AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ ರೈತನ ಮಗಳಿಗೆ ‘ವೀಸಾ’ ಕಂಪನಿಯಲ್ಲಿ 46.33 ಲಕ್ಷ ರೂ. ಬಂಪರ್ ಉದ್ಯೋಗ: ಆಳ್ವಾಸ್ ಕಾಲೇಜಿಗೆ ಹಿರಿಮೆ

ಹಾವೇರಿ ಜಿಲ್ಲೆಯ ರೈತನ ಮಗಳು ಸೃಷ್ಟಿ ಮಂಜುನಾಥ್ ಉಳ್ಳಾಗಡ್ಡಿ, ಮೂಡುಬಿದಿರೆಯ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯಿಂದ ವಾರ್ಷಿಕ 46.33 ಲಕ್ಷ ರೂ. ಪ್ಯಾಕೇಜ್‌ಗೆ 'ವೀಸಾ' ಕಂಪನಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಆಯ್ಕೆಯಾಗಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸರಿಯಾದ ಮಾರ್ಗದರ್ಶನದಿಂದ ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡಬಹುದು ಎಂಬುದಕ್ಕೆ ಸೃಷ್ಟಿ ಉದಾಹರಣೆ. ಅವರ ಇಂಟರ್ನ್‌ಶಿಪ್ ಅನುಭವ ಮತ್ತು ಆಳ್ವಾಸ್ ಬೆಂಬಲ ಈ ಯಶಸ್ಸಿಗೆ ಕಾರಣವಾಗಿದೆ.

ಹಾವೇರಿ ರೈತನ ಮಗಳಿಗೆ 'ವೀಸಾ' ಕಂಪನಿಯಲ್ಲಿ 46.33 ಲಕ್ಷ ರೂ. ಬಂಪರ್ ಉದ್ಯೋಗ: ಆಳ್ವಾಸ್ ಕಾಲೇಜಿಗೆ ಹಿರಿಮೆ
ಸೃಷ್ಟಿ
ಅಕ್ಷಯ್​ ಪಲ್ಲಮಜಲು​​
|

Updated on: Sep 01, 2026 | 2:35 PM

Share

ಮಂಗಳೂರು, ಸೆ.1: ಗ್ರಾಮೀಣ ಭಾಗದ ಶ್ರಮಿಕ ರೈತನ ಮಗಳೊಬ್ಬಳು ತನ್ನ ಪ್ರತಿಭೆಯಿಂದ ಜಾಗತಿಕ ಮಟ್ಟದ ಕಂಪನಿಯಲ್ಲಿ ಬೃಹತ್ ಪ್ರಮಾಣದ ಉದ್ಯೋಗ ಗಿಟ್ಟಿಸಿಕೊಂಡು ಸಾಧನೆ ಮಾಡಿದ್ದಾಳೆ. ಹಾವೇರಿ ಜಿಲ್ಲೆಯ ರೈತನ ಮಗಳು ಸೃಷ್ಟಿ ಮಂಜುನಾಥ ಉಳ್ಳಾಗಡ್ಡಿ, ಮೂಡುಬಿದಿರೆಯ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ (AIET) ಇತಿಹಾಸದಲ್ಲೇ ಗರಿಷ್ಠ ಮೊತ್ತದ ಅಂದರೆ ವಾರ್ಷಿಕ 46.33 ಲಕ್ಷ ರೂ. ಪ್ಯಾಕೇಜ್ ಹಾಗೂ ಸೌಲಭ್ಯಗಳ ಉದ್ಯೋಗ ಗಿಟ್ಟಿಸಿಕೊಂಡು ಹೊಸ ದಾಖಲೆ ಬರೆದಿದ್ದಾರೆ.

ಡಿಜಿಟಲ್ ಪಾವತಿ ತಂತ್ರಜ್ಞಾನ ಸಂಸ್ಥೆಯಾದ ‘ವೀಸಾ’ (Visa) ಕಂಪನಿಯಲ್ಲಿ ಸೃಷ್ಟಿ ಅವರು ‘ಸಾಫ್ಟ್‌ವೇರ್ ಇಂಜಿನಿಯರ್’ ಆಗಿ ಆಯ್ಕೆಯಾಗಿದ್ದಾರೆ. ಹಾವೇರಿ ಜಿಲ್ಲೆಯ ಹತ್ತಿಮತ್ತೂರು ಗ್ರಾಮದ ರೈತ ಮಂಜುನಾಥ್ ಹಾಗೂ ಸುಜಾತಾ ದಂಪತಿಯ ಮಗಳಾದ ಸೃಷ್ಟಿ, ಆಳ್ವಾಸ್ ಕಾಲೇಜಿನಲ್ಲಿ ಮಾಹಿತಿ ವಿಜ್ಞಾನ ಇಂಜಿನಿಯರಿಂಗ್ (Information Science Engineering) ಕೊನೆಯ ವರ್ಷದ ವ್ಯಾಸಂಗ ಮಾಡುತ್ತಿದ್ದಾರೆ.

