೇಣಿಗೆಯಿಂದ ಅವರ ಹಣವನ್ನು ದೇವಸ್ಥಾನ ಹಿಂದುರುಗಿಸಿತ್ತು. ಆದರೆ, ಆ ಬಳಿಕ ಭೂಮಿಯನ್ನು ದೇವಸ್ಥಾನದ ಹೆಸರಿಗೆ ಮಾಡಲು ಕಾನೂನು ತೊಡಕು ಎದುರಾಗಿದೆ. ಕೃಷಿ ಭೂಮಿಯಾದ ಕಾರಣ ದೇವಸ್ಥಾನದ ಹೆಸರಿಗೆ ಮಾಡಲು ಕಾನೂನು ತೊಂದರೆ ಉಂಟಾಗಿದೆ.

ಆಗ, ಆಡಳಿತ ಮಂಡಳಿಯಿಂದ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಸೌತಡ್ಕ ಎಂಬ ಟ್ರಸ್ಟ್ ಆರಂಭಿಸಿತು. ಸದ್ಯ ವಾಣಿಜ್ಯ ಕಟ್ಟಡದ ಬಾಡಿಗೆ, ವಸತಿಗೃಹದ ಬಾಡಿಗೆ ಸೇರಿ ಕೋಟಿ ಗಟ್ಟಲೆ ಹಣ ಟ್ರಸ್ಟ್​ಗೆ ಬರುತ್ತಿದೆ. ಆದರೆ, ದೇವಸ್ಥಾನದ ಹೆಸರಿನಲ್ಲಿ ಬರುತ್ತಿರುವ ಆದಾಯ ಖಾಸಗಿಯವರ ಪಾಲಾಗುತ್ತಿದೆ. ಈ ನಡುವೆ ದೇವಸ್ಥಾನದ ಹೆಸರಿನಲ್ಲಿ ಖರೀದಿಸಿದ ಭೂಮಿಯನ್ನು ಖಾಸಗಿ ಶಿಕ್ಷಣ ಸಂಸ್ಥೆಗೆ ಗಿಫ್ಟ್ ಡಿಡಿ ನೀಡಲು ನಿರ್ಧರಿಸಲಾಗಿದೆ. ಜಮೀನು ದೇವಸ್ಥಾನದ ಹೆಸರಿಗೆ ನೋಂದಣಿ ಆಗದ ಕಾರಣ ಖಾಸಗಿ ವ್ಯಕ್ತಿಗಳು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಹೀಗಾಗಿ, ಜಾಗ, ಆದಾಯ ದೇವಸ್ಥಾನದ ಖಜಾನೆಗೆ ಸೇರುವಂತೆ ಮಾಡಲು ಒತ್ತಾಯಿಸಿ‌ ಅನಿರ್ದಿಷ್ಟಾವಧಿ ಧರಣಿ ನಡೆಸಲು ನಿರ್ಧರಿಸಲಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:33 am, Wed, 6 November 24

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