6ನೇ ಸೆಮೆಸ್ಟರ್‌ನಲ್ಲಿ ವೀಸಾ ಸಂಸ್ಥೆಯಲ್ಲಿ 10 ವಾರಗಳ ಇಂಟರ್ನ್‌ಶಿಪ್ ಪೂರ್ಣಗೊಳಿಸಿದ್ದ ಸೃಷ್ಟಿ, ಆ ಅವಧಿಯಲ್ಲಿ ಪ್ರತಿ ತಿಂಗಳು 90 ಸಾವಿರ ರೂ. ಸ್ಟೈಫಂಡ್ ಪಡೆಯುತ್ತಿದ್ದರು. ಕಠಿಣ ಸಂದರ್ಶನ ಹಾಗೂ ಅವರ ಕಾರ್ಯಕ್ಷಮತೆಯನ್ನು ಮೆಚ್ಚಿ ಸಂಸ್ಥೆಯು ಪ್ಲೇಸ್‌ಮೆಂಟ್ ಪೂರ್ವ ಆಫರ್ (Pre-Placement Offer) ನೀಡಿದೆ. ಈಗ ಈಕೆಗೆ ಸಿಕ್ಕ ಕೆಲಸದಲ್ಲಿ ವಾರ್ಷಿಕವಾಗಿ 35.58 ಲಕ್ಷ ರೂ. ವೇತನ, ಕುಟುಂಬ ವೈದ್ಯಕೀಯ ವಿಮೆ 7.5 ಲಕ್ಷ ರೂ. ಹಾಗೂ ಒಪಿಡಿ (OPD) ವೈದ್ಯಕೀಯ ನೆರವು 25 ಸಾವಿರ ರೂ., ಶೈಕ್ಷಣಿಕ ನೆರವು 3 ಲಕ್ಷ ರೂ. ಸಿಗಲಿದೆ. ಹಾಗೂ ಇತರ ಸೌಲಭ್ಯಗಳಾದ ಉಚಿತ ಜಿಮ್, ಕಚೇರಿ ಸಾರಿಗೆ ಮತ್ತು ವಾರ್ಷಿಕ ಆರೋಗ್ಯ ತಪಾಸಣೆ ಒಳಗೊಂಡು ಒಟ್ಟು ಪ್ಯಾಕೇಜ್ ಮೌಲ್ಯ 46.33 ಲಕ್ಷ ರೂ.

ಇದನ್ನೂ ಓದಿ: ಪ್ರಯಾಣಿಕರಿಗೆ ರೈಲ್ವೆ ಇಲಾಖೆಯಿಂದ ಹಬ್ಬದ ಗಿಫ್ಟ್: ಮಂಗಳೂರು ಸೇರಿ 4 ವಿಶೇಷ ರೈಲುಗಳ ಸೇವೆ ನವೆಂಬರ್‌ವರೆಗೆ ವಿಸ್ತರಣೆ

“ಆಳ್ವಾಸ್ ಶಿಕ್ಷಣ ಸಂಸ್ಥೆಯು ಇಂಟರ್ನ್‌ಶಿಪ್‌ಗೆ ಹೆಚ್ಚಿನ ಆದ್ಯತೆ ನೀಡುತ್ತದೆ. ವೀಸಾ ಕಂಪನಿಯಲ್ಲಿ ಸಿಕ್ಕ ಇಂಟರ್ನ್‌ಶಿಪ್‌ ಅವಕಾಶವೇ ನನ್ನಲ್ಲಿ ಆತ್ಮವಿಶ್ವಾಸ ಹೆಚ್ಚಿಸಿ ಈ ಡ್ರೀಮ್ ಜಾಬ್ ಸಿಗಲು ಕಾರಣವಾಯಿತು.” ಎಂದು ಸೃಷ್ಟಿ ಹೇಳಿದ್ದಾರೆ. “ಸರಿಯಾದ ಮಾರ್ಗದರ್ಶನ ಹಾಗೂ ಅವಕಾಶಗಳು ಸಿಕ್ಕರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳೂ ಸಹ ಜಾಗತಿಕ ಮಟ್ಟದ ತಂತ್ರಜ್ಞಾನ ಕ್ಷೇತ್ರದಲ್ಲಿ ಅಗ್ರಸ್ಥಾನಕ್ಕೇರಬಹುದು ಎಂಬುದಕ್ಕೆ ಸೃಷ್ಟಿ ಅವರ ಸಾಧನೆಯೇ ಉದಾಹರಣೆ.” ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರು ಡಾ. ಎಂ. ಮೋಹನ್ ಆಳ್ವ ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್